ಎಚ್ಚರ…ಎಚ್ಚರ: ಬೆಂಗಳೂರಿನಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಮುಂದುವರಿಕೆ ಸಾಧ್ಯತೆ

ಬೆಂಗಳೂರು ನಗರ ಸೇರಿದಂತೆ 11 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಚ್ಚರ...ಎಚ್ಚರ: ಬೆಂಗಳೂರಿನಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಮುಂದುವರಿಕೆ ಸಾಧ್ಯತೆ
ಮಳೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 14, 2022 | 11:06 PM

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆಯಿಂದ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಸಾಯಂಕಾಲ ಮನೆಗಳಿಗೆ ತೆರಳುವ ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದ ಬೀದಿ ಬದಿ ವ್ಯಾಪಾರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ವ್ಯಾಪಾರವಿಲ್ಲದಂತಾಗಿದೆ. ಇನ್ನೂ ನಗರದ ಹಲವಡೆ ಟ್ರಾಫಿಕ್​ ಜಾಮ್​ ಆಗಿದ್ದು, ವಾಹನ ಸವಾರರು ಪರದಾಡುತಿದ್ದಾರೆ.

ಮುಂದಿನ 3 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ

ಬೆಂಗಳೂರು ನಗರ ಸೇರಿದಂತೆ 11 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೀದರ್​, ಕಲಬುರಗಿ, ವಿಜಯಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹವಾಮಾನ ಇಲಾಖೆ ದಕ್ಷಿಣ ಒಳನಾಡಿ, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ  ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನಗಳ ಮಳೆ ಇರಲಿದ್ದು, ಇಲ್ಲಿಯು ಕೂಡ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಕರಾವಳಿ ಭಾಗದಲ್ಲೂ ಅಧೀಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ

ಬೆಂಗಳೂರಿನಲ್ಲಿ ಮುಂದಿನ 5 ಮಳೆಯಾಗಲಿದ್ದು, ಇಂದು ಮಾತ್ರ ಯಲ್ಲೋ ಅಲರ್ಟ್ ನೀಡಲಾಗಿದೆ. ಕೆಲವೊಮ್ಮೆ ಗುಡುಗು- ಮಿಂಚಿನ ಸಹಿತ ಮಳೆಯಾಗುವ ಸಾಧ್ಯಾತೆ ಇರುವುದರಿಂದ, ರಾಜಕಾಲುವೆ, ತಗ್ಗು ಪ್ರದೇಶ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಬೆಳ್ಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ಮೆಜೆಸ್ಟಿಕ್, ವಿಜಯನಗರ, ಕಾರ್ಪೋರೇಷನ್, ಮೈಸೂರ್ ಬ್ಯಾಂಕ್ ಸರ್ಕಲ್, ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದೆ.

ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ: ರಾಜ್ಯ ಸರ್ಕಾರದಿಂದ 124 ಕೋಟಿ ಅನುದಾನ ಬಿಡುಗಡೆ

 ರಾಜ್ಯದಲ್ಲಿ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ  ಹಾನಿ ಹಿನ್ನೆಲೆ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ  124 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕಂದಾಯ ಇಲಾಖೆ ಮೂಲಕ ಡಿಸಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ನೆರೆ, ಪ್ರವಾಹ ಕೂಡ ಉಂಟಾಗಿದ್ದು, ಅನೇಕ ಪ್ರಮಾಣದಲ್ಲಿ ಹಾನಿಯಾಗಿದೆ. ಅನೇಕ ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಹಾಗಾಗಿ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆಂದು ರಾಜ್ಯ ಸರ್ಕಾರ 124 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯುವ ನಿರೀಕ್ಷೆಯಿದ್ದು, ನಿನ್ನೆ ರಾತ್ರಿಯೂ ಬೆಂಗಳೂರು ಸೇರಿದಂತೆ ಅಲ್ಲಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದು ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿಗಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಕೆಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿವೆ.

ಹಳದಿ ಅಲರ್ಟ್ ಘೋಷಣೆ:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನಿನ್ನೆ ಸುರಿದ ಧಾರಾಕಾರ ಮಳೆಗೆ ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ಕೆಲವೊಂದು ಜಿಲ್ಲೆಗಳ ವಿವಿಧ ಪ್ರದೇಶಗಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಮನೆಗಳಿಗೆ ನೀರು ನುಗ್ಗಿ ಕುಟುಂಬಗಳು ಪರದಾಡುವಂತಾಗಿದ್ದು, ಮನೆಯೊಳಗೆ ಸಿಲುಕಿದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 pm, Fri, 14 October 22