Bangalore Rains: ಬೆಂಗಳೂರಿನ ಹಲವೆಡೆ ಮಳೆ: ಮೆಜೆಸ್ಟಿಕ್, ಏರ್ಪೋರ್ಟ್ ರಸ್ತೆ ಕಡೆಗೆ ನಿಧಾನಗತಿ ಸಂಚಾರ
ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಆನಂದರಾವ್ ಸರ್ಕಲ್, ರೇಸ್ ಕೋರ್ಸ್ ಮುಂತಾದ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮೇ 5ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಂಗಳೂರು, ಏಪ್ರಿಲ್ 30: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ (Bengaluru) ಬಿಡುವು ನೀಡಿದ್ದ ಮಳೆರಾಯ (Rainfall) ಮತ್ತೆ ಆರ್ಭಟಿಸುತ್ತಿದ್ದಾನೆ. ಬುಧವಾರ ಬೆಂಗಳೂರು ನಗರದ ಹಲವೆಡೆ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಆನಂದ್‌ರಾವ್ ಸರ್ಕಲ್, ರೇಸ್ ಕೋರ್ಸ್ ಸುತ್ತಮುತ್ತ ಮಳೆಯಾಗುತ್ತಿದೆ. ಹಾಗೇ ಟೌನ್ ಹಾಲ್, ಶಾಂತಿನಗರ, ಜಯನಗರ, ಕೆಆರ್ ಮಾರುಕಟ್ಟೆ ಸುತ್ತಮುತ್ತ ಮಳೆ ಸುರಿಯುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿ ಮುಗಿಸಿಕೊಂಡು ತೆರಳುತ್ತಿರುವ ನೌಕರರಿಗೆ ಮಳೆ ಅಡ್ಡಿಯಾಗಿದೆ. ಮಳೆಯಿಂದ ಟ್ರಾಫಿಕ್‌ಜಾಮ್ ಉಂಟಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ.
ಕಂಟೊನಮೆಂಟ್ ರೈಲ್ವೆ ಸೇತುವೆ ಕೆಳಗೆ ಮಳೆ ನೀರು ನಿಂತಿರುವುದರಿಂದ ಮೇಖ್ರಿ ವೃತ್ತದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ದಕ್ಷಿಣ ಕನ್ನಡ ಜಿಲ್ಲೆ ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟ್ವಿಟರ್ ಪೋಸ್ಟ್
“ಸಂಚಾರಸಲಹೆ“ ಕಂಟೊನಮೆಂಟ್ ರೈಲ್ವೆ ಸೇತುವೆ ಕೆಳಗೆ ಮಳೆ ನೀರು ನಿಂತಿರುವುದರಿಂದ ಮೇಖ್ರಿ ವೃತ್ತದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. “Traffic advisory” Due to water logging The road from Contonment Railway Bridge towards Mekhri Circle Road .is having slow-moving traffic. pic.twitter.com/rtZX5Jg8kr
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) April 30, 2025
“ಸಂಚಾರಸಲಹೆ / Traffic advisory” ಸ್ಯಾಂಕೀ ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಏರ್ಪೋರ್ಟ್ ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. Due to water logging sankey road towards airport road is having slow-moving traffic.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) April 30, 2025
ಹಲವು ಜಿಲ್ಲೆಗಳಲ್ಲಿ ಮಳೆ
ಬುಧವಾರ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಂಟು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ ಮಾಡಲಾಗಿದೆ. ಮೇ 5ರವರೆಗೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ಇತ್ತು.
ಇದನ್ನೂ ಓದಿ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 1 ಮತ್ತು 2 ರಂದು ಮಳೆಯಾಗಲಿದೆ. ಇನ್ನು, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಪ್ರದೇಶದಲ್ಲೂ ಮಳೆ
ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ಉಜಿರೆ, ಚಾರ್ಮಡಿ, ಮುಂಡಾಜೆ, ನಡ, ಕಕ್ಕಿಂಜೆ, ಮಲವಂತಿಗೆ, ಡಿಡುಪೆ, ಇಂದಬೆಟ್ಟು, ಅಳದಂಗಡಿ ಮೊದಲಾದ ಪ್ರದೇಶಗಳಲ್ಲಿ ಮಂಗಳವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:18 pm, Wed, 30 April 25




