ಅ.19 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ಕರಾವಳಿ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ(Rain) ಆಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಈ ಹಿನ್ನಲೆ ನಾಳೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಅ.15: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ಕರಾವಳಿ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ(Rain) ಆಗಲಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಹಾಸನ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಶಿವಮೊಗ್ಗ ಈ ಜಿಲ್ಲೆಗಳಿಗೆ ನಾಳೆ(ಅ.16) ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೊತೆಗೆ ನಾಳೆ ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ಯಲ್ಲೋ ಅಲರ್ಟ್ ನೀಡಲಾಗಿದೆ. ವಾಯುಭಾರ ಕುಸಿತವಾಗುವ ಸ್ಥಳಗಳಲ್ಲಿ ಗಾಳಿ ಅಪ್ರದಕ್ಷಿಣವಾಗಿ ಚಲಿಸುತ್ತೆ (ಗಡಿಯಾರದ ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದೆ).ಇದರ ಪರಿಣಾಮ ಭೂಮಿಯ ಮೇಲ್ಮೈ ಮೇಲಿನ ಗಾಳಿ ಮೇಲಕ್ಕೆ ಎತ್ತುತ್ತದೆ. ಇದರಿಂದ ಮೇಲಕ್ಕೆ ಗಾಳಿ ಹೋದಂತೆ ಗಾಳಿ ತಂಪಾಗಿ ಮೋಡವಾಗಿ ಪರಿವರ್ತನೆಗೊಳ್ಳುತ್ತದೆ. ನಂತರ ಮಳೆ ಆಗುತ್ತದೆ. ಪರಿಣಾಮ ಇನ್ನೂ ಎರಡು ದಿನಗಳ ಕಾಲ ಮಳೆ ಆಗಲಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರೇ ಎಚ್ಚರ..ಎಚ್ಚರ
ಇನ್ನು ಬೆಂಗಳೂರಿನಲ್ಲಿ ಇವತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಆದರೆ, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಆಗಲಿದೆ, ನಾಳೆ ಬೆಂಗಳೂರಿನಲ್ಲಿ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ