ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಶುರುವಾಗಿದೆ. ಕಬ್ಬನ್ ಪಾರ್ಕ್, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಡಬಲ್ ರೋಡ್ ಸೇರಿದಂತೆ ಹಲವೆಡೆ ಮಳೆ ಆಗಿದ್ದು, ಮಳೆಯಿಂದ ಬೈಕ್ ಸವಾರರು, ಪಾದಚಾರಿಗಳು ಪರದಾಡಿದ್ದಾರೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಸಾಧ್ಯತೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆ ಬಗ್ಗೆ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.