ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ (Arabian Sea) ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 48 ಗಂಟೆ ಕಾಲ ಭಾರಿ ಗಾಳಿ ಸಹಿತ ಮಳೆಯಾಗುವ (Rain) ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department), ಮೂನ್ಸೂಚನೆ ನೀಡಿದೆ. ಕರಾವಳಿ (Coastal) ಭಾಗದ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಕರಾವಳಿಯಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45-55 ಕಿ.ಮೀ ವರೆಗೂ ತಲುಪುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ ಮಳೆ ಇರಲಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಉತ್ತರ ಒಳನಾಡಿಗು ಕೂಡ ಯಲ್ಲೋ ಅಲರ್ಟ್ ಘೋಷಿಸಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುತ್ತದ್ದು, ಕೆಲವೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ನಿಂತರು, ನಿಲ್ಲದ ಮಳೆ ಅವಾಂತರ
ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ನಿಂತರು, ಮಳೆಯ ಅವಾಂತರ ಮಾತ್ರ ನಿಲ್ಲುತ್ತಿಲ್ಲ. ನಿರಂತರ ಮಳೆಗೆ ಒಂದಾದ ಮೇಲೊಂದರಂತೆ ಮನೆಗಳು ಕುಸಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೂವಿನಮನೆ ಗ್ರಾಮದಲ್ಲಿ ಮನೆಗಳ ಗೋಡೆ ಕುಸಿತಗೊಂಡಿವೆ.
ಮನೆಯ ಗೋಡೆ ಪಕ್ಕದಲ್ಲಿ ಯಾರು ಇಲ್ಲದ ಕಾರಣ ಅನಾಹುತ ತಪ್ಪಿದೆ. ಮಂಜುನಾಥ ಮತ್ತು ಗೋವಿಂದ ಎಂಬುವವರಿಗೆ ಸೇರಿದ ಎರಡು ಮನೆಗಳು ಕುಸಿದಿದ್ದು, ಅಂದಾಜು ಐದು ಲಕ್ಷ ರೂಪಾಯಿ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲಿಸಿದ್ದಾರೆ.
ಗರಗ ಗ್ರಾಮದಲ್ಲಿ ನಿರಂತರ ಮಳೆಗೆ ಕುಸಿದುಬಿದ್ದ ಮನೆ
ಧಾರವಾಡ: ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಿರಂತರ ಮಳೆಗೆ ಮನೆ ಕುಸಿದುಬಿದ್ದಿದೆ. ಮಡಿವಾಳಪ್ಪ ಗೋವನಕೊಪ್ಪ ಎಂಬುವರ ಮನೆ ಕುಸಿತಗೊಂಡಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 4:36 pm, Fri, 15 July 22