AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heavy Rain: ರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ: ಕೋಡಿ ಬಿದ್ದು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ರಾತ್ರಿ ಸುರಿದ ಮಳೆಯಿಂದಾಗಿ ರಾಮಮ್ಮನ ಕೆರೆ‌ ಕೋಡಿ ಬಿದ್ದು ಮನೆಗಳು ಜಲಾವೃತವಾಗಿರುವಂತಹ ಘಟನೆ ನಡೆದಿದೆ. ತಿಟ್ಟಮಾರನಹಳ್ಳಿ ಗ್ರಾಮದ ಬಳಿಯ ರಾಮಮ್ಮನ ಕೆರೆ‌ ಕೋಡಿ ಬಿದ್ದು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

Heavy Rain: ರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ: ಕೋಡಿ ಬಿದ್ದು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಮಳೆಯಿಂದಾಗಿ ರಸ್ತೆ ಮೇಲೆ ನೀರು ನಿಂತಿರುವುದು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 27, 2022 | 7:30 AM

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ (Karnataka Rains) ಹೆಚ್ಚಾಗುತ್ತಿದೆ. ಬೆಂಗಳೂರಿನ ಹಲವು ಕಡೆ ರಾತ್ರಿ ಪೂರ್ತಿ ಜಿಟಿ ಜಿಟಿ ಮಳೆ ಸುರಿದ್ದು, ನಗರದ ಕೆಲ ರಸ್ತೆಯಲ್ಲಿ ಕೆಲ ಕಾಲ ನೀರು ನಿಂತಿತ್ತು. ಶಾಂತಿನಗರ, ಜಯನಗರ, ಕೆ.ಆರ್ ಪುರ, ಹಲಸೂರು, ಬನಶಂಕರಿ, ಮೆಜೆಸ್ಟಿಕ್ ಸೇರಿ ನಗರದ ಬಹುತೇಕ ಕಡೆ ಮಳೆಯಾಗಿದ್ದು, ಮೂರು ಗಂಟೆ ಸುಮಾರಿಗೆ ಸ್ವಲ್ಪ ಜೋರಾಗಿ ಮಳೆ ಸುರಿದಿದೆ. ಲಾಲ್ ಬಾಗ್ ವೆಸ್ಟ್ ಗೇಟ್ ಕಡೆಯಿಂದ ಸೌತೆ ಎಂಡ್ ಸರ್ಕಲ್​ಗೆ ತೆರಳುವ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಸುಮಾರು ಐವತ್ತು ಮೀಟರ್​ನಷ್ಟು ದೂರ, ಸುಮಾರು ಒಂದು ಅಡಿಯಷ್ಟು ನೀರು ರಸ್ತೆಯಲ್ಲಿ ನಿಂತಿತ್ತು. ಒಳಚರಂಡಿ ಅವ್ಯವಸ್ಥೆಯ ಕಾರಣದಿಂದ ರಸ್ತೆ ಮೇಲೆ ನೀರು ಹರಿದಿದೆ.

ಚರಂಡಿಗಳು ಬ್ಲಾಕ್​ ಆಗಿ ರಸ್ತೆ ಮೇಲೆ ನಿಂತಿ ನೀರು

ಬಿಟಿಎಂ ಲೇಔಟ್​​ನ ಬಿಳೇಕಹಳ್ಳಿ ವಾರ್ಡ್​​ನ ಅನುಗ್ರಹ ಬಡವಾಣೆಯ ಮೊದಲನೇ ಹಂತದ ಎರಡು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಒಂದು ಗಂಟೆ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ನೀರು ನಿಂತಿದೆ. ಚರಂಡಿಯಲ್ಲಿ ನೀರು ಸಮರ್ಪಕವಾಗಿ ಹರಿದು ಹೋಗದೆ ಇರುವುದರಿಂದ ರಸ್ತೆ ಮೇಲೆ ನೀರು ನಿಂತುಕೊಂಡಿತ್ತು. ಬಡವಾಣೆಯ ಯಾವುದೇ ಮನೆಗಳಿಗೂ ನೀರು ನುಗ್ಗಿ ಹಾನಿಯಾಗಿಲ್ಲ.

ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಮಳೆ ಬಿರುಸಾದ ಕೂಡಲೇ ಸ್ಥಳಕ್ಕೆ ಬಂದಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ರಸ್ತೆಯ ಮೇಲೆ ನಿಂತಿರುವ ನೀರನ್ನ ಪಂಪ್ ಮೂಲಕ ಚರಂಡಿಗೆ ಬಿಟ್ಟಿದ್ದಾರೆ. ನಿನ್ನೆಯಿಂದ ಸುರಿದ ಮಳೆಯಿಂದ ಅವಾಂತರ ಉಂಟಾಗಿದ್ದು, ಬೊಮ್ಮನಹಳ್ಳಿಯ ಅನುಗ್ರಹ ಲೇಔಟ್ ಸಂಪೂರ್ಣ ಜಲಾವೃತವಾಗಿದ್ದು, ಮನೆಗಳಿಗೆ ಮಳೆ ನೀರು ನುಗ್ಗಿದೆ. ಮಳೆ ನೀರು ಆವರಿಸಿ ವಾಹನಗಳು ಸಂಪುರ್ಣ ಜಲಾವೃತವಾಗಿದೆ.

ಮಳೆಯಿಂದ ಕುಸಿದ ಬ್ರಿಡ್ಜ್:

ನೂತನವಾಗಿ ನಿರ್ಮಾಣ ಮಾಡಲಾಗುತ್ತಿದ್ದ ಕುಂಬಲಗೋಡು ಬಳಿಯ ಬ್ರಿಡ್ಜ್ ಕುಸಿದಿದ್ದು, ಬೆಂಗಳೂರು ಮೈಸೂರು ಹೈವೇ ಫುಲ್ ಟ್ರಾಫಿಕ್ ಉಂಟಾಗಿತ್ತು. ಮೈಸೂರು ರಸ್ತೆಯಲ್ಲಿ ಹತ್ತಾರು ಕಿ.ಮೀ ಟ್ರಾಫಿಕ್ ಜಾಮ್ ಆಗಿದ್ದು, ಮಳೆಯಿಂದ ಕುಸಿದಿರುವ ಮಾಹಿತಿ ನೀಡಲಾಗಿದೆ.

ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ

ಚಿತ್ರದುರ್ಗ: ನಗರ ಸೇರಿ ಜಿಲ್ಲೆಯ ವಿವಿಧೆಡೆ ಜಿಟಿಜಿಟಿ ಮಳೆ ಸುರಿದಿದ್ದು, ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಆಗಾಗ ಬಿಡುವು ನೀಡಿ ತುಂತುರು ಮಳೆ ಸುರಿಯುತ್ತಿದ್ದು, ಬಯಲುಸೀಮೆಯ ಭೂಮಿಗೆ ಮಳೆರಾಯ ತಂಪೆರೆದಿದ್ದಾನೆ. ನಿರಂತರ ಜಡಿ ಮಳೆಯಿಂದ ರೈತರು ಬೆಳೆಹಾನಿ ಭೀತಿಯಲ್ಲಿದ್ದಾರೆ.

ಕೋಡಿ ಬಿದ್ದು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ರಾಮನಗರ: ಜಿಲ್ಲೆಯಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ರಾಮಮ್ಮನ ಕೆರೆ‌ ಕೋಡಿ ಬಿದ್ದು ಮನೆಗಳು ಜಲಾವೃತವಾಗಿರುವಂತಹ ಘಟನೆ ನಡೆದಿದೆ. ತಿಟ್ಟಮಾರನಹಳ್ಳಿ ಗ್ರಾಮದ ಬಳಿಯ ರಾಮಮ್ಮನ ಕೆರೆ‌ ಕೋಡಿ ಬಿದ್ದು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಚನ್ನಪಟ್ಟಣ ತಾಲೂಕಿನ ಎಲೆಕೆರೆ ಗ್ರಾಮದಲ್ಲೂ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮನೆಗೆ ನೀರು ನುಗ್ಗಿದ್ದರಿಂದ  ಕುಟುಂಬಸ್ಥರು ಪರದಾಡುವಂತ್ತಾಗಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ನೀರು ಹೊರ ಹಾಕಿದರು. ಮನೆಗಳಿಗೆ ಚರಂಡಿ ನೀರು ನುಗ್ಗಿ ಜನರು ಪರದಾಡಿರುವಂತಹ ಘಟನೆ ಬೀಡಿ ಕಾಲೋನಿ, ಆರ್​ಎಂಸಿ ಕಾಲೋನಿಯಲ್ಲಿಯೂ ನಡೆದಿದೆ. 20 ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಉಂಟಾಗಿದ್ದು, ಮನೆಗಳಿಗೆ ಚರಂಡಿ ನೀರು ನುಗ್ಗಿ ಕುಟುಂಬಸ್ಥರು ಪರದಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್