AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ, ಯಲ್ಲೋ ಅಲರ್ಟ್

ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ಇದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಕಾರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Bangalore Rain: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ, ಯಲ್ಲೋ ಅಲರ್ಟ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Apr 30, 2023 | 2:14 PM

Share

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳಿಂದ ಉರಿ ಬಿಸಿಲಲ್ಲಿ ಬೆಂದಿದ್ದ ಸಿಟಿ ಜನರು ಅಕ್ಷರಶಃ ಕಂಗೆಟ್ಟು ಹೋಗಿದ್ರು. ಯಾವಾಗ ಮಳೆ ಬರುತ್ತಪ್ಪಾ ಅಂತಾ ಆಕಾಶ ನೋಡ್ತಿದ್ರು. ಹಾಗೆಯೇ ನಿನ್ನೆ(ಏಪ್ರಿಲ್ 29) ಜೋರು ಮಳೆ ಬಂದು, ಇಡೀ ಸಿಟಿ ಕೂಲ್ ಆಗಿದೆ. ಬಿಸಿಲ ಬೇಗೆಯಿಂದ ಬೆಂದ ಸಿಟಿ ಜನರಿಗೆ ಮಳೆ ತಂಪೆರೆದಿತ್ತು. ಸದ್ಯ ಈಗ ಹವಾಮಾನ ಇಲಾಖೆ ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂಬ ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ, ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ ಮೂರು ದಿನಗಳ‌ ಕಾಲ ಯಲ್ಲೋ ಅಲರ್ಟ್ ನೀಡಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಕೊಡಗು, ರಾಯಚೂರು, ದಾವಣಗೆರೆ, ಚಾಮರಾಜನಗರ, ರಾಮಾನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ತುಮಕೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Bangalore Rain: ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ; ವಾಹನ ಸವಾರರ ಪರದಾಟ

ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ಇದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಕಾರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿಗೆ ನಾಳೆಯಿಂದ ಎರಡು ದಿನ ಯಲ್ಲೋ ಅಲರ್ಟ್ ನೀಡಿದ್ದು ಇಂದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ 2 ಸೆಂ.ಮೀ ಮಳೆಯಾಗಿದೆ. ಹೀಗಾಗಿ ತಗ್ಗು ಪ್ರದೇಶದ ಜನರು ಹಾಗೂ ರಾಜಕಾಲುವೆ ಅಕ್ಕಪಕ್ಕದ ಜರನು ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ