Bangalore Rains: ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ; 8 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್​​

Karnataka Weather ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರಾಜಧಾನಿ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಹಲವೆಡೆಯೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಉಳಿದಂತೆ ಬಹುದೇತ ಕಡೆ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

Bangalore Rains: ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ; 8 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್​​
ಬೆಂಗಳೂರಿನಲ್ಲಿ ಮಳೆ
Image Credit source: sustainme.in

Updated on: Sep 30, 2026 | 4:51 PM

ಬೆಂಗಳೂರು, ಸೆಪ್ಟೆಂಬರ್​​ 30: ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ನಗರದ ಹಲವೆಡೆ ಉತ್ತಮ ಮಳೆಯಾಗಿದೆ. ರಿಚ್ಮಂಡ್​​ ಟೌನ್​​, ಶಾಂತಿನಗರ, ಎಂ.ಜಿ. ರೋಡ್​​, ಸರ್ಜಾಪುರ, ಕೆ. ಆರ್​​. ಮಾರುಕಟ್ಟೆ, ಕಾರ್ಪೊರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕಳೆದೆರಡು ದಿನಗಳಿಂದಲೂ ಸಂಜೆಯ ಬಳಿಕ ಮತ್ತು ಬೆಳಗ್ಗಿನ ಜಾವದ ವೇಳೆ ಉತ್ತಮ ಮಳೆಯಾಗಿತ್ತು. ಆದರೆ ಇಂದು ಸಂಜೆ ವೇಳೆಗೇ ವರುಣನ ಆಗಮನವಾಗಿರುವ ಕಾರಣ ವಾಹನ ಸವಾರರು ತೀವ್ರ ಪರದಾಟ ನಡೆಸಬೇಕಾಯಿತು.

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯ ನಿರೀಕ್ಷೆಯಿದ್ದು ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!

ಉತ್ತರ ಒಳನಾಡು ಕರ್ನಾಟಕದ ಹಲವೆಡೆಯೂ ಮಳೆ ಮುನ್ಸೂಚನೆ

ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಬಗ್ಗೆ ಅಂದಾಜಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:44 pm, Wed, 30 September 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us