AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಮೆಜೆಸ್ಟಿಕ್​ ಸೇರಿದಂತೆ ಹಲವೆಡೆ ಧಾರಾಕಾರ ಮಳೆ

ಬೆಂಗಳೂರಿನಲ್ಲಿ ಕೆಲ ದಿನ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಸುರಿದಿದೆ. ನಗರದ ಹಲವೆಡೆ ವರುಣ ಆರ್ಭಟಿಸಿದ್ದಾನೆ. ದಿಢೀರ್ ಮಳೆಯಿಂದ ಜನರು ಪರದಾಡಿದರು. ಇತ್ತ ರಾಮನಗರದಲ್ಲೂ ಮಳೆ ಅಬ್ಬರಿಸಿದ್ದು, ರಾಗಿ ಬೆಳೆಗಾರರು ಸಂತಸಗೊಂಡಿದ್ದಾರೆ. ಹವಾಮಾನ ಇಲಾಖೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಮೆಜೆಸ್ಟಿಕ್​ ಸೇರಿದಂತೆ ಹಲವೆಡೆ ಧಾರಾಕಾರ ಮಳೆ
ಬೆಂಗಳೂರು ಮಳೆ
ಅರುಣ್ ಕುಮಾರ್​ ಆರ್​.
| Edited By: |

Updated on: Nov 04, 2026 | 3:19 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಹಲವಡೆ ಮಳೆ
  • ಮಳೆಯಿಂದಾಗಿ ವಾಹನ ಸವಾರರ ಪರದಾಟ
  • ಇಂದು ಸಂಜೆ ಜೋರು ಮಳೆ ಬರುವ ಸಾಧ್ಯತೆ

ಬೆಂಗಳೂರು, ನವೆಂಬರ್​​ 04: ನಗರದಲ್ಲಿ ಸ್ವಲ್ಪ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಎಂಟ್ರಿ ಕೊಟ್ಟಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣದ್ದು, ಮಧ್ಯಾಹ್ನದ ವೇಳೆಗೆ ಬೆಂಗಳೂರಿನ ಹಲವೆಡೆ ವರುಣನ ಆರ್ಭಟ ಜೋರಾಗಿದೆ. ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್, ವಿಧಾನಸೌಧ ಹಾಗೂ ಕೆ.ಆರ್. ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಏಲ್ಲೆಲ್ಲಿ ಮಳೆ?

ಮೆಜೆಸ್ಟಿಕ್, ಮೈಸೂರ ಬ್ಯಾಂಕ್ ಸರ್ಕಲ್, ವಿಧಾನಸೌಧ, ಕೆಆರ್ ಸರ್ಕಲ್​, ಕಾರ್ಪೊರೇಷನ್​ ಸುತ್ತಮುತ್ತ ಸೇರಿದಂತೆ ಹಲವೆಡೆ ವರುಣನ ಸಿಂಚನವಾಗಿದೆ. ದಿಢೀರ್​​ ಮಳೆ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಬಸ್‌ಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರು ಮಳೆಯಿಂದ ತಪ್ಪಿಸಿಕೊಳ್ಳಲು ಪರದಾಡಿದ್ದಾರೆ. ಕೆಲವರು ಛತ್ರಿ ಹಿಡಿದು ಬಸ್‌ಗಳತ್ತ ತೆರಳಿದರೆ, ಇನ್ನು ಕೆಲವರು ಮಳೆಯಿಂದ ರಕ್ಷಿಸಿಕೊಳ್ಳಲು ಅಲ್ಲೇ ಆಶ್ರಯ ಪಡೆದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಅಲರ್ಟ್

ಇನ್ನು ಕೆಲಸ ಮುಗಿಸಿ ಮನೆಗೆ ತೆರಳುವವರು ಹಾಗೂ ಊರುಗಳಿಗೆ ಪ್ರಯಾಣಿಸುವವರು ಕೂಡ ಮಳೆಯಿಂದಾಗಿ ತೊಂದರೆ ಅನುಭವಿಸಿದರು. ಅಷ್ಟೇ ಅಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.

LIVE TV

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು ಸಂಜೆ ನಗರದ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುಸ್ಸೂಚನೆ ನೀಡಿದೆ.

ರಾಮನಗರ ಜಿಲ್ಲೆಯಲ್ಲೂ ಮಳೆ ಅಬ್ಬರ

ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲೂ ಇಂದು ಬೆಳಗ್ಗೆಯೇ ಮಳೆ ಸುರಿದಿದೆ. ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದ್ದು, ಬೆಳ್ಳಂಬೆಳಗ್ಗೆ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ಅಡ್ಡಿಯಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಮಳೆ ಸುರಿದಿದ್ದರಿಂದ ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಬೆಳೆಗಳಿಗೆ ಮಳೆ ಅನುಕೂಲವಾಗಿರುವುದರಿಂದ ರೈತರು ಸಂತಸಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ