AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ದಿನಕ್ಕೆ BDA ಅಧ್ಯಕ್ಷನಾದ ದೃಷ್ಟಿಹೀನ ಬಾಲಕ: ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿ

ಜ್ಯೋತಿ ಸೇವಾ ಅಂಧರ ಶಾಲೆಯ ರಾಹುಲ್ ಎಂಬ ದೃಷ್ಟಿಹೀನ ಬಾಲಕನನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಅಧ್ಯಕ್ಷ ಎನ್.ಎ. ಹ್ಯಾರಿಸ್ ಸಾಂಕೇತಿಕವಾಗಿ ಒಂದು ದಿನದ ಬಿಡಿಎ ಅಧ್ಯಕ್ಷರನ್ನಾಗಿ ಮಾಡಿ ಆತ್ಮವಿಶ್ವಾಸ ತುಂಬಿದರು. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದು, ದೊಡ್ಡ ಕನಸು ಕಾಣುವಂತೆ ಪ್ರೇರೇಪಿಸುವುದು ಮತ್ತು ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕುವಂತೆ ಉತ್ತೇಜಿಸುವ ಉದ್ದೇಶದಿಂದ ಬಿಡಿಎ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.

ಒಂದು ದಿನಕ್ಕೆ BDA ಅಧ್ಯಕ್ಷನಾದ ದೃಷ್ಟಿಹೀನ ಬಾಲಕ: ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿ
ಒಂದು ದಿನಕ್ಕೆ BDA ಅಧ್ಯಕ್ಷನಾದ ದೃಷ್ಟಿಹೀನ ಬಾಲಕImage Credit source: BDA X Page
ಪ್ರಸನ್ನ ಹೆಗಡೆ
|

Updated on: Oct 08, 2026 | 12:07 PM

Share

ಬೆಂಗಳೂರು, ಅಕ್ಟೋಬರ್​​ 08:  ಅಪರೂಪದ ಸನ್ನಿವೇಶಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಸಾಕ್ಷಿಯಾಗಿದ್ದು, ದೃಷ್ಟಿಹೀನ ಬಾಲಕನೊಬ್ಬ ಒಂದು ದಿನದ ಮಟ್ಟಿಗೆ BDA ಅಧ್ಯಕ್ಷನಾಗಿದ್ದ!. ಹೌದು, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದು, ದೊಡ್ಡ ಕನಸು ಕಾಣುವಂತೆ ಪ್ರೇರೇಪಿಸುವುದು ಮತ್ತು ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕುವಂತೆ ಉತ್ತೇಜಿಸುವ ಉದ್ದೇಶದಿಂದ ಜ್ಯೋತಿ ಸೇವಾ ಅಂಧರ ಶಾಲೆಯ 65 ದೃಷ್ಟಿಹೀನ ಮಕ್ಕಳನ್ನು ವಿಶೇಷ ಅತಿಥಿಗಳಾಗಿ BDA ಕಚೇರಿಗೆ ಆಹ್ವಾನಿಸಲಾಗಿತ್ತು. ಈ ವೇಳೆ BDA ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರು ರಾಹುಲ್ ಎಂಬ ದೃಷ್ಟಿಹೀನ ವಿದ್ಯಾರ್ಥಿಯನ್ನು ತಮ್ಮ ಅಧಿಕೃತ ಕುರ್ಚಿಯಲ್ಲಿ ಕುಳಿತುಕೊಳ್ಳುವಂತೆ ಸ್ವತಃ ಆಹ್ವಾನಿಸಿದರು. ಈ ಮೂಲಕ ಸಾಂಕೇತಿಕವಾಗಿ ರಾಹುಲ್ ಅವರನ್ನು ಒಂದು ದಿನದ BDA ಅಧ್ಯಕ್ಷರನ್ನಾಗಿ ಮಾಡಿದರು.

ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ

ಬಳಿಕ ಮಾತನಾಡಿದ ಎನ್.ಎ. ಹ್ಯಾರಿಸ್, ಎದೆಗುಂದಬೇಡಿ. ಈ ಸಮಾಜದಲ್ಲಿ ನೀವು ಎಲ್ಲರಂತೆ ಸಮಾನರು. ನಾವು ನಿಮ್ಮೊಂದಿಗಿದ್ದೇವೆ, ಸರ್ಕಾರವೂ ನಿಮ್ಮೊಂದಿಗಿದೆ. ದೃಢಸಂಕಲ್ಪದಿಂದ ವಿದ್ಯಾಭ್ಯಾಸ ಮಾಡಿ, ಜೀವನದಲ್ಲಿ ಅತ್ಯುನ್ನತ ಸ್ಥಾನಗಳನ್ನು ತಲುಪಿ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದು ಮತ್ತು ಯಾವುದೇ ಮಿತಿಯಿಲ್ಲದೆ ಕನಸು ಕಾಣುವಂತೆ ಪ್ರೇರೇಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಸಮಾಜದ ಅತ್ಯುನ್ನತ ಸ್ಥಾನಗಳನ್ನು ತಲುಪುವ ಸಾಮರ್ಥ್ಯ ತಮ್ಮಲ್ಲಿಯೂ ಇದೆ ಎಂಬುದನ್ನು ಮಕ್ಕಳು ಸ್ವತಃ ಅನುಭವಿಸಬೇಕು ಎಂಬುದು ನಮ್ಮ ಆಶಯ ಎಂದು BDA ಆಯುಕ್ತ ಮೇಜರ್ ಪಿ. ಮಣಿವಣ್ಣನ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ 5 ನಗರ ಪೊಲೀಸ್ ಕಮಿಷನರೇಟ್‌ಗಳ ರಚನೆಗೆ ಸಿಬ್ಬಂದಿ ಕೊರತೆ: 5000 ಹುದ್ದೆಗಳಿಗೆ ಇನ್ನೂ ದೊರೆತಿಲ್ಲ ಅನುಮೋದನೆ

ಇನ್ನು ಬಿಡಿಎ ಕಚೇರಿಗೆ ಭೇಟಿ ಸಂಬಂಧ ವಿದ್ಯಾರ್ಥಿಗಳೂ ಸಂತಸ ವ್ಯಕ್ತಪಡಿಸಿದ್ದಾರೆ. ನಾವು ಈ ಹಿಂದೆ ಎಂದಿಗೂ ಸರ್ಕಾರಿ ಕಚೇರಿಗೆ ಭೇಟಿ ನೀಡಿರಲಿಲ್ಲ. ಆಡಳಿತ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದೂ ನಮಗೆ ತಿಳಿದಿರಲಿಲ್ಲ. ಆದರೆ ಇಂದು ನಾವೂ ಹಿರಿಯ ಅಧಿಕಾರಿಗಳಾಗಬಹುದು, ಸಮಾಜಕ್ಕೆ ಸೇವೆ ಸಲ್ಲಿಸಬಹುದು ಎಂಬ ಆತ್ಮವಿಶ್ವಾಸ ಬಂದಿದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ. BDA ಅಧಿಕಾರಿಗಳು ಮಕ್ಕಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯುವುದರ ಜೊತೆಗೆ, ಅವರ ಮಾತುಗಳನ್ನು ಆಲಿಸಿ ಪ್ರೋತ್ಸಾಹಿಸುವ ಮೂಲಕ ಮಾದರಿಯಾದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?