AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟನಲ್ ರಸ್ತೆಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚೆಂದ ತಜ್ಞರು

ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗಿನ 8043 ಕೋಟಿ ರೂ. ವೆಚ್ಚದ ಸುರಂಗ ಯೋಜನೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ತಜ್ಞರು ಈ ಯೋಜನೆಯಿಂದ ಅನುಕೂಲಕ್ಕಿಂತ ಅನಾನುಕೂಲ ಹೆಚ್ಚು ಎಂದು ಹೇಳಿದ್ದಾರೆ. ಜಲಮೂಲಗಳಿಗೆ ಹಾನಿ, ಟ್ರಾಫಿಕ್ ಹೆಚ್ಚಳ ಮತ್ತು ನಿರ್ಮಾಣದಲ್ಲಿನ ಅಪಾಯಗಳ ಬಗ್ಗೆ ಎತ್ತಿ ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ ಟನಲ್ ರಸ್ತೆಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚೆಂದ ತಜ್ಞರು
ಬೆಂಗಳೂರಿನಲ್ಲಿ ಟನಲ್ ರಸ್ತೆಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚೆಂದ ತಜ್ಞರು
ಶಾಂತಮೂರ್ತಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 11, 2025 | 3:52 PM

Share

ಬೆಂಗಳೂರು, ಜನವರಿ 11: ನಗರದಲ್ಲಿ ಹೆಬ್ಬಾಳ ಟು ಸಿಲ್ಕ್ ಬೋರ್ಡ್ ಟನಲ್ (Hebbal-Silk Board Tunnel) ರಸ್ತೆ ನಿರ್ಮಾಣ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಟನಲ್ ರಸ್ತೆ ಯೋಜನೆಯ ನ್ಯೂನ್ಯತೆಗಳ ಬಗ್ಗೆ ಬಿಬಿಎಂಪಿ ಕಮಿಷನರ್​​ಗೆ ಸಂಸದ ಪಿಸಿ ಮೋಹನ್ ನಿನ್ನೆ​ ಪತ್ರ ಬರೆಯುವ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಇದೀಗ ಟನಲ್ ರಸ್ತೆಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಟನಲ್ ರಸ್ತೆ ಮತ್ತಷ್ಟು ಸಮಸ್ಯೆ ತಂದಿಡುತ್ತೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟನಲ್ ರಸ್ತೆಯಿಂದ ಅನಾನುಕೂಲ ಜಾಸ್ತಿ

ಟನಲ್ ರಸ್ತೆಯಿಂದ ಜನಸಾಮಾನ್ಯರಿಗೆ ಅನುಕೂಲ ಇಲ್ಲ. ಟನಲ್ ರಸ್ತೆಯಿಂದ ಜಲಮೂಲಗಳಿಗೆ ಹಾನಿಯಾಗುವ ಸಾಧ್ಯತೆಯಿದೆ. ಟ್ರಾಫಿಕ್ ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತೆ. ಟನಲ್ ರಸ್ತೆ ಬೆಂಗಳೂರಿಗೆ ಅವಶ್ಯಕವಲ್ಲ ಎಂದು ಸಿಟಿಜನ್ ಫಾರ್ ಸಿಟಿಜನ್ ಫೌಂಡೇಷನ್ ಸಂಸ್ಥಾಪಕ ರಾಜ್ ಕುಮಾರ್ ಥೇಲ್ಕರ್​ ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದ ಅನಾನುಕೂಲ ಜಾಸ್ತಿ ಅಂತಾ ವರದಿ ಕೂಡ ನೀಡಿದ್ದರು.

ಇದನ್ನೂ ಓದಿ: ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಅಪಸ್ವರ: ಏಕೆ? ಇಲ್ಲಿದೆ ಮಾಹಿತಿ

ಈ ಹಿಂದೆ ಕೂಡ ಹಲವು ಬಾರೀ ಟನಲ್ ರಸ್ತೆ ಬಗ್ಗೆ ಪಾಲಿಕೆ ಜೊತೆ ಚರ್ಚೆ ಮಾಡಲಾಗಿದೆ. ಟನಲ್ ರಸ್ತೆ ಆದರೆ ಹಲವು ಅಪಾಯ ಇದೆ. ಸುರಂಗ ನಿರ್ಮಾಣ ವೇಳೆ ಅವಘಡಗಳಾಗುತ್ತೆ. ಜೊತೆಗೆ ಮೆಟ್ರೋ ಮಾರ್ಗ ಕೂಡ ಸಮೀಪ ಇರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಟನಲ್ ನಿರ್ಮಾಣ ವೇಳೆ ಹಲವು ಅಡೆತಡೆಯಿದೆ ಎಂದು ಹೇಳಿದ್ದಾರೆ.

ಸರ್ಕಾರ ಟನಲ್ ಬದಲು ರಸ್ತೆ, ಮೂಲಸೌಕರ್ಯ ನೀಡಲಿ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಿಸಲಿ. ಟನಲ್ ರಸ್ತೆಯಿಂದ ಬರೀ ಹಣ ವ್ಯರ್ಥವಾಗುತ್ತದೆ. ಹೀಗಾಗಿ ಟನಲ್ ರಸ್ತೆ ಪ್ಲಾನ್ ಬಗ್ಗೆ ಪುನರ್ ಪರಿಶೀಲನೆ ಆಗಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸಮಯ ಬದಲಾವಣೆ

ಇನ್ನು ಸರ್ಕಾರ ಈ ಯೋಜನೆಗೆ ಬರೋಬ್ಬರಿ 8,043 ಕೋಟಿ ರೂ. ಮೀಸಲಿಟ್ಟಿದೆ. ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೂ ಅಂದರೆ 18 ಕಿ.ಮೀ ಉದ್ಧದ ಸುರಂಗ ಮಾರ್ಗ ಯೋಜನೆ ಇದಾಗಿದೆ. ಈ ಯೋಜನೆ ಬಗ್ಗೆ ಅಪಸ್ವರ ಕೇಳಿಬಂದಿದೆ. ಸಾರ್ವಜನಿಕರನ್ನ ಗಮನದಲ್ಲಿಟ್ಟುಕೊಂಡು ಯೋಜನೆ ಬಗ್ಗೆ ಚಿಂತಿಸಲಿ ಮತ್ತು ಮರುಪರಿಶೀಲಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಒತ್ತಾಯಿಸಿ ಸಂಸದ ಪಿಸಿ ಮೋಹನ್ ಪತ್ರ ಕೂಡ ಬರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ