ಬೆಂಗಳೂರಿನಲ್ಲಿ ಅಬ್ಬರದ ಮಳೆ: ಸಿಡಿಲು-ಗುಡುಗಿನ ಶಬ್ದಕ್ಕೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ

ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದೆ. ಬೆಂಗಳೂರಿನ ಜನರು ಮಳೆಯಿಂದ ಬೇಸತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಶುರುವಾಗಿದೆ.

ಬೆಂಗಳೂರಿನಲ್ಲಿ ಅಬ್ಬರದ ಮಳೆ: ಸಿಡಿಲು-ಗುಡುಗಿನ ಶಬ್ದಕ್ಕೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ
ಮಳೆ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 16, 2022 | 6:05 PM

ಬೆಂಗಳೂರು: ವೀಕೆಂಡ್​​ ಎಂದು ಮಜಾ ಮಾಡಲು ರಸ್ತೆಗಿಳಿದ ಬೆಂಗಳೂರಿನ (Bengaluru Rain) ಜನತೆಗೆ ಮಳೆರಾಯ ಶಾಕ್​ ನೀಡಿದ್ದು ಗಾಳಿ ಗುಡುಗು ಸಹಿತ ಜೋರು ಮಳೆ ಸುರಿದಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದ್ದು, ಜನರು ಮಳೆಯಿಂದ ಬೇಸತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಶುರುವಾಗಿದ್ದು, ನಗರದ ಶಾಂತಿನಗರ, ಕೆಆರ್ ಮಾರ್ಕೆಟ್, ಡಬಲ್ ರೋಡ್, ಕಾರ್ಪೋರೇಷನ್, ಮೈಸೂರ್ ಬ್ಯಾಂಕ್ ಸರ್ಕಲ್, ಜಯನಗರ, ಬಸವನಗುಡಿ, ಶಾಂತಿನಗರ, ರಿಚ್ಮಂಡ್ ಟೌನ್ ಬಳಿ ಜೋರು ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಡುವಂತ್ತಾಗಿದೆ. ಬೆಳ್ಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇದೀಗ ಗುಡುಗು ಮಿಂಚಿನ ಜೊತೆ ಮಳೆರಾಯನ ಆರ್ಭಟ ಶುರುವಾಗಿದೆ. ನಗರದ ಹಲವೆಡೆ ಮಳೆ ಆರಂಭವಾಗಿದ್ದು, ಬಸ್ ನಿಲ್ದಾಣ, ಫ್ಲೈ ಓವರ್ ಕೆಳಗಡೆ ಜನರು ಆಶ್ರಯ ಪಡೆಯುವಂತ್ತಾಗಿದೆ.

ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ (Karnataka Rains) ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ. 18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್ (Yellow Alert)​ ನೀಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಭಾರೀ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರವರೆಗೆ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆಯ ಬಳಿ ಮಳೆಯ ಅಬ್ಬರ ಹೆಚ್ಚುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ಇಂದು ಕರ್ನಾಟಕ ಸೇರಿ ಸುಮಾರು 15 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಕೊಂಕಣ ಮತ್ತು ಗೋವಾದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ವಿದರ್ಭ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಜಾರ್ಖಂಡ್, ಗುಜರಾತ್, ಮಧ್ಯ ಮಹಾರಾಷ್ಟ್ರ, ಮರಾಠವಾಡದಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:41 pm, Sun, 16 October 22

‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ