Bengaluru Rain: ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಧಾರಾಕಾರ ಮಳೆ!
ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಟ ಪಟ್ಟಿದ್ದರು. ಅದರಲ್ಲೂ ದೇವನಹಳ್ಳಿ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳಲ್ಲಿ ನೀರು ನಿಂತು ಪರದಾಡುವಂತಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಶುರುವಾಗಿದೆ. ನಗರದಲ್ಲಿ ಇಂದು ಸಹ ಧಾರಾಕಾರ ಮಳೆಯಾಗುತ್ತಿದೆ. ವಿಧಾನಸೌಧ, ಕೆ.ಆರ್.ಸರ್ಕಲ್, ಯಶವಂತಪುರ, ಮಲ್ಲೇಶ್ವರಂ, ಸದಾಶಿವನಗರ, ಮತ್ತಿಕೆರೆ, ಹೆಬ್ಬಾಳ, ಯಲಹಂಕ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ ಭಾರಿ ಮಳೆಯಾಗುತ್ತಿದೆ. ಮಳೆಯ ನಡುವೆ ವಾಹನಗಳು ಸಂಚರಿಸುತ್ತಿವೆ. ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿತ್ತು. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಟ ಪಟ್ಟಿದ್ದರು. ಅದರಲ್ಲೂ ದೇವನಹಳ್ಳಿ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳಲ್ಲಿ ನೀರು ನಿಂತು ಪರದಾಡುವಂತಾಗಿತ್ತು.
ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಮಳೆಯಾಗಿದೆ. ಏರ್‌ಪೋರ್ಟ್ ಸುತ್ತಮುತ್ತ 131.1 ಮಿಲಿ ಮೀಟರ್ ಮಳೆಯಾಗಿದೆ. ನಿನ್ನೆ ಒಂದೇ ರಾತ್ರಿ ಬರೋಬ್ಬರಿ 131.1 ಮಿ.ಮೀ. ಮಳೆಯಾಗಿದೆ.
ದೇವನಹಳ್ಳಿ ಸೇರಿದಂತೆ ಕೆಂಪೇಗೌಡ ಏರ್ಪೋರ್ಟ್ ಸುತ್ತಾಮುತ್ತ ಮತ್ತೆ ಮಳೆಯಾಗುತ್ತಿದೆ. ಕಳೆದ ರಾತ್ರಿಯಷ್ಟೆ ಏರ್ಪೋರ್ಟ್ನಲ್ಲಿ ಅಬ್ಬರಿಸಿ ಮಳೆರಾಯ ಅವಾಂತರ ಮಾಡಿತ್ತು. ಇದೀಗ ಮತ್ತೆ ಶುರುವಾಗಿದೆ. ಧಾರಾಕಾರ ಮಳೆಯಾದರೆ ಏರ್ಪೋರ್ಟ್ ರಸ್ತೆಯಲ್ಲಿ ನೀರು ನಿಲ್ಲುವ ಆತಂಕ ಇದೆ.
ಇದನ್ನೂ ಓದಿ
Covaxin for Children: 2ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ
ಉಪ್ಪಿನಂಗಡಿ ಬಳಿ ಭೀಕರ ಅಪಘಾತ; ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವು
Published On - 2:15 pm, Tue, 12 October 21