ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

|

Updated on: Jun 08, 2024 | 4:08 PM

ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆದೇಶವೊಂದನ್ನು ಹೊರಡಿಸಿದೆ. ಅದರನ್ವಯ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಜೊತೆಗೆ ಇನ್ನಿತರ ಕ್ರಮಗಳನ್ನು ಸೂಚಿಸಲಾಗಿದೆ. ಇದನ್ನು ತಪ್ಪಿದರೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದು ಆದೇಶಿಸಲಾಗಿದೆ.

ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ
ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ
Follow us on

ಬೆಂಗಳೂರು, ಜೂ.08: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ (Health Department)ಯು ಆದೇಶವನ್ನು ಹೊರಡಿಸಿದೆ. ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME (KARNATAKA PRIVATE MEDICAL ESTABLISHMENT ASSOCIATION) ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ.

ಬಣ್ಣ ಸಂಹಿತೆ ಕಡ್ಡಾಯ; ತಪ್ಪಿದರ ಕಾನೂನು ಕ್ರಮ

ಇಷ್ಟೇ ಅಲ್ಲದೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ:ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?

ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Sat, 8 June 24