ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ಮತ್ತು ರಾತ್ರಿ ಮಳೆಯಾಗುತ್ತಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಬೆಂಗಳೂರಿನ ಶಾಂತಿನಗರ, ಜಯನಗರ, ಕೆ.ಆರ್. ಮಾರ್ಕೆಟ್ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ರಸ್ತೆ ಮೇಲೆ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು, ಏಪ್ರಿಲ್ 16: ಕಳೆದ ಎರಡ್ಮೂರು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಜೆ ಮತ್ತು ರಾತ್ರಿ ಗಾಳಿ ಸಹಿತ ಮಳೆಯಾಗುತ್ತಿದೆ. ಬುಧವಾರ (ಏ.16) ಸಂಜೆ ಬೆಂಗಳೂರಿನಲ್ಲಿ ಮತ್ತೆ ಮಳೆರಾಯನ (Rain) ಆರ್ಭಟ ಶುರುವಾಗಿದೆ. ನಗರದ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ಜಯನಗರ, ಕೆ.ಆರ್.ಮಾರ್ಕೆಟ್, ಜೆ.ಪಿ.ನಗರ, ವಿಜಯನಗರ, ರಾಜಾಜಿನಗರ, ಮಹದೇವಪುರ, ಕೆ.ಆರ್.ಪುರಂ, ಟಿನ್ ಫ್ಯಾಕ್ಟರಿ, ಮಾರತಹಳ್ಳಿ ಸೇರಿದಂತೆ ನಗರದ ಹಲವೆಡೆ ಮಳೆ ಗಾಳಿ ಸಹಿತ ಮಳೆಯಾಗಿದೆ. ಭಾರಿ ಮಳೆಯಿಂದ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು. ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ಕೆರೆಯಂತಗಿವೆ.
ನಗರದ ಹಲವು ರಸ್ತೆಗಳಲ್ಲಿ ನಿಂತ ಮಳೆ ನೀರು
ನಗರದ ಹಲವು ರಸ್ತೆಗಳಲ್ಲಿ ಮಳೆ ನೀರು ನಿಂತಿದ್ದು, ವಾಹನ ಸಂಚಾರ ನಿಧಾನಗತಿಯಲ್ಲಿರುತ್ತದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಮಾರತ್ತಹಳ್ಳಿ ಪೊಲೀಸ್ ಠಾಣೆಯಿಂದ ಕಲಾಮಂದಿರ ಕಡೆಗೆ ಹೋಗುವ ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಎಲ್ಲೆಲ್ಲಿ ನಿಧಾನಗತಿ ಸಂಚಾರ
ಕಸ್ತೂರಿ ನಗರ ಕಡೆಯಿಂದ ಎಮ್ಎಮ್ಟಿ ಜಂಕ್ಷನ್ (ಕೆ ಆರ್ ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಎಂ.ಎಂ.ಟಿ ಬಸ್ ನಿಲ್ದಾಣದ ಹತ್ತಿರ ಮಳೆ ನೀರು ನಿಂತಿರುವುದರಿಂದ ವೈಟ್‌ಫೀಲ್ಡ್, ಮಹದೇವಪುರ ಮತ್ತು ಕೆ ಆರ್ ಪುರ ಕಡೆಗೆ ಹೋಗುವ ವಾಹನಗಳು ನಿಧಾನಗವಾಗಿ ಸಂಚರಿಸಬೇಕೆಂದು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.
ಸಂಚಾರ ಸಲಹೆ
ಕಸ್ತೂರಿ ನಗರ ಕಡೆಯಿಂದ M M T ಜಂಕ್ಷನ್ (ಕೆ ಆರ್ ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಎಂ. ಎಂ. ಟಿ ಬಸ್ ನಿಲ್ದಾಣದ ಹತ್ತಿರ ಮಳೆ ನೀರು ನಿಂತಿರುವುದರಿಂದ ವೈಟ್‌ಫೀಲ್ಡ್, ಮಹದೇವಪುರ ಮತ್ತು ಕೆ ಆರ್ ಪುರ ಕಡೆಗೆ ಹೋಗುವ ವಾಹನಗಳ ಸಂಚಾರ ನಿಧಾನಗತಿಯಲ್ಲಿರುತ್ತದೆ, ವಾಹನ ಸವಾರರು/ಚಾಲಕರು ಸಹಕರಿಸಲು ಕೋರಿದೆ pic.twitter.com/RQQna5Txhe
— K.R.PURA TRAFFIC POLICE.BENGALURU. (@KRPURATRAFFIC) April 16, 2025
ಕೆ ಆರ್ ಪುರ ಕಡೆಯಿಂದ ಹೊಸಕೋಟೆ ರಸ್ತೆ ಕಡೆಗೆ ಹೋಗುವ ಮಾರ್ಗದಲ್ಲಿ ಓಎಂ ಮುಖ್ಯರಸ್ತೆಯಲ್ಲಿ GRT U TURN ಹತ್ತಿರ ಮಳೆ ನೀರು ನಿಂತಿರುವುದರಿಂದ ಹೊಸಕೋಟೆ ಕಡೆಗೆ ಹೋಗುವ ವಾಹನಗಳ ನಿಧಾನಗತಿಯಲ್ಲಿ ಸಂಚರಿಸಬೇಕೆಂದು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.
ಸಂಚಾರ ಸಲಹೆ
ಕೆ ಆರ್ ಪುರ ಕಡೆಯಿಂದ ಹೊಸಕೋಟೆ ರಸ್ತೆ ಕಡೆಗೆ ಹೋಗುವ ಮಾರ್ಗದಲ್ಲಿ ಓ ಎಂ ಮುಖ್ಯರಸ್ತೆಯಲ್ಲಿ GRT U TURN ಹತ್ತಿರ ಮಳೆ ನೀರು ನಿಂತಿರುವುದರಿಂದ ಹೊಸಕೋಟೆ ಕಡೆಗೆ ಹೋಗುವ ವಾಹನಗಳ ಸಂಚಾರ ನಿಧಾನಗತಿಯಲ್ಲಿರುತ್ತದೆ, ವಾಹನ ಸವಾರರು/ಚಾಲಕರು ಸಹಕರಿಸಲು ಕೋರಿದೆ… pic.twitter.com/o4lesYBVbC
— K.R.PURA TRAFFIC POLICE.BENGALURU. (@KRPURATRAFFIC) April 16, 2025
- ಕಸ್ತೂರಿನಗರ ರಿಂಗ್ ರಸ್ತೆ ಗ್ರಾಂಡ್ ಸೀಸನ್ ಹೋಟೆಲ್ ಹತ್ತಿರ ಮಳೆಯಿಂದ ರಿಂಗ್ ರಸ್ತೆಯಲ್ಲಿ ನಿಧಾನವಾಗಿ ಸಂಚರಿಸಬೇಕು.
- ಕಸ್ತೂರಿನಗರದಿಂದ ಹೆಬ್ಬಾಳ ಕಡೆಗೆ ನಿಧಾನವಾಗಿ ಸಂಚರಿಸಬೇಕು.
- ರಾಮಮೂರ್ತಿನಗರದ ಅಂಡರ್‌ಪಾಸ್‌ನಿಂದ ಟಿನ್ ಫ್ಯಾಕ್ಟರಿ ಕಡೆಗೆ ನಿಧಾನವಾಗಿ ಸಂಚರಿಸಬೇಕು.
- ಕಸ್ತೂರಿನಗರದಿಂದ ಹೆಬ್ಬಾಳ ಕಡೆಗೆ ನಿಧಾನವಾಗಿ ಸಂಚರಿಸಬೇಕು.
- ರಾಮಮೂರ್ತಿನಗರದ ಅಂಡರ್‌ಪಾಸ್‌ನಿಂದ ಟಿನ್ ಫ್ಯಾಕ್ಟರಿ ಕಡೆಗೆ ನಿಧಾನವಾಗಿ ಸಂಚರಿಸಬೇಕು.
- ರೈನ್‌ಬೋ ಆಸ್ಪತ್ರೆಯಿಂದ ಕಾರ್ತಿಕ್‌ನಗರ ಕಡೆಗೆ ನಿಧಾನವಾಗಿ ಸಂಚರಿಸಬೇಕು.
- ಗುಂಜೂರಿನಿಂದ ವರ್ತೂರು ಕಡೆಗೆ ನಿಧಾನವಾಗಿ ಸಂಚರಿಸಬೇಕು.
ಇದನ್ನೂ ಓದಿ: ಇಂದು ಕೂಡ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದಾದ್ಯಂತ ಹವಾಮಾನ ಹೇಗಿರಲಿದೆ?
ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ
ಮುಂದಿನ ಐದು ದಿನಗಳ ಕಾಲ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 16 ರಿಂದ ಏಪ್ರಿಲ್ 20ರ ತನಕ ಮಳೆಯಾಗಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ
ಮುಂದಿನ 3 ಗಂಟೆಗಳಲ್ಲಿ ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಗೇ, ದಕ್ಷಿಣ ಕರ್ನಾಟಕದ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ