ಬೆಂಗಳೂರು: ಆಸಾನಿ ಚಂಡಮಾರುತ (Cyclone Asani) ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಭಾರಿ ಗಾಳಿ ಸಹಿತ ಮಳೆಯಾಗುತ್ತಿದೆ (Rain). ಆಂಧ್ರಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಂಡಮಾರುತದಿಂದ ಇಂದು ಹಾಗೂ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಬೀದರ್ನಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುತ್ತದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುತ್ತಿದೆ. ಕರ್ನಾಟಕದ ನಾನಾ ಭಾಗಗಳಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ್ದು, ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ಇಂದಿನಿಂದ ಅಸಾನಿ ಚಂಡಮಾರುತ:
ಒಡಿಶಾ, ಆಂಧ್ರಪ್ರದೇಶ ಮತ್ತು ಬಂಗಾಳದಲ್ಲಿ ಅಸಾನಿ ಚಂಡಮಾರುತದ ತೀವ್ರತೆ ಹೆಚ್ಚಾಗುತ್ತಿದೆ. ಅಸಾನಿ ಚಂಡಮಾರುತವು ತನ್ನ ದಾರಿಯಲ್ಲಿ ಸಾಗುತ್ತಿರುವುದರಿಂದ ಈ ವಾರ ಮೂರು ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯ ಮುನ್ಸೂಚನೆ ನೀಡಲಾಗಿದೆ. ಇಂದು ಸಂಜೆಯಿಂದ ಭಾರೀ ಮಳೆ ಪ್ರಾರಂಭವಾಗುತ್ತದೆ ಮತ್ತು ಒಡಿಶಾದ ಮೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮೇ 11ರಂದು 5 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ
Rohit Sharma: ತಮ್ಮದೇ ತಂಡದ ಬ್ಯಾಟರ್ಗಳಿಗೆ ಚಳಿ ಬಿಡಿಸಿದ ರೋಹಿತ್ ಶರ್ಮಾ: ಏನು ಹೇಳಿದ್ರು ಕೇಳಿ
ಕರ್ನಾಟಕದಲ್ಲಿ ಶಾಲೆ ಆರಂಭಕ್ಕೆ 5 ದಿನ ಬಾಕಿ; ಶಾಲೆಗಳಿಗೆ ಇನ್ನೂ ತಲುಪಿಲ್ಲ ಪಠ್ಯಪುಸ್ತಕ
Published On - 10:53 am, Tue, 10 May 22