ಸಿಎಂ ಸಭೆ ಬೆನ್ನಲ್ಲೇ ಇಂದು ಅಧಿಕಾರಿಗಳ ಸಭೆ; ಕೊರೊನಾ 4ನೇ ಅಲೆ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಸಚಿವ ಕೆ.ಸುಧಾಕರ್
ಕೊರೊನಾ 4ನೇ ಅಲೆ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ, ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಕೊರೊನಾ ಬಗ್ಗೆ ಜನರು ಮುಂಜಾಗ್ರತಾ ಕ್ರಮ ವಹಿಸಬೇಕು. ಎಲ್ಲರೂ ಸರಳ ಮಾರ್ಗಸೂಚಿ ಪಾಲಿಸಿದರೆ ಸಮಸ್ಯೆಯಾಗಲ್ಲ. -ಸಚಿವ ಕೆ.ಸುಧಾಕರ್
ಬೆಂಗಳೂರು: ರಾಜ್ಯದಲ್ಲೂ ಮಹಾಮಾರಿ ಕೊರೊನಾ ಸೋಂಕಿನ 4ನೇ ಅಲೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಭೆ ಬೆನ್ನಲ್ಲೇ ಇಂದು ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು, ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ವರ್ಚುವಲ್ ಸಭೆ ನಡೆಯಲಿದೆ. ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣ ಕ್ರಮದ ಬಗ್ಗೆ, ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಇನ್ನು ಮತ್ತೊಂದು ಕಡೆ ಕೊರೊನಾ ಆತಂಕದ ಬಗ್ಗೆ ಆರೋಗ್ಯ ಸಚಿವ ಕೆ.ಸುಧಾಕರ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ 4ನೇ ಅಲೆ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ, ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಕೊರೊನಾ ಬಗ್ಗೆ ಜನರು ಮುಂಜಾಗ್ರತಾ ಕ್ರಮ ವಹಿಸಬೇಕು. ಎಲ್ಲರೂ ಸರಳ ಮಾರ್ಗಸೂಚಿ ಪಾಲಿಸಿದರೆ ಸಮಸ್ಯೆಯಾಗಲ್ಲ. ನಿನ್ನೆ ಸಿಎಂ ಜತೆ ಸಭೆ ನಡೆಸಿ ಕೆಲವು ಮಾರ್ಗಸೂಚಿ ಹೊರಡಿಸಿದ್ದೇವೆ. ಕೆಲವರು ವಿಶ್ವದಲ್ಲೇ ಕೊರೊನಾ ಸೋಂಕಿಲ್ಲ ಎಂದುಕೊಂಡಿದ್ದಾರೆ. ನಮ್ಮ ರಾಜ್ಯಕ್ಕೂ ಕೊರೊನಾ 4ನೇ ಅಲೆ ಬರುವ ಬಗ್ಗೆ ವರದಿಯಿದೆ. ಅಂತಾರಾಜ್ಯ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸಲಾಗುವುದು. ರಾಜ್ಯದ ಎಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಹಬ್ಬಗಳನ್ನು ಮಾಡಬೇಡಿ ಎಂದು ಯಾರೂ ಹೇಳುವುದಿಲ್ಲ. ಯಾವುದೇ ಹಬ್ಬಗಳಿಗೆ ಸರ್ಕಾರ ನಿರ್ಬಂಧ ವಿಧಿಸಿಲ್ಲ. ಕೊರೊನಾದಿಂದ ರಕ್ಷಿಸಿಕೊಳ್ಳಲು ಎಚ್ಚರಿಕೆಯಿಂದ ಆಚರಿಸಬೇಕು ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.
Thothapuri Movie: ‘ತೋತಾಪುರಿ’ ರುಚಿಗೆ ಪ್ರೇಕ್ಷಕರು ಫಿದಾ; ‘ದೇಸಿ ಫೈಲ್ಸ್’ ಎಂದು ಹೊಗಳಿಕೆ
Published On - 11:50 am, Tue, 26 April 22