Bengaluru Weather: ಬೆಂಗಳೂರಿನಲ್ಲಿ ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ: ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 29, 2022 | 9:20 AM

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Bengaluru Weather: ಬೆಂಗಳೂರಿನಲ್ಲಿ ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ: ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ
ಬಿರುಗಾಳಿ ಸಹಿತ ಮಳೆ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಬೆಂಗಳೂರಿನಲ್ಲಿ ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 9 ಗಂಟೆಯವರೆಗೆ ಮಳೆ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ, ಕೋಲಾರ ಜಿಲ್ಲೆಗಳಿಗೂ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 40-50 ಕಿ.ಮೀ ವೇಗದಲ್ಲಿರುವ ಗಾಳಿ, ಮಿಂಚು ಸಹಿತ ಮಳೆ ಸಾಧ್ಯತೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಈಗಾಗ್ಲೇ ಕೆಲವೆಡೆ ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮಳೆಯ ವಾತಾವರಣ ಇರುವುದರಿಂದ ಮುಂದಿನ 3-4 ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನ ಬಹುತೇಕ ಕಡೆ ಆವರಿಸಿದ ಕಗ್ಗತ್ತಲು:

ಬೆಂಗಳೂರಿನ ಬಹುತೇಕ ಕಡೆ ಕಗ್ಗತ್ತಲು ಆವರಿಸಿದ್ದು, ಬಸವನಗುಡಿ, ಹನುಮಂತನಗರ, ಇಟ್ಟಮಡು, ಗಿರಿನಗರ, ಶ್ರೀನಗರ, ಜಯನಗರ, ಬನಶಂಕರಿ, ದೇವೇಗೌಡ ಪೆಟ್ರೋಲ್ ಬಂಕ್, ಕತ್ತರಿಗುಪ್ಪೆ, ಸೇರಿದಂತೆ ಬೆಂಗಳೂರಿನ ಹಲವೆಡೆ ಸಂಜೆ 6 ಗಂಟೆಯ ರೀತಿ ಕತ್ತಲ ವಾತಾವರಣ ಗೋಚರವಾಗಿದೆ. ಭಾರಿ ಮಳೆಯಿಂದ ನಿರ್ಮಾಣ ಹಂತದ ಹೈವೇ ಕೆರೆಯಂತಾಗಿದ್ದು, ಬೆಂಗಳೂರು-ಮೈಸೂರು ಮಾರ್ಗದಲ್ಲಿ‌ ಟ್ರಾಫಿಕ್​ ಜಾಮ್ ಉಂಟಾಗಿದೆ. ಕಳೆದೊಂದು ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಅಷ್ಟೇ ಅಲ್ಲದೇ ಕೆಂಗೇರಿ, ಬಿಡದಿ ಭಾಗದಲ್ಲಿ ತುಂತೂರು ಮಳೆ ಆರಂಭವಾಗಿದ್ದು, ವಾಹನ ಸವಾರರು ಟ್ರಾಫಿಕ್​ನಲ್ಲಿ ಸಿಲುಕಿ‌ ಪರದಾಡುತ್ತಿದ್ದಾರೆ.

ಇದನ್ನೂ ಓದಿ: ರಾಮನಗರದಲ್ಲಿ ಮುಂದುವರಿದ ವರುಣಾರ್ಭಟ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ ಕರ್ನಾಟಕದಲ್ಲಿಯೂ ಮಳೆ ಸಾಧ್ಯತೆ:

ರಾಜ್ಯದಲ್ಲಿ ಇಂದು ಕೂಡಾ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:28 am, Mon, 29 August 22