ಕರ್ನಾಟಕದ ದಕ್ಷಿಣ ಒಳನಾಡಲ್ಲಿ ನಾಳೆ ಮಳೆ ಅಬ್ಬರ: ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 9ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದಂತೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಕರ್ನಾಟಕದ ದಕ್ಷಿಣ ಒಳನಾಡಲ್ಲಿ ನಾಳೆ ಮಳೆ ಅಬ್ಬರ: ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಸಾಂದರ್ಭಿಕ ಚಿತ್ರ
Image Credit source: PTI

Updated on: Oct 08, 2026 | 6:14 PM

ಬೆಂಗಳೂರು, ಅಕ್ಟೋಬರ್​​ 08: ಮುಂಗಾರು ಮಳೆಯ ತೀವ್ರ ಕೊರತೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯ ನಡುವೆ ಕಳೆದ ಕೆಲ ದಿನಗಳಿಂದ ಹಲವೆಡೆ ವರುಣ ಅಬ್ಬರಿಸುತ್ತಿದ್ದಾನೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್​​ 9ರಂದು (ನಾಳೆ) ಉತ್ತಮ ಮಳೆಯ ನಿರೀಕ್ಷೆ ಇದ್ದು, ಈ ಪ್ರದೇಶದಲ್ಲಿ 64ರಿಂದ 115 ಮಿ.ಮೀವರೆಗೆ ಮಳೆಯ ಸಾಧ್ಯತೆ ಅಂದಾಜಿಸಲಾಗಿದೆ. ಹೀಗಾಗಿ ಈ ಭಾಗಕ್ಕೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಯೆಲ್ಲೋ ಅಲರ್ಟ್​​ ಘೋಷಿಸಿದೆ.

13 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್​​

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಒಟ್ಟು 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ನಾಳೆ ಯೆಲ್ಲೋ ಅಲರ್ಟ್​​ ಘೋಷಿಸಿದೆ.

ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ವರುಣಾರ್ಭಟ: ಬಿರುಗಾಳಿ ಮಳೆ ಅಬ್ಬರಕ್ಕೆ ಜನ ಕಂಗಾಲು

ಉಳಿದಂತೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಇದೇ ರೀತಿಯ ವಾತಾವರಣ ಕಂಡುಬರಲಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:10 pm, Thu, 8 October 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us