AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಅಕ್ಟೋಬರ್​​ 24ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

ರಾಜ್ಯದಲ್ಲಿ ಅಕ್ಟೋಬರ್ 24ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆದರೆ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ಈ ಬಾರಿ ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಹೆಚ್ಚಿಗೆ ಚಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

Karnataka Weather: ಅಕ್ಟೋಬರ್​​ 24ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​
ಕರ್ನಾಟಕ ಹವಾಮಾನದ ಬಗ್ಗೆ ಎಸ್. ಪಾಟೀಲ್ ಮಾಹಿತಿ
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Oct 22, 2026 | 6:31 PM

Share

ಬೆಂಗಳೂರು, ಅಕ್ಟೋಬರ್​​ 22: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 24ರವರೆಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಗಳು ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಈ ಪ್ರದೇಶಗಳ್ಲಿ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಮುಂದಿನ ಮೂರು ದಿನಗಳವರೆಗೆ ಮಳೆ

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಖ್ಯವಾಗಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮುಂದಿನ ಮೂರು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಿದ್ದರೂ ಅಕ್ಟೋಬರ್​​ 25ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗುವ ಸಾಧ್ಯತೆ ಇದೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂಗಾರು ಮಳೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ: ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದ ಸ್ವಾಮೀಜಿ ಹೇಳಿಕೆ

ಉತ್ತರ ಒಳನಾಡು ಜಿಲ್ಲೆಗಳಿಂದ ಮಳೆ ದೂರ

ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ . ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಬಹಳ ಕಡಿಮೆ ಇವೆ. ಈ ವರ್ಷ ವಾಡಿಕೆಯ ಮಳೆಯ ಪ್ರಮಾಣ ಬಹಳ ಕಡಿಮೆ ಇದ್ದು, ಶೇ.30-40ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆಯಾದರೂ, ಉತ್ತರ ಒಳನಾಡಿನ ಬಹುತೇಕ ಬಹಳ ಜಿಲ್ಲೆಗಳಿಂದ ವರುಣ ದೂರವೇ ಉಳಿದಿದ್ದಾನೆ ಎಂದು ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಡಿಸೆಂಬರ್​​-ಫೆಬ್ರವರಿ ನಡುವೆ ಅಧಿಕ ಚಳಿ

ಈ ಬಾರಿ ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಹೆಚ್ಚಿಗೆ ಚಳಿ ಇರಲಿದೆ. ಅದರಲ್ಲಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಒಳನಾಡಲ್ಲಿ ಚಳಿ ಜಾಸ್ತಿಯಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಷ್ಟೊಂದು ಚಳಿ ಇರೋದಿಲ್ಲ. ಎಲ್​​ನಿನೋ ಹಿನ್ನಲೆ ಚಳಿಗಾಲದ ತೀವ್ರತೆ ಕಡಿಮೆ ಇರಲಿದ್ದು, ಉಷ್ಣತೆ ವಾಡಿಕೆಗಿಂತ ಸ್ವಲ್ಪ ಹೆಚ್ಚೇ ಇರಲಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:11 pm, Thu, 22 October 26

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ