AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ನಡುವೆ ಗೊಂದಲವಿಲ್ಲ, ಮಕ್ಕಳ ಬಗ್ಗೆ ತೀವ್ರ ನಿಗಾ: ಆರೋಗ್ಯ ಸಚಿವ ಸುಧಾಕರ್

ಬೇಗ ಗುಣಮುಖರಾಗುವಂತೆ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಬೇಕು. ಹೋಮ್​ ಐಸೋಲೇಷನ್​ ಕಿಟ್​ಗಳನ್ನು ತಲುಪಿಸುವ ವ್ಯವಸ್ಥೆ ಮಾಡಬೇಕಿದೆ

ಸಚಿವರ ನಡುವೆ ಗೊಂದಲವಿಲ್ಲ, ಮಕ್ಕಳ ಬಗ್ಗೆ ತೀವ್ರ ನಿಗಾ: ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ
TV9 Web
| Edited By: |

Updated on:Jan 17, 2022 | 7:38 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊವಿಡ್ ಪರಿಸ್ಥಿತಿ ನಿರ್ವಹಣೆಗಾಗಿ ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಾರ್ಯಪಡೆ ಸದಸ್ಯರಾಗಿರುವ ನಾಲ್ವರೂ ಸಚಿವರಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ತಮ್ಮ ಹಾಗೂ ಆರೋಗ್ಯ ಸಚಿವ ಆರ್.ಅಶೋಕ್ ಅವರ ನಡುವೆ ವೈಮನಸ್ಯವಿದೆ, ಇದೇ ಕಾರಣಕ್ಕೆ ಇಬ್ಬರೂ ಪ್ರತ್ಯೇಕವಾಗಿ ಮಾಧ್ಯಮ ಪ್ರತಿನಿಧಿಗಳೊಡನೆ ಮಾತನಾಡಿದ್ದಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಮತ್ತೊಂದು ಸಭೆ ಇದ್ದ ಕಾರಣ ಹಿರಿಯ ಸಚಿವರಾದ ಅಶೋಕ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರೆ. ಇದಕ್ಕೆ ವಿಪರೀತ ಅರ್ಥ ಕಲ್ಪಿಸುವುದು ಬೇಡ ಎಂದರು.

ಸಭೆಯ ಕುರಿತು ಮಾಹಿತಿ ನೀಡಿದ ಸಚಿವರು, ಪಾಸಿಟಿವ್ ಬಂದಿರುವವರಿಗೆ ಗಾಬರಿ ಬರಿಸುವುದು ಬೇಡ. ಅಂಥವರಿಗೆ ಸೂಕ್ತ ಮೆಡಿಕಲ್ ಕಿಟ್ ಕೊಡಲು ವ್ಯವಸ್ಥೆ ಮಾಡಲಾಗುವುದು. ಸದ್ಯಕ್ಕೆ ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗದರ್ಶನದಲ್ಲಿ ಪರೀಕ್ಷೆಗಳನ್ನು ಮುಂದುವರೆಸುತ್ತೇವೆ ಎಂದು ವಿವರಿಸಿದರು.

ನಾಲ್ಕೂ ಇಲಾಖೆಗಳು ಕೊವಿಡ್​ಗೆ ಸಂಬಂಧಿಸಿದಂತೆಯೇ ಕೆಲಸ ಮಾಡುತ್ತವೆ. ಇವರ ಪೈಕಿ ಯಾರು ಬೇಕಾದರೂ ಮಾತನಾಡಬಹುದು. ನಮ್ಮ ಹಿರಿಯ ಸಚಿವ ಅಶೋಕ್ ಅವರು ಇವತ್ತಿನ ಸಭೆ ಬಗ್ಗೆ ಮಾತಾಡಿದ್ದಾರೆ. ನಾನು ಕೆಲವು ಅಂಶಗಳ ಬಗ್ಗೆ ಮಾತಾಡಿದ್ದೇನೆ ಅಷ್ಟೇ. ಹೋಟೆಲ್ ಉದ್ಯಮಿಗಳು ವೀಕೆಂಡ್ ಕರ್ಫ್ಯೂ ಬೇಡ ಎಂದು ವಿರೋಧಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ಮುಂದಿನ ಶುಕ್ರವಾರದ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಮಕ್ಕಳ ಬಗ್ಗೆ ವಿಶೇಷವಾಗಿ ನಿಗಾ ಇರಿಸಲಾಗುವುದು. ಮಕ್ಕಳಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಗ್ಗೆ ನಿಗಾ ಇರಿಸಲಾಗಿದೆ ಎಂದರು.

ಪಾಸಿಟಿವ್ ಬಂದು ಮನೆಯಲ್ಲಿ ಚಿಕಿತ್ಸೆ ಪಡೆವವರ ಮೇಲೆ ನಿಗಾ ಇರಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಹೋಮ್ ಐಸೋಲೇಷನ್​ನಲ್ಲಿರುವವರಿಗೆ ಆತ್ಮಸ್ಥೈರ್ಯ ತುಂಬಿ, ಬೇಗ ಗುಣಮುಖರಾಗುವಂತೆ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಬೇಕು. ಹೋಮ್​ ಐಸೋಲೇಷನ್​ ಕಿಟ್​ಗಳನ್ನು ತಲುಪಿಸುವ ವ್ಯವಸ್ಥೆ ಮಾಡಬೇಕಿದೆ. ಮುಖ್ಯಮಂತ್ರಿ ಸೂಚನೆಯಂತೆ ಆದಷ್ಟು ಬೇಗ ಕಿಟ್​ ಒದಗಿಸುತ್ತೇವೆ. ಕೊರೊನಾ ಸೋಂಕು ಪರಿಹಾರಕ್ಕೆ ಸ್ವಯಂಸೇವಕರನ್ನು ಬಳಸಿಕೊಂಡು ಕಾರ್ಯಮಗ್ನರಾಗಲು ಸೂಚನೆ ನೀಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಮುನ್ನಚ್ಚರಿಕೆ ವಹಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದರು.

ಕೊರೊನಾ ಸೋಂಕು ನಿಯಂತ್ರಣ ಮತ್ತು ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಐಸಿಎಂಆರ್​ ನಿರ್ದೇಶನದಂತೆ ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತೇವೆ. ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಪರಿಸ್ಥಿತಿ ಉತ್ತಮವಾಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ, ಸಾವಿನ ಪ್ರಮಾಣ ಕಡಿಮೆಯಿದೆ. ಮಕ್ಕಳ ಆರೋಗ್ಯದ ಮೇಲೆ ನಿಗಾವಹಿಸುತ್ತೇವೆ. ಮುಂದಿನ ಕ್ರಮಗಳ ಬಗ್ಗೆ ಶುಕ್ರವಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು.

ಇದನ್ನೂ ಓದಿ: Corona Review Meeting: ಜನವರಿ 25ರ ಹೊತ್ತಿಗೆ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತೀವ್ರ: ಸಚಿವ ಆರ್ ಅಶೋಕ್ ಇದನ್ನೂ ಓದಿ: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ ಕೊರೊನಾ ಪಾಸಿಟಿವ್, ಚೇತರಿಸಿಕೊಂಡ ಸಿಎಂ ಬೊಮ್ಮಾಯಿಗೆ ನೆಗೆಟಿವ್

Published On - 7:32 pm, Mon, 17 January 22

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್