ಮಂಗನ ಕಾಯಿಲೆ ವೈರಸ್ ಹಬ್ಬಿದ್ದು ಎಲ್ಲಿಂದ? ಮೃತಪಟ್ಟವರ ಟ್ರ್ಯಾಕ್​ನಿಂದ ಮೂಲ ಪತ್ತೆ

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರದಿಂದ ಕಸರತ್ತು ಮಾಡಲಾಗುತ್ತಿದೆ. ಸದ್ಯ ಈ ಕುರಿತಾಗಿ ಇಂದು ಉತ್ತನ ಅಧಿಕಾರಿಗಳ ಸಭೆ ಮಾಡಲಾಗುತ್ತಿದೆ. ಸಭೆಯಲ್ಲಿ ಮಂಗನ ಕಾಯಿಲೆ ವೈರಸ್ ಹಬ್ಬಿದ್ದು ಎಲ್ಲಿಂದ? ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳು ಸೇರಿದಂತೆ ಹಲವು ವಿಚಾರಗಳನ್ನು ಚರ್ಚೆ ಮಾಡಲಾಗುತ್ತಿದೆ.

ಮಂಗನ ಕಾಯಿಲೆ ವೈರಸ್ ಹಬ್ಬಿದ್ದು ಎಲ್ಲಿಂದ? ಮೃತಪಟ್ಟವರ ಟ್ರ್ಯಾಕ್​ನಿಂದ ಮೂಲ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Feb 19, 2024 | 6:18 PM

ಬೆಂಗಳೂರು, ಫೆಬ್ರವರಿ 19: ಮಲೆನಾಡು ಭಾಗದಲ್ಲಿ ಅದರಲ್ಲಿಯೂ ಶಿವಮೊಗ್ಗ ಮತ್ತು ರಾಯಚೂರು ಭಾಗದಲ್ಲಿ ಈ ಮಂಗನ ಕಾಯಿಲೆ (monkey disease) ಕಂಡುಬರುತ್ತದೆ. ಈ ಮಂಗನ ಕಾಯಿಲೆಗೆ ಸಾಕಷ್ಟು ಜನರು ಒಳಗಾಗುತ್ತಿದ್ದು, ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ 18 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಹೀಗಾಗಿ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಇಂದು ಮಹತ್ವದ ಸಭೆ ನಡೆಸುತ್ತಿದೆ. ಸದ್ಯ ಈ ಸಭೆಯಲ್ಲಿ ಭಾಗಿಯಾಗಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ವೈರಸ್​ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆಗೆ ಆರೋಗ್ಯಾಧಿಕಾರಿ ಉತ್ತರಿಸಿದ್ದು, ಕುಚಲು ಎನ್ನುವ ಭಾಗದಲ್ಲಿ ಮಂಗಗಳ ಸಾವಾಗಿದೆ, ಅಲ್ಲಿಂದಲೇ ವೈರಸ್ ಹಬ್ಬಿದೆ. ಮೃತಪಟ್ಟವರ ಟ್ರ್ಯಾಕ್ ಮಾಡಿದಾಗ ಕುಚಲು ಗ್ರಾಮಕ್ಕೆ ಹೋಗಿದ್ದು ಗೊತ್ತಾಗಿದೆ ಎಂದು ಹೇಳಿದ್ದಾರೆ.

ಮಂಗನ ಕಾಯಿಲೆ ಬಂದರೆ ಟೆಸ್ಟ್​ ಮೂಲಕ ಕಂಡು ಹಿಡಿಯಬೇಕು. ಈ ಹಿನ್ನೆಲೆ ಸಾಗರ ಕ್ಷೇತ್ರಕ್ಕೆ ಲ್ಯಾಬ್ ಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಬೇಡಿಕೆಯಿಟ್ಟಿದ್ದಾರೆ. ಆದಷ್ಟು ಬೇಗ ಸಿಬ್ಬಂದಿ ನೇಮಕ ಮಾಡುವಂತೆ ಸಭೆಯಲ್ಲಿ ಒತ್ತಾಯ ಮಾಡಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಕೊಪ್ಪ ತಾಲೂಕಿನಲ್ಲಿ ಒಂದೇ ದಿನ 9 ಜನರಿಗೆ ಮಂಗನ ಕಾಯಿಲೆ

ಮಂಗನಕಾಯಿಲೆ ಕೆಲವೊಬ್ಬರಿಗೆ ಮಾತ್ರ ಹೆಚ್ಚು ಘಾಸಿಗೊಳಿಸುತ್ತೆ. ವ್ಯಾಕ್ಸಿನ್ ಸಿಕ್ಕರೆ ಮಂಗನಕಾಯಿಲೆ ನಿಯಂತ್ರಣ ಮಾಡಬಹುದು ಎಂದು ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗನ‌ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರದಿಂದ ಕಸರತ್ತು 

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರದಿಂದ ಕಸರತ್ತು ಮಾಡಲಾಗುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಮಂಗನ ಕಾಯಿಲೆ ತಡೆಗಟ್ಟಲು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ಮಾಡಲಾಗುತ್ತಿದೆ. ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕ‌ರಾದ ರಾಜೇ ಗೌಡ, ನಯನ ಮೋಟಮ್ಮ ಸೇರಿದಂತೆ ಮಲೆನಾಡು ಭಾಗದ ಶಾಸಕರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: Monkeypox: ಮಂಗನ ಕಾಯಿಲೆಯಿಂದ ಯಾರಿಗೆ ಅಪಾಯ ಜಾಸ್ತಿ?; ಮಂಕಿಫಾಕ್ಸ್​ನಿಂದ ಪಾರಾಗುವುದು ಹೇಗೆ?

ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಎನ್​​ಹೆಚ್​​ಎಂನ ನವೀನ್ ಭಟ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಭೀಮಣ್ಣ ನಾಯಕ್, ಗೋಪಾಲ ಕೃಷ್ಣ ಬೇಳೂರು ಭಾಗಿಯಾಗಿದ್ದಾರೆ.

ಮಂಗನ‌ ಕಾಯಿಲೆ ಹೆಚ್ಚಿರುವ ಜಿಲ್ಲೆಗಳಲ್ಲಿ ನಿಯಂತ್ರಣ ಸಂಬಂಧ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಯಾವೆಲ್ಲ ಭಾಗದಲ್ಲಿ ಹೆಚ್ಚಾಗುತ್ತಿದೆ. ನಿಯಂತ್ರಣ ಕ್ರಮಗಳು ಹಾಗೂ ಚಿಕಿತ್ಸೆ ಹಾಗೂ ಪರೀಕ್ಷೆಗೆ ಲ್ಯಾಬ್ ಬಗ್ಗೆ ಚರ್ಚೆ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ