Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ಬೈಕ್​ಗಳು, ಇನ್ನೂ ಮೂರು ದಿನಕ್ಕೆ ಯೆಲ್ಲೊ ಅಲರ್ಟ್

ಬೆಂಗಳೂರು ಉತ್ತರದಲ್ಲಿರುವ ರಾಜಮಹಲ್ ಗುಟ್ಟಹಳ್ಳಿಯಲ್ಲಿ ಕೆಲವೇ ಗಂಟೆಗಳಲ್ಲಿ 5.9 ಸೆಂಮೀ ಮಳೆಯಾಗಿದೆ.

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ಬೈಕ್​ಗಳು, ಇನ್ನೂ ಮೂರು ದಿನಕ್ಕೆ ಯೆಲ್ಲೊ ಅಲರ್ಟ್
ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯಿಂದ ರಸ್ತೆಗಳ ಮೇಲೆ ನೀರು ಹರಿಯಿತು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 20, 2022 | 7:26 AM

ಬೆಂಗಳೂರು: ನಗರದಲ್ಲಿ ಬುಧವಾರ ರಾತ್ರಿ ಮತ್ತು ಗುರುವಾರ ನಸುಕಿನಲ್ಲಿ ವಿವಿಧೆಡೆ ಭಾರಿ ಮಳೆಯಾಗಿದ್ದು ರಸ್ತೆಗಳ ಮೇಲೆ ನೀರು ಹರಿಯಿತು. ವೇಗವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್​ಗಳನ್ನು ಹಿಡಿಯಲು ಮಾಲೀಕರು ಹರಸಾಹಸಪಟ್ಟರು. ಶಿವಾಜಿನಗರದ ಓಲ್ಡ್ ಮಾರ್ಕೆಟ್ ರಸ್ತೆಯ ಪ್ಯಾಲೇಸ್​ ಮಹಲ್ ಬಳಿ ಹಲವು ಬೈಕ್​ಗಳು ನೀರುಪಾಲಾಗಿವೆ. ಬನಶಂಕರಿಯ ಪ್ರಗತಿಪುರ ಬಡಾವಣೆಯ ಮನೆಗಳಿಗೆ ಮೋರಿ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಮನೆಗಳಿಂದ ನೀರು ಹೊರಹಾಕಲು ನಿವಾಸಿಗಳ ಹರಸಾಹಸಪಟ್ಟರು. ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದರು.

ಶೇಷಾದ್ರಿಪುರಂ ಮೆಟ್ರೋ ಸುರಂಗದ ತಡೆಗೋಡೆ ಕುಸಿದು 7 ಕಾರು, 2 ಬೈಕ್ ಜಖಂಗೊಂಡಿವೆ. ಕಾರಿನಲ್ಲಿ ಕುಳಿತಿದ್ದ ನಾಗಭೂಷಣ್, ಆನಂದ್​ ಅಪಾಯದಿಂದ ಪಾರಾಗಿದ್ದಾರೆ. ಕಳಪೆ ಕಾಮಗಾರಿ ಹಾಗೂ ಮೆಟ್ರೋ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ. ಬಿಎಂಆರ್​ಸಿಎಲ್​ ಅಧಿಕಾರಿಗಳೇ ನಷ್ಟ ಭರಿಸಬೇಕೆಂದು ವಾಹನ ಮಾಲೀಕರು ಒತ್ತಾಯಿಸಿದ್ದಾರೆ. ಈ ಕಾಂಪೌಂಡ್​ ಅನ್ನು ಮೆಟ್ರೋ ಅಧಿಕಾರಿಗಳೇ ಮುಂದೆ ನಿಂತು ಕಟ್ಟಿಸಿದ್ದರು. ಕೇವಲ ಹಾಲೋಬ್ರಿಕ್ಸ್​ ಮತ್ತು ಇಟ್ಟಿಗೆಗಳಿಂದ ತಾತ್ಕಾಲಿಕ ತಡೆಗೋಡೆ ಕಟ್ಟಿಸಲಾಗಿದೆ. ಸಿಮೆಂಟ್ ಪ್ಲಾಸ್ಟಿಂಗ್ ಆಗಿಲ್ಲ. ಕಾಂಪೌಂಡ್ ಕುಸಿದಿರುವ ಬಗ್ಗೆ ಮಾಹಿತಿ ನೀಡಿದರೂ ಯಾರೂ ಬಂದಿಲ್ಲ ಎಂದು ಮೆಟ್ರೋ ನಿಗಮದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪೂರ್ವ, ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು ಉತ್ತರದಲ್ಲಿರುವ ರಾಜಮಹಲ್ ಗುಟ್ಟಹಳ್ಳಿಯಲ್ಲಿ ಕೆಲವೇ ಗಂಟೆಗಳಲ್ಲಿ 5.9 ಸೆಂಮೀ ಮಳೆಯಾಗಿದೆ. ನಗರದಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ. ಮಳೆಯಿಂದಾಗಿ ಬುಧವಾರ ರಾತ್ರಿ ಶಾಂತಿನಗರ, ವಿಲ್ಸನ್​ಗಾರ್ಡನ್ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಪರದಾಡಿದರು. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ, ಸೇಂಟ್​ ಜೋಸೆಫ್​ ಕಾಲೇಜು ಬಳಿ ರಸ್ತೆಗಳು ಜಲಾವೃತಗೊಂಡು ಫುಟ್​ಪಾತ್​ ಮಟ್ಟಕ್ಕೆ ನೀರು ಹರಿಯಿತು.

ನಗರದ ವಿವಿಧೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರು ಸರಾಗವಾಗಿ ಹರಿದು ಹೋಗಲೆಂದು ಹಲವೆಡೆ ಮ್ಯಾನ್​ಹೋಲ್​ಗಳನ್ನು ತೆರೆದಿಡಲಾಯಿತು. ಹಲವು ಕಟ್ಟಡಗಳಲ್ಲಿ ಬೇಸ್​ಮೆಂಟ್​ನಲ್ಲಿ ನಿಲ್ಲಿಸಿದ್ದ ವಾಹನಗಳು ಜಲಾವೃತಗೊಂಡವು. ಸಂಜೆ 7.30ರ ಹೊತ್ತಿಗೆ ಮಳೆ ಬಿರುಸಾದ ಕಾರಣ ದ್ವಿಚಕ್ರ ವಾಹನಗಳಲ್ಲಿ ಮನೆಗಳಿಗೆ ಹೊರಟಿದ್ದವರು ಅಲ್ಲಲ್ಲಿ ನಿಂತುಬಿಟ್ಟರು. ಬಹುತೇಕ ಮೆಟ್ರೋ ನಿಲ್ದಾಣಗಳ ಕೆಳಗೆ ವಾಹನದಟ್ಟಣೆ ಇತ್ತು.

ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚು ಮಳೆ ದಾಖಲಾಗಿರುವ ವರ್ಷ 2017. ಆಗ ನಗರದಲ್ಲಿ ಒಟ್ಟು 1,696 ಮಿಮೀ (169 ಸೆಂಮೀ) ಮಳೆಯಾಗಿತ್ತು. ಈ ವರ್ಷ ನಗರದಲ್ಲಿ ಈಗಾಗಲೇ 1,706 (170 ಸೆಂಮೀ) ಮಿಮೀ ಮಳೆಯಾಗಿದ್ದು, ದಾಖಲೆ ಬರೆದಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆ ಸಾಧ್ಯತೆ

Published On - 7:26 am, Thu, 20 October 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ