AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ಹೆಬ್ಬಾಳ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ವಿಸ್ತರಣಾ ಕಾಮಗಾರಿ ಆಗಸ್ಟ್ 15 ರ ನಂತರ ಸಂಚಾರಕ್ಕೆ ಮುಕ್ತವಾಗಲಿದೆ. ಈ ಕಾಮಗಾರಿಯು ಎರಡು ಪಥದ ರಸ್ತೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ವಿಸ್ತರಿಸುತ್ತದೆ, ಇದರಿಂದ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತಕ್ಕೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ. ಬಿಡಿಎಯ 1600 ಸಿಎ ಸೈಟುಗಳ ಬಾಕಿ ಪಾವತಿಗೆ ಸಂಬಂಧಿಸಿದ ಮಾಹಿತಿ ತಿಳಿಸಲಾಗಿದೆ.

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ಹೆಬ್ಬಾಳ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
ಹೆಬ್ಬಾಳ ಫ್ಲೈಓವರ್
Shivaraj
| Updated By: ವಿವೇಕ ಬಿರಾದಾರ|

Updated on:Jul 04, 2025 | 3:25 PM

Share

ಬೆಂಗಳೂರು, ಜುಲೈ 04: ಹೆಬ್ಬಾಳ ಫ್ಲೈಓವರ್ (Hebbal Flyover) ಕಾಮಗಾರಿ ಆಗಸ್ಟ್ 15 ರ ನಂತರ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಡಿಎ (BDA) ಅಧ್ಯಕ್ಷ ಎನ್​ಎ ಹ್ಯಾರೀಸ್ (NA Haris) ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಮಗಾರಿಗೆ ವೇಗ ನೀಡಲಾಗಿದೆ. ನಿಧಾನಗತಿ ಕಾಮಗಾರಿಯಿಂದ ಹೆಚ್ಚು ವೆಚ್ಚವಾಗಿಲ್ಲ ಎಂದು ಹೇಳಿದರು. ಬಿಡಿಎ 1600 ಸಿಎ ಸೈಟುಗಳ ಪ್ರಿನ್ಸಿಪಾಲ್ ಅಮೌಂಟ್ (ಅಸಲು ಮೊತ್ತ) ಬಾಕಿ ಇದೆ. ಪಾವತಿಗೆ 120 ದಿನಗಳ ಕಾಲಾವಕಾಶ ನೀಡಲಾಗಿದೆ. 120 ದಿನಗಳ ಒಳಗೆ ಅಸಲು ಕಟ್ಟಿದರೇ ಶೇ 18 ರಷ್ಟು ಬಡ್ಡಿ‌ ಮನ್ನಾ ಮಾಡಲಾಗುತ್ತದೆ ಎಂದು ಹೇಳಿದರು.

ಹೆಬ್ಬಾಳ ಫ್ಲೈಓವರ್​ನ ಕೆ.ಆರ್.​ಪುರ ಲೂಪ್​ ನವೀಕರಿಸುವ ಕಾಮಗಾರಿಯನ್ನು 100 ದಿನದೊಳೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 2025ರ ಜನವರಿಯಲ್ಲಿ ಬಿಡಿಎಗೆ ಸೂಚನೆ ನೀಡಿದ್ದರು. ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಕಾಮಗಾರಿ ವೇಗದಿಂದ ಸಾಗುತ್ತಿದೆ.

ಏನಿದು ಕಾಮಗಾರಿ?

ವಿಮಾನ ನಿಲ್ದಾಣದ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಮಾರ್ಗವಾಗಿ ಬ್ಯಾಪ್ಟಿಸ್ಟ್​ ಆಸ್ಪತ್ರೆ ಕಡೆಗೆ ಬರುವ ಮಾರ್ಗದಲ್ಲಿ ಎರಡು ಪಥದ ರಸ್ತೆಯಿದ್ದು, ಇದನ್ನು ನಾಲ್ಕು ಪಥದ ರಸ್ತೆಯನ್ನಾಗಿ ವಿಸ್ತರಿಸಲಾಗುತ್ತಿದೆ. ಈ ಕಾಮಗಾರಿಯನ್ನು ಬಿಡಿಎ ಮಾಡುತ್ತಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ
Image
ಮುಚ್ಚುವ ಆತಂಕದಲ್ಲಿ ಜೀನ್ಸ್ ಉದ್ಯಮ: ಬೀದಿಗೆ ಬೀಳಲಿದೆ 2 ಲಕ್ಷ ಜನರ ಬದುಕು
Image
ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಟ್ವಿಸ್ಟ್
Image
ಮತ್ತೊಂದು ಭ್ರಷ್ಟಾಚಾರ ಆರೋಪ: ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ!
Image
ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ

ಬ್ಯಾಪ್ಟಿಸ್ಟ್​ ಆಸ್ಪತ್ರೆ ಕಡೆಯಿಂದ ನಿರ್ಮಾಣ ಹಂತದಲ್ಲಿರುವ ರ‍್ಯಾಂಪ್ ಕಾಮಗಾರಿಯನ್ನು ಪೂರ್ಣಗೊಳಿಸಿ ಕೆಆರ್​ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಹೋಗುವ ವಾಹನಗಳಿಗೆ ಅನುಕೂಲ ಮಾಡಿಕೊಡಲು ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಬ್ರ್ಯಾಂಚ್ ಬೆಂಗಳೂರಿನಲ್ಲಿ ಶುರು: ಹೇಗಿದೆ ನೋಡಿ

ವಿಮಾನ ನಿಲ್ದಾಣ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಬರುವುದಕ್ಕೆ ದ್ವಿಪಥ ರಸ್ತೆ ಮಾತ್ರ ಇದೆ. ಕೆ.ಆರ್​.ಪುರ ಕಡೆಯಿಂದ ಬರುವ ರಸ್ತೆ ಇದನ್ನು ಸೇರಿಕೊಳ್ಳುತ್ತದೆ. ವಿಮಾನ ನಿಲ್ದಾಣ ಕಡೆಯಿಂದ ನಗರದ ಕಡೆಗೆ ಪ್ರಯಾಣಿಸುವ ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ಸಂಚಾರ ದಟ್ಟಣೆಯನ್ನು ನಿವಾರಿಸಲು ರಸ್ತೆಯನ್ನು ವಿಸ್ತರಿಸಲಾಗುತ್ತಿದೆ.

ಹೆಬ್ಬಾಳ ಫ್ಲೈಓವರ್ ಬಳ್ಳಾರಿ ರಸ್ತೆ, ವಿಮಾನ ನಿಲ್ದಾಣ ಮತ್ತು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಹೀಗಾಗಿ, ಹೆಚ್ಚು ಸಂಚಾರ ದಟ್ಟಣೆ ಉಂಟಾಗುತ್ತದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಟ್ರಾಫಿಕ್​ ಸಮಸ್ಯೆಗೆ ಬ್ರೇಕ್​ ಬೀಳಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Fri, 4 July 25