AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕಾಮುಕ ಅರೆಸ್ಟ್

ಶನಿವಾರ ರಾತ್ರಿ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಕಾಮುಕ ರಾಜೇಶ್ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದು ತಕ್ಷಣ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಹೆಬ್ಬಾಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.

ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕಾಮುಕ ಅರೆಸ್ಟ್
ಅತ್ಯಾಚಾರ
Shivaprasad B
| Updated By: ಆಯೇಷಾ ಬಾನು|

Updated on: May 20, 2024 | 12:48 PM

Share

ಬೆಂಗಳೂರು, ಮೇ.20: ಸಿಲಿಕಾನ್ ಸಿಟಿಯಲ್ಲಿ ಕಾಮುಕನೋರ್ವ ಅಟ್ಟಹಾಸ ಮೆರೆದಿದ್ದಾನೆ. ಏನೂ ಅರಿಯದ 10 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮೀಷವೊಡ್ಡಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತ ಈ ಪೈಶಾಚಿಕ ಕೃತ್ಯ ಎಸಗಿದ್ದು ಹೆಬ್ಬಾಳ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.

ಉದ್ಯೋಗಕ್ಕಾಗಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ ರಾಜೇಶ್‌ ನಾಗೇನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ. ನೇಪಾಳ ಮೂಲದ ಬಾಲಕಿಯ ಪೋಷಕರು ನಾಗೇನಹಳ್ಳಿಯ ಅಪಾರ್ಟ್‌ಮೆಂಟ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಕಾಮುಕ ರಾಜೇಶ್ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದು ತಕ್ಷಣ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಹೆಬ್ಬಾಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. ಪೋಕ್ಸೋ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ಅಂಧ ವೈದ್ಯರ ಮನೆಯಲ್ಲಿ ಕಳ್ಳತನ: ಮಹಡಿಯಿಂದ ಬಿದ್ದು ಸಿಕ್ಕಿಹಾಕಿಕೊಂಡ ಹಳೆಯ ಕಳ್ಳ, ಈ ಸಿನಿಮೀಯ ಸ್ಟೋರಿ ಓದಿ

ಕುಡಿದು ಕಾರು ಚಾಲನೆ, ಬೈಕ್​ ಸವಾರ ಸಾವು

ಕುಡಿದು ಕಾರು ಚಲಾಯಿಸಿ ಯುವಕನೊಬ್ಬನನ್ನ ಬಲಿ ಪಡೆದಿದ್ದಾನೆ. ಬೆಂಗಳೂರಿನ ಸುಬ್ರಮಣ್ಯ ನಗರದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ವಿನಯ್ ಮೃತಪಟ್ಟಿದ್ದಾರೆ. ಕುಡಿದು ಓವರ್ ಸ್ಪೀಡ್ ನಲ್ಲಿ ಬಂದು ಚಾಲಕ ಹರಿನಾಥ್ ಬೈಕ್​ಗೆ ಗುದ್ದಿದ್ದು, ವಿನಯ್ ಆಸ್ಪತ್ರೆಗೆ ಸಾಗಿಸೋ ಮಧ್ಯೆ ಮೃತಪಟ್ಟಿದ್ದಾನೆ. ಸದ್ಯ ಕಾರು ಚಾಲಕ ಹರಿನಾಥ್​ನನ್ನ ಮಲ್ಲೇಶ್ವರಂ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೀನು ಹಿಡಿಯಲು ಹೋಗಿ ಇಬ್ಬರು ನೀರುಪಾಲು

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲಾಗಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲು ಕರೆಯಲ್ಲಿ ಘಟನೆ ನಡೆದಿದ್ದು, ಮುಡ್ಡಾಯಿಗುಡ್ಡೆ ನಿವಾಸಿಗಳಾದ ಹರೀಶ್ ಮತ್ತು ಹೃತೇಶ್ ಸಾವನ್ನಪ್ಪಿದ್ದಾರೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಅವಘಡ ಸಂಭವಿಸಿದ್ದು, ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ