ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಲ್ಲಿ ಮೂರನೆಯ ದಿನವೂ ಮುಂದುವರಿದ ಭರ್ಜರಿ ಮಳೆ
ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್, ಎಂ.ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆ ಹಿನ್ನಲೆ ದ್ವಿಚಕ್ರ ವಾಹನ ಸವಾರರು ಪರದಾಡುತ್ತಿದ್ದು ಬಸ್ ನಿಲ್ದಾಣಗಳಲ್ಲಿ ಬೈಕ್ಗಳನ್ನು ಪಾರ್ಕ್ ಮಾಡಿ ಮಳೆ ಬೀಳದ ಕಡೆ ನಿಂತಿದ್ದಾರೆ. ಕೆಂಪೇಗೌಡ ರಸ್ತೆ, ಮೆಜೆಸ್ಟಿಕ್ ಸುತ್ತಾ ಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ಸುತ್ತಮುತ್ತ ಬಿರುಗಾಳಿ ಸಹಿತ ಮಳೆ (Rain) ಸುರಿದಿದೆ. ತಕ್ಷಣಕ್ಕೆ ಸುರಿದ ಬಿರುಗಾಳಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಉಂಟಾಗಿದೆ. ಕಳೆದ ಕೆಲ ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆರಾಯ ಎಂಟ್ರಿ ಕೊಡುತ್ತಿದ್ದಾನೆ. ಬಿರು ಬೇಸಿಗೆಯಲ್ಲಿ ಇಂದು ಮೂರನೆಯ ದಿನವೂ ಭರ್ಜರಿ ಮಳೆ ಮುಂದುವರೆದಿದೆ. ನಿನ್ನೆ ಮತ್ತು ಮೊನ್ನೆ ಕೂಡ ನಗರದಲ್ಲಿ ಭಾರಿ ಮಳೆಯಾಗಿದ್ದು ಕೆಲ ಕಡೆ ಅವಘಡಗಳು ಸಂಭವಿಸಿದ್ದವು. ವಿಲ್ಸನ್ ಗಾರ್ಡನ್, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್, ಎಂ.ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆ ಹಿನ್ನಲೆ ದ್ವಿಚಕ್ರ ವಾಹನ ಸವಾರರು ಪರದಾಡುತ್ತಿದ್ದು ಬಸ್ ನಿಲ್ದಾಣಗಳಲ್ಲಿ ಬೈಕ್ಗಳನ್ನು ಪಾರ್ಕ್ ಮಾಡಿ ಮಳೆ ಬೀಳದ ಕಡೆ ನಿಂತ್ತಿದ್ದರು. ಕೆಂಪೇಗೌಡ ರಸ್ತೆ, ಮೆಜೆಸ್ಟಿಕ್ ಸುತ್ತಾ ಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿತ್ತು.
ನಗರದ ತಗ್ಗು ಪ್ರದೇಶದ ಬಹುತೇಕ ರಸ್ತೆಗಳು ಮಳೆ ನೀರಿನಿಂದ ಆವೃತಗೊಂಡಿವೆ. ಜಲಾವೃತವಾಗಿ ರಸ್ತೆಗಳು ಕೆರೆಯಂತಾಗಿವೆ. ಚಾಲುಕ್ಯ ಸರ್ಕಲ್, ಶಿವಾನಂದ ವೃತ್ತ, ಓಕಳಿಪುರಂ, ಹಡ್ಸನ್ ಸರ್ಕಲ್, ಬ್ರಿಗೇಡ್ ರೋಡ್ ಜಂಕ್ಷನ್, ಆನಂದರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ ಬಳಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಂಗಳೂರು ನಗರದ ಉತ್ತರಹಳ್ಳಿಯಲ್ಲಿ ಮಳೆ ನೀರು ನುಗ್ಗಿ ಅವಾಂತರವಾಗಿದ್ದು ಉತ್ತರಹಳ್ಳಿಯ ಹೇಮಾವತಿ ವಾಟರ್ ಸಪ್ಲೈ ಕಾಮಗಾರಿ ನಡೆಯುತ್ತಿದ್ದ ರಸ್ತೆಯಲ್ಲಿ ನೀರು ನುಗ್ಗಿದೆ. ಈ ರಸ್ತೆಯ ಸುಮಾರು 10ಕ್ಕೂ ಅಧಿಕ ಮನೆಗೆಳ ವಸ್ತುಗಳು ನೀರು ಪಾಲಾಗಿವೆ. ಮನೆಯಲ್ಲಿದ್ದ ಫ್ರಿಡ್ಜ್, ಟಿವಿ ಸೇರಿದಂತೆ ಹಲವು ವಸ್ತುಗಳು ನೀರು ಪಾಲಾಗಿವೆ. ಮಳೆ ನೀರು ಹೊರಹಾಕಲು ನಿವಾಸಿಗಳು ಹರಸಾಹಸ ಪಡುತ್ತಿದ್ದಾರೆ. ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಇದನ್ನೂ ಓದಿ:
IPL 2022: 15ನೇ ಆವೃತ್ತಿಯ ಐಪಿಎಲ್ಗೂ ಕೊರೊನಾ ಕಾಟ; ದೆಹಲಿ ತಂಡದಲ್ಲಿ ಸೋಂಕಿನ ಪ್ರಕರಣ ಪತ್ತೆ!
ತಂಪು ಪಾನೀಯ ಕುಡಿದಿದ್ದ 7 ಮಕ್ಕಳು ದುರ್ಮರಣ; ಹಳ್ಳಿಗೆ ಹೋಗಿ ಪರಿಶೀಲನೆ ನಡೆಸಿದ ವೈದ್ಯರ ತಂಡ
Published On - 5:44 pm, Fri, 15 April 22