ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ‌ ಪ್ರಕರಣ ಮೂವರು ಆರೋಪಿಗಳ ಬಂಧನ

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕನಕನಗರದಲ್ಲಿರುವ ಎಂಎಸ್‍ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ಕೆಲ ದಿನಗಳಹಿಂದೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ನಕಲಿ ಆಧಾರ್​ ಕಾರ್ಡ್​​, ವೋಟರ್​​ ಐಡಿ ಪತ್ತೆಯಾಗಿದ್ದವು. ಆರೋಪಿಗಳು ನಕಲಿ ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು ಎಂಬ ಅಂಶ ಬಯಲಾಗಿತ್ತು.

ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ‌ ಪ್ರಕರಣ ಮೂವರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on: Oct 27, 2023 | 2:57 PM

ಬೆಂಗಳೂರು ಅ.27: ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್​ ಐಡಿ (Fake Voter ID) ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಹೆಬ್ಬಾಳ (Hebbal) ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಭರತ್, ಮೌನೇಶ್, ರಾಘವೇಂದ್ರ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳ ಬಳಿ ಇದ್ದ 53 ನಕಲಿ ವೋಟರ್ ಐಡಿಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಗಳು ಕಂಪ್ಯೂಟರ್​ ಅಂಗಡಿ ಇಟ್ಟುಕೊಂಡಿದ್ದು, ಹಣ ಪಡೆದು ನಕಲಿ ವೋಟರ್​ ಐಟಿ ತಯಾರಿಸ್ತಿದ್ದರು. ಆರೋಪಿಗಳು ಉತ್ತರ ಭಾರತದಿಂದ ಬಂದವರಿಗೆ ನಕಲಿ ವೋಟರ್​ ಐಡಿಗಳನ್ನು ನೀಡುತ್ತಿದ್ದರು. ಸದ್ಯ ಪೊಲೀಸರು ವೋಟರ್ ಐಡಿಯನ್ನು ಚುನಾವಣಾ ಆಯೋಗಕ್ಕೆ‌ ಕಳುಹಿಸಿದ್ದಾರೆ.

ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ‌ ಪ್ರಕರಣ

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕನಕನಗರದಲ್ಲಿರುವ ಎಂಎಸ್‍ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ಕೆಲ ದಿನಗಳಹಿಂದೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ನಕಲಿ ಆಧಾರ್​ ಕಾರ್ಡ್​​, ವೋಟರ್​​ ಐಡಿ ಪತ್ತೆಯಾಗಿದ್ದವು. ಆರೋಪಿಗಳು ನಕಲಿ ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು ಎಂಬ ಅಂಶ ಬಯಲಾಗಿತ್ತು.

ಮೂವರು ಆರೋಪಿ ಬೆಂಗಳೂರು ನಗರದಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ಆಧಾರ್ ಕಾರ್ಡ್​, ಪಾನ್​ ಕಾರ್ಡ್​, ವೋಟರ್ ಐಡಿ ಮಾಡ್ತಿದ್ದರು. ಇವರಿಗೆ ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು. ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗುವುದಕ್ಕೆ ಸಹಕಾರ ನೀಡಿದ್ದಾರೆ ಎಂಬ ಆರೋಪ ಇವರ ಮೇಲೆ ಕೇಳಿ ಬಂದಿತ್ತು.

ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ಅಲ್ಲದೆ ಒರಿಜಿನಲ್ ಐಡಿ ಕಾರ್ಡ್ ಎಂದು ಹಣ ಪಡೆದು ಸರ್ಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತಿದ್ದ ಆರೋಪದ ಮೇಲೆ ಈ ಮೂವರ ವಿರುದ್ಧ ದೂರು ದಾಖಲಾಗಿತ್ತು. ಸಿಸಿಬಿ ಪೊಲೀಸರು ದಾಳಿ ಮಾಡಿ ಮೌನೇಶ್, ರಾಘವೇಂದ್ರ, ಭಗತ್​ನನ್ನು ವಶಕ್ಕೆ ಪಡೆದಿದ್ದರು. ದಾಳಿ ವೇಳೆ ಕಂಪ್ಯೂಟರ್ ಸೇರಿ ಹಲವು ವಸ್ತು ಜಪ್ತಿ ಮಾಡಲಾಗಿತ್ತು. ಆದರೆ ಆರೋಪಿಗಳು ಸಚಿವ ಬೈರತಿ ಸುರೇಶ್ ಅವರ ಆಪ್ತರು ಎಂಬ ಕಾರಣಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸದೆ ಪೊಲೀಸರು ಸುಮ್ಮನಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು . ಸಚಿವ ಭೈರತಿ ಪ್ರಭಾವದಿಂದ ಆರೋಪಿಗಳನ್ನು ಬಂಧಿಸದೆ ಕೇವಲ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ