AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಮೆಜೆಸ್ಟಿಕ್, ಮಾರುಕಟ್ಟೆ, ವಿಜಯನಗರ ಸೇರಿ ಬೆಂಗಳೂರಿನ ಬಹುತೇಕ ಕಡೆ ರಾತ್ರಿಯಿಡೀ ಮಳೆ: ಸಂಚಾರಕ್ಕೆ ಅಡಚಣೆ

ಬೆಂಗಳೂರು ಮಳೆ ಹಾಗೂ ಸಂಚಾರ ಸಲಹೆ: ಬೆಂಗಳೂರಿನಲ್ಲಿ ರಾತ್ರಿಯಿಡೀ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ವಿಜಯನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಮಳೆ ನೀರು ನಿಂತಿರುವುದರಿಂದ ನಗರದ ಹಲವು ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿದೆ. ಟ್ರಾಫಿಕ್ ಸಲಹೆ ಇಲ್ಲಿದೆ.

Bangalore Rains: ಮೆಜೆಸ್ಟಿಕ್, ಮಾರುಕಟ್ಟೆ, ವಿಜಯನಗರ ಸೇರಿ ಬೆಂಗಳೂರಿನ ಬಹುತೇಕ ಕಡೆ ರಾತ್ರಿಯಿಡೀ ಮಳೆ: ಸಂಚಾರಕ್ಕೆ ಅಡಚಣೆ
Bengaluru Rain And Traffic AdvisoryImage Credit source: Bengaluru Traffic Police
ಗಣಪತಿ ಶರ್ಮಾ
|

Updated on:Sep 29, 2026 | 7:28 AM

Share

ಬೆಂಗಳೂರು, ಸೆಪ್ಟೆಂಬರ್ 29: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಶುರುವಾದ ಮಳೆ ಇಡೀ ರಾತ್ರಿ ಗುಡುಗು ಸಹಿತ ಧಾರಾಕಾರ ಸುರಿದಿದೆ. ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ, ಶಾಂತಿನಗರ, ವಿಜಯನಗರ, ಕೆಂಗೇರಿ, ದೀಪಾಂಜಲಿನಗರ, ರಾಜಾಜಿನಗರ ಸೇರಿದಂತೆ ನಗರದ ಬಹುತೇಕ ಕಡೆ ಭಾರಿ ಮಳೆ ಸುರಿದಿದೆ. ಅಂಜನಾಪುರ, ಗೊಟ್ಟಿಗೆರೆ, ಅವಳಹಳ್ಳಿ, ಸೌಧಾಮಿನಿ, ಬನಶಂಕರಿ, ಕೋಣನಕುಂಟೆ, ಆರ್‌ಬಿಐ ಲೇಔಟ್, ಕುಮಾರಸ್ವಾಮಿ ಲೇಔಟ್, ರಿಚ್‌ಮಂಡ್ ಸರ್ಕಲ್, ಎಂ.ಜಿ. ರಸ್ತೆ, ನಂದಿನಿ ಲೇಔಟ್, ಶೇಷಾದ್ರಿಪುರಂ ಹಾಗೂ ಮಲ್ಲೇಶ್ವರಂನಲ್ಲೂ ಮಳೆಯಾಗಿದೆ. ತಡರಾತ್ರಿ ಸುರಿದ ಭಾರಿ ಮಳೆಯಿಂದ ನಗರದ ಹಲವು ರಸ್ತೆಗಳು ಕೆರೆಯಂತಾಗಿವೆ.

ಬನಶಂಕರಿ, ಗಿರಿನಗರ, ಮಡಿವಾಳ, ಕೋಣನಕುಂಟೆ, ಆರ್​ಬಿಐ ಲೇಔಟ್, ಕುಮಾರಸ್ವಾಮಿ ಲೇಔಟ್ ಪ್ರದೇಶಗಳಲ್ಲೂ ಮಳೆ ಸುರಿದಿದೆ. ಭಾರಿ ಮಳೆ ಹಾಗೂ ರಸ್ತೆಗಳಲ್ಲಿ ನೀರು ನಿಂತ ಕಾರಣ ಸಂಚಾರವೂ ದುಸ್ತರವಾಗಿದೆ. ಮಳೆ ನೀರು ನಿಂತಿರುವ ಹಿನ್ನೆಲೆಯಲ್ಲಿ ಹಲವು ಕಡೆ ವಾಹನ ಸಂಚಾರ ನಿಧಾನಗತಿಯಲ್ಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು, ಏರಿಯಾ ವಿವರವನ್ನೂ ಎಕ್ಸ್ ತಾಣದ ಮೂಲಕ ಹಂಚಿಕೊಂಡಿದ್ದಾರೆ.

ಬೆಂಗಳೂರು ಮಳೆ: ಎಲ್ಲೆಲ್ಲಿ ಸಂಚಾರಕ್ಕೆ ಅಡ್ಡಿ, ಟ್ರಾಫಿಕ್?

ಕಾರ್ತಿಕನಗರದ ಬಳಿ ಮಳೆ ನೀರು ನಿಂತಿರುವುದರಿಂದ ಕಾಡುಬೀಸನಹಳ್ಳಿ ಕಡೆಗೆ ಸಂಚಾರ ನಿಧಾನಗತಿಯಲ್ಲಿದೆ. ವೆಂಕಟಾಲ ಬಳಿ ನೀರು ನಿಂತಿರುವುದರಿಂದ ನಗರದ ಕಡೆಗೆ ಹೋಗುವ ಮಾರ್ಗದಲ್ಲೂ ನಿಧಾನಗತಿಯ ಸಂಚಾರವಿದೆ. ಶ್ರೀನಿವಾಗಿಲು ಬಳಿ ಮಳೆ ನೀರು ನಿಂತಿರುವುದರಿಂದ ಏರ್‌ವ್ಯೂ ಕಡೆಗೆ ಹೋಗುವ ಮಾರ್ಗದ ಎರಡೂ ಬದಿಗಳಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿದೆ. ಥಣಿಸಂದ್ರದಲ್ಲಿ ನಾಗವಾರದ ಕಡೆಗೆ ಹೋಗುವ ಮಾರ್ಗದಲ್ಲೂ ಎರಡೂ ಬದಿಗಳಲ್ಲಿ ಸಂಚಾರ ನಿಧಾನವಾಗಿದೆ.

ಬೆಂಗಳೂರು ಟ್ರಾಫಿಕ್ ಪೊಲೀಸ್ ಎಕ್ಸ್ ಸಂದೇಶ

ಬಾಲಗೇರಿ ವೃತ್ತದ ಬಳಿ ನೀರು ನಿಂತಿರುವುದರಿಂದ ಕಾಡುಬೀಸನಹಳ್ಳಿ ಕಡೆಗೆ ಹೋಗುವ ಮಾರ್ಗದಲ್ಲಿ ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ವಡ್ಡರಪಾಳ್ಯ ಜಂಕ್ಷನ್ ಬಳಿ ಗೆದ್ದಲಹಳ್ಳಿ ಕಡೆಗೆ ಹೋಗುವ ಮಾರ್ಗದ ಎರಡೂ ಬದಿಗಳಲ್ಲೂ ನಿಧಾನಗತಿಯ ಸಂಚಾರವಿದೆ.

ವಿದ್ಯಾಶಿಲ್ಪದ ಬಳಿ ಮಳೆ ನೀರು ನಿಂತಿರುವುದರಿಂದ ಕಾಫಿ ಡೇ ಕಡೆಗೆ ಹೋಗುವ ಮಾರ್ಗದಲ್ಲೂ ವಾಹನ ಸಂಚಾರ ನಿಧಾನಗತಿಯಲ್ಲಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ

ಮಲ್ಲೇಶ್ವರಂನಲ್ಲಿ ಬೃಹತ್ ಮರ ರಸ್ತೆಗೆ ಉರುಳಿಬಿದ್ದಿದ್ದರಿಂದ ಎರಡು ಕಾರುಗಳು ಜಖಂ ಆಗಿವೆ. ವೈಟ್‌ಫೀಲ್ಡ್ ಮತ್ತು ಮಾರತ್ತಹಳ್ಳಿ ಸೇರಿದಂತೆ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆಯಿಂದಗಿ ಬೆಳ್ಳಂಬೆಳಗ್ಗೆ ಅವಘಡ

ಮಳೆಯಿಂದಾಗಿ ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಬಳಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆ. ಈಚರ್ ಲಾರಿಯೊಂದು 108 ಆಂಬ್ಯುಲೆನ್ಸ್​​ಗೆ ಡಿಕ್ಕಿಯಾಗಿದೆ. ಚಿಕ್ಕಬಾಣಾವಾರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆದ್ದಾರಿ ರಸ್ತೆಯಿಂದ ಎರಡು ವಾಹನಗಳನ್ನು ತೆರವು ಮಾಡಿಸಿದ್ದಾರೆ.

ಕೆರೆಯಂತಾದ ಮಂತ್ರಿ ಮಾಲ್ ಮುಂದಿನ ರಸ್ತೆ

ರಾತ್ರಿ ಸುರಿದ ಮಳೆಗೆ ಮಂತ್ರಿ ಮಾಲ್ ಮುಂದಿನ ರಸ್ತೆಯಲ್ಲಿ ನೀರು ನಿಂತು ಕೆರೆಯಂತಾಗಿದೆ. ಪ್ರತಿ ಬಾರಿ ಸಣ್ಣ ಪ್ರಮಾಣದ ಮಳೆಯಾದಾಗಲೂ ಇಲ್ಲಿ ನೀರು ನಿಂತು ಸಮಸ್ಯೆಯಾಗುತ್ತದೆ. ವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಸವಾರರಿಗೆ ತೊಂದರೆಯಾಗುತ್ತಿದೆ ಎಂಬ ಆರೋಪವಿದೆ. ಮಳೆ ಬಂದರೆ ಈ ಜಾಗದಲ್ಲಿ ಸುಮಾರು ಅರ್ಧ ಅಡಿಯಷ್ಟು ನೀರು ನಿಲ್ಲುತ್ತದೆ. ಸದ್ಯ ಜಲಾವೃತಗೊಂಡ ರಸ್ತೆಯಲ್ಲೇ ವಾಹನಗಳು ಸಂಚರಿಸುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 am, Tue, 29 September 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ