ಕೊವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದಿದ್ದರೆ ಕ್ರಮಕೈಗೊಳ್ಳುತ್ತೇವೆ -ಆರೋಗ್ಯ ಸಚಿವ ಡಾ. ಸುಧಾಕರ್ ಎಚ್ಚರಿಕೆ

ಸೋಂಕಿತರಿಗೆ ಚಿಕಿತ್ಸೆ ನೀಡದ ಬಗ್ಗೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ದೂರುಗಳು ಬಂದಿವೆ. ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ.

ಕೊವಿಡ್ ಸೋಂಕಿತರಿಗೆ  ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದಿದ್ದರೆ ಕ್ರಮಕೈಗೊಳ್ಳುತ್ತೇವೆ -ಆರೋಗ್ಯ ಸಚಿವ ಡಾ. ಸುಧಾಕರ್ ಎಚ್ಚರಿಕೆ
ಸಚಿವ ಡಾ. ಕೆ ಸುಧಾಕರ್
Follow us
TV9 Web
| Updated By: ಆಯೇಷಾ ಬಾನು

Updated on:Aug 11, 2022 | 9:23 PM

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ ಸೋಂಕಿತರಿಗೆ(Covid Patients) ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನೀಡದಿದ್ದರೆ ಕೆಪಿಎಂಇ ಕಾಯ್ದೆಯಡಿ ಕ್ರಮಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್(Health Minister Dr k Sudhakar) ಹೇಳಿದ್ದಾರೆ.

ಸೋಂಕಿತರಿಗೆ ಚಿಕಿತ್ಸೆ ನೀಡದ ಬಗ್ಗೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ದೂರುಗಳು ಬಂದಿವೆ. ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಖಾಸಗಿ ಆಸ್ಪತ್ರೆಯ ಐಸೋಲೇಟ್ ವಾರ್ಡ್ಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಲೇಬೇಕು ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆಕಾಣುತ್ತಿದೆ. ಇದರ ನಡುವೆ ಕೆಲ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಲು ಹಿಂದೇಟು ಹಾಕುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರಿಗೆ ದೂರುಗಳು ಹೋಗಿದ್ದು ಇದರ ಬಗ್ಗೆ ಕ್ರಮಕೈಗೊಳ್ಳಲು ಸಚಿವ ಡಾ.ಸುಧಾಕರ್ ಮುಂದಾಗಿದ್ದಾರೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡದಿದ್ದರೆ ಕೆಪಿಎಂಇ ಕಾಯ್ದೆಯಡಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಇಂದು 1,691 ಜನರಿಗೆ ಕೊರೊನಾ ಸೋಂಕು ದೃಢ

ಇಂದು ರಾಜ್ಯದಲ್ಲಿ ಹೊಸದಾಗಿ 1,691 ಜನರಲ್ಲಿ ಸೋಂಕು ಪತ್ತೆಯಾಗಿದೆ. ಹಾಗೂ ಬೆಂಗಳೂರಿನಲ್ಲಿಂದು 1,225 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 6 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಬೆಳಗಾವಿಯಲ್ಲಿ ತಲಾ ಒಬ್ಬರು ಬಲಿಯಾಗಿದ್ದಾರೆ. ಧಾರವಾಡ, ಕೊಪ್ಪಳ, ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 10,054 ಇದೆ. ಹಾಗೂ ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್​ ಶೇಕಡಾ 6.09ರಷ್ಟಿದೆ.

Published On - 9:04 pm, Thu, 11 August 22