ರಾಜ್ಯದಲ್ಲಿ ಹೆಚ್ಚಾದ ಚಳಿಯ ವಾತಾವರಣ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಮಾಂಡೌಸ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮೈ ಕೊರೆಯುವ ಚಳಿ ಶುರುವಾಗಿದೆ. ಇದರಿಂದ ಎದುರಾಗುವ ಆರೋಗ್ಯ ಸಮಸ್ಯೆಯಿಂದ ದೂರ ಇರಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಬೆಂಗಳೂರು: ಕಳೆದ ಮೂರು-ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆ, ಮೈ ನಡುಗಿಸುವ ಚಳಿಗೆ ಬೆಂಗಳೂರಿನಲ್ಲಿ ಅನೇಕ ಮಂದಿ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಕ್ಕಳಲ್ಲಿ ಹೆಚ್ಚಾಗಿ ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಚಳಿಯ ವಾತಾವರಣ ಹಿನ್ನೆಲೆ ಆರೋಗ್ಯ ಇಲಾಖೆ (Health Department )ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸುಲಭವಾಗಿ ಜೀರ್ಣವಾಗುವ, ಬಿಸಿಬಿಸಿ ಆಹಾರ ಸೇವಿಸಬೇಕು. ಯಾವಾಗಲೂ ಸ್ವೆಟರ್, ಸಾಕ್ಸ್ ಧರಿಸಬೇಕು. ಮನೆಯ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ ಎಂದು ಸೂಚಿಸಿದೆ.
ಮಾಂಡೌಸ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮೈ ಕೊರೆಯುವ ಚಳಿ ಶುರುವಾಗಿದೆ. ಇದರಿಂದ ಎದುರಾಗುವ ಆರೋಗ್ಯ ಸಮಸ್ಯೆಯಿಂದ ದೂರ ಇರಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ; ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಮುಂಬರುವ ಚಳಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು ( ನವಜಾತ ಶಿಶುಗಳು ಸೇರಿದಂತೆ), ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಕೆಳಗಿನ ಸಲಹೆಗಳನ್ನು ಪಾಲಿಸಬೇಕು.
- ಯಾವಾಗಲೂ ಬೆಚ್ಚಗಿನ ನೀರು ಕುಡಿಯುವುದು
- ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು
- ಯಾವಾಗಲೂ sweater, ಸಾಕ್ಸ್ ಹಾಗೂ ಕೈಗವಸುಗಳನ್ನು ಧರಿಸುವುದು ಹಾಗೂ ಮನೆಯ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ
- ಸ್ನಾನಕ್ಕೆ ಬಿಸಿ ನೀರು / ಬೆಚ್ಚಗಿನ ನೀರನ್ನು ಉಪಯೋಗಿಸುವುದು
- ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ
- ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳಿ ಅಥವಾ ಸ್ಕಾರ್ಫ್ ಕಟ್ಟಕೊಳ್ಳ ಹಾಗೂ ಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು.
- ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳರುವರಿಂದ ದೂರವಿರಬೇಕು
- ಮೊಣಕೈ ಒಳಗೆ ಸೀನುವುದು, ಕೆಮ್ಮುವುದು, ಅಥವಾ ಸೀನುವಾಗ, ಕೆಮ್ಮುವಾಗ ಟಿಶ್ಯೂ ಅಥವಾ ಕರವಸ್ತ್ರವನ್ನು ಬಳಸಬೇಕು
- ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯಬೇಕು
- ಜ್ವರ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳಿದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು.
- ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು.
- ತಣ್ಣಗಿನ ಪಾನೀಯಗಳು , ಐಸ್ ಕ್ರೀಂಗಳನ್ನು ಸೇವಿಸಬಾರದು.
- ರೆಫ್ರಿಜರೇಟರ್‌ನ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು.
- ಮಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು.
- ಹೊರಾಂಗಣ ಪ್ರವಾಸಗಳನ್ನು ಆದಷ್ಟು ನಿರ್ಭಂಧಿಸಿ ( ವಿಶೇಷವಾಗಿ ಗಿರಿಧಾಮಗಳಿಗೆ ವಾರಾಂತ್ಯದ ಪ್ರವಾಸ ಹೋಗುವುದು ಇತ್ಯಾದಿ).
- ಮಸಾಲಾಯುಕ್ತ ಪದಾರ್ಥಗಳು / ಜಂಕ್ ಫುಡ್‌ಗಳನ್ನು ಸೇವಿಸಬಾರದು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪ್ರಸ್ತುತ, ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಮತ್ತು ಅತಿ ಕಡಿಮೆ ತಾಪಮಾನವು ವರದಿಯಾಗಿದ್ದು ಹಾಗೂ ಮುಂಬರುವ ಚಳಿಗಾಲದ ದಿನಗಳಲ್ಲಿ ಎಲ್ಲ ಸಾರ್ವಜನಿಕರು ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು. pic.twitter.com/qMvtl6WggI
— K'taka Health Dept (@DHFWKA) December 12, 2022
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:03 pm, Mon, 12 December 22