AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ-ಮಳೆಗೆ ಓರ್ವ ಬಲಿ: ಹಲವೆಡೆ ಟ್ರಾಫಿಕ್​ ಜಾಮ್​

ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ಮಳೆಗೆ ಮರ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನಲ್ಲೂ ಭಾರಿ ಮಳೆಯಾಗಿದ್ದು, ಮನೆಗಳಿಗೆ ಹಾನಿಯಾಗಿದೆ. ಮುಂದಿನ ದಿನಗಳಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆಯಿದೆ.

Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ-ಮಳೆಗೆ ಓರ್ವ ಬಲಿ: ಹಲವೆಡೆ ಟ್ರಾಫಿಕ್​ ಜಾಮ್​
ಬೆಂಗಳೂರಿನಲ್ಲಿ ಭಾರಿ ಮಳೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 01, 2025 | 8:33 PM

Share

ಬೆಂಗಳೂರು, ಮೇ​ 01: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ (Rain). ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕತ್ರಿಗುಪ್ಪೆಯ ಎಂ.ಎಂ.ಬಾರ್​ ಬಳಿ ಘಟನೆ ನಡೆದಿದೆ. ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇನ್ನು, ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್​, ಕೆ.ಆರ್.ಮಾರ್ಕೆಟ್​, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ಏಕಾಏಕಿ ಮಳೆ ಬಂದಿದ್ದರಿಂದ ಬಸ್ ನಿಲ್ದಾಣಗಳಲ್ಲಿ ಜನ ಆಶ್ರಯ ಪಡೆಯುತ್ತಿದ್ದಾರೆ. ಬೈಕ್ ಸವಾರರು ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಬಳಿ ನಿಂತಿದ್ದಾರೆ. ಮಳೆಗೆ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಟ್ರಾಫಿಕ್‌ಜಾಮ್‌ ಉಂಟಾಗಿದೆ.

ಬೆಂಗಳೂರಿನ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-60 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯಿಂದ ಟ್ರಾಫಿಕ್​ ಜಾಮ್​

ಗಾಳಿ, ಮಳೆಗೆ ಬೆಂಗಳೂರಿನ ಹಲವು ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ನಗರ ಹಲವು ರಸ್ತೆಗಳಲ್ಲಿ ನಿಧಾನಗತಿಯ ಸಂಚಾರವಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ನಿಧಾನಗತಿ ಸಂಚಾರ

  1. ಹೆಬ್ಬಾಳ ಪೊಲೀಸ್ ಠಾಣೆಯಿಂದ ವಿಮಾನ ನಿಲ್ದಾಣದ ಕಡೆಗೆ
  2. ಆರ್ ಪಿ ರಸ್ತೆಯಿಂದ ಪಿ ಜಿ ಹಳ್ಳಿ ಕಡೆಗೆ
  3. ವರ್ತೂರು ಕಡೆಯಿಂದ ಗುಂಜೂರು ಕಡೆಗೆ
  4. ಭಾಷ್ಯಂ ವೃತ್ತದಿಂದ ಕಾವೇರಿ ಕಡೆಗೆ
  5. ಉದಯ ಟಿ ವಿ ಜಂಕ್ಷನ್ ಕಡೆಯಿಂದ ಜಯಮಹಲ್ ರಸ್ತೆ ಕಡೆಗೆ
  6. ಬಿಳೇಕಹಳ್ಳಿಯಿಂದ ಜೆ ಡಿ ಮರ ಕಡೆಗೆ
  7. ವೀರಸಂದ್ರ ಎರಡೂ ಬದಿ ರಸ್ತೆ
  8. ಹೊಸ ರಸ್ತೆಯಿಂದ ಬಸಾಪುರ ಜಂಕ್ಷನ್ ಕಡೆಗೆ
  9. ಹೊರಮಾವು ಕೆಳಸೇತುವೆಯಿಂದ ಕೆ ಆರ್ ಪುರ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಟ್ವಿಟರ್ ಪೋಸ್ಟ್​

ಚಿಕ್ಕಮಗಳೂರಿನಲ್ಲೂ ಮಳೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ-ಗಾಳಿಗೆ ಮನೆ ಚಾವಣಿಯ ಶೀಟ್ ಹಾರಿ ಹೋಗಿದೆ. ಇದರಿಂದ ಮನೆಯಲ್ಲಿದ್ದ ಸಣ್ಣಪುಟ್ಟ ಮಕ್ಕಳಿಗೆ ಗಾಯವಾಗಿದೆ. ಇನ್ನು, ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮದಲ್ಲಿ ಗಾಳಿ ಮಳೆಗೆ ಪದ್ಮಾ ಪೂಜಾರಿ ಎಂಬುವರ ಮನೆಗೆ ಹಾನಿಯಾಗಿದೆ.

ಇದನ್ನೂ ಓದಿ: ಇಂದಿನಿಂದ ಒಂದು ವಾರ ಕರ್ನಾಟಕದಾದ್ಯಂತ ಸುರಿಯಲಿದೆ ಭಾರಿ ಮಳೆ

3 ದಿನ ಭಾರಿ ಗಾಳಿ ಬೀಸುವ ಸಾಧ್ಯತೆ

ಮೇ 02 ರಿಂದ ಮೇ 04, ರವರೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Thu, 1 May 25

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್