ಬೆಂಗಳೂರಿನಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗುವ ಸಾಧ್ಯತೆ! ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಈ ಬಾರಿ ಅನಿರೀಕ್ಷಿತ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗಲಿದೆ. ಮಳೆಯಿಂದ ಹಲವು ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ.
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದ ಮೀನುಗಾರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆಯಿಂದ ತಿಳಿಸಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಈ ಬಾರಿ ಅನಿರೀಕ್ಷಿತ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗಲಿದೆ. ಮಳೆಯಿಂದ ಹಲವು ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ. ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಮಳೆ ನಿಂತ ತಕ್ಷಣ ಕೆಲಸ ಮಾಡಲು ಸೂಚನೆ ಕೊಟ್ಟಿದ್ದೇನೆ. ತಗ್ಗು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಎನ್ಡಿಆರ್ಎಫ್ ತಂಡಕ್ಕೂ ಸೂಚನೆ ನೀಡಿದ್ದೇವೆ ಅಂತ ಮಾಹಿತಿ ನೀಡಿದರು.
ಮಳೆ ನಿಂತ ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಆಗಬೇಕು. 280 ಕೋಟಿ ಹಣಕ್ಕೆ ಟೆಂಡರ್ನಲ್ಲಿ ಅನುಮತಿ ನೀಡಿದ್ದೇವೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ್ದೇವೆ. ಅದಕ್ಕೆ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸುತ್ತೇವೆ. ಸಿದ್ದರಾಮಯ್ಯ ಪತ್ರ ಬರೆಯುವ ಮೊದಲೇ ಬೆಳೆ ಸಮಿಕ್ಷೆ ನಡೆಸಿ, ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೆವು ಅಂತ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ
Karnataka Weather Today: ರಾಜ್ಯಾದ್ಯಂತ ನ. 20ರವರೆಗೆ ಮಳೆ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥ; ಟಿವಿ9ನಲ್ಲಿ ಸುದ್ದಿ ಪ್ರಸಾರವಾದ ಬಳಿಕ ಎಚ್ಚೆತ್ತ ಅಧಿಕಾರಿಗಳು
Published On - 2:35 pm, Wed, 17 November 21