AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತದಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು ಮಳೆ: ರಾಜಧಾನಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತದಲ್ಲಿ ಭಾರಿ ಟ್ರಾಫಿಕ್​ ಜಾಮ್ ಉಂಟಾಗಿದೆ.

Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತದಲ್ಲಿ ಟ್ರಾಫಿಕ್ ಜಾಮ್
ಮಳೆ
ನಯನಾ ರಾಜೀವ್
| Updated By: Digi Tech Desk|

Updated on:May 30, 2023 | 2:37 PM

Share

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ ಸೇರಿದಂತೆ ಹಲವೆಡೆ ಭಾರಿ ಟ್ರಾಫಿಕ್​ ಜಾಮ್ ಉಂಟಾಗಿದೆ. ಮುಂದಿನ 3 ಗಂಟೆಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲೂ ಮಳೆಯಾಗಿದೆ.

ಶಾಂತಿನಗರ, ಜಯನಗರ, ಕೆಆರ್​ ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳು ಜಲಾವೃತಗೊಂಡಿದ್ದು, ದ್ವಿಚಕ್ರ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಳಗ್ಗೆ ಶುಭ್ರ ಆಕಾಶವಿತ್ತು, ಮಧ್ಯಾಹ್ನವಾಗುತ್ತಿದ್ದಂತೆ ಮೋಡಕವಿದ ನಿರ್ಮಾಣವಾಗಿ ಏಕಾಏಕಿ ಮಳೆ ಸುರಿದಿದೆ.

ಮತ್ತಷ್ಟು ಓದಿ: Karnataka Rains: ಮುಂದಿನ 48 ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್ಚರಿಕೆ ದುರ್ಬಲ ಮರದ ಕೊಂಬೆಗಳು ನೆಲಕ್ಕುರುಳುವ ಸಾಧ್ಯತೆ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಮನೆಯೊಳಗೆ ಇರಿ ಕಿಟಕಿ ಬಾಗಿಲುಗಳನ್ನು ಮುಚ್ಚಿ ಸಾಧ್ಯವಾದರೆ ದೂರ ಪ್ರಯಾಣಗಳನ್ನು ತಪ್ಪಿಸಿ ಮರದ ಕೆಳಗೆ ಆಶ್ರಯ ಪಡೆಯಬೇಡಿ ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ ತಕ್ಷಣವೇ ವಿದ್ಯುತ್ ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್ ಪ್ಲಗ್ ಮಾಡಿ ತಕ್ಷಣ ಜಲಮೂಲಗಳಿಂದ ಹೊರ ಬನ್ನಿ ನೀವು ಬೈಕ್, ವಾಹನ ಚಲಾಯಿಸುತ್ತಿದ್ರೆ ಎಚ್ಚರವಹಿಸಿ

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:14 pm, Tue, 30 May 23