AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ಸುರಂಗ ರಸ್ತೆ ಯೋಜನೆಗೆ ಮತ್ತಷ್ಟು ಹೆಚ್ಚಿದ ವಿರೋಧ: ಪರಿಸರದ ಮೇಲಾಗಲಿರುವ ಪರಿಣಾಮದ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ

ಮೇಖ್ರಿ ವೃತ್ತದಿಂದ ಹೆಬ್ಬಾಳ ಜಂಕ್ಷನ್‌ವರೆಗೆ ನಿರ್ಮಿಸಲು ಉದ್ದೇಶಿಸಿರುವ ಸುರಂಗ ರಸ್ತೆ ಯೋಜನೆಗೆ ಪರಿಸರ ಪ್ರೇಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಹಸಿರು ಸಂಪತ್ತು ಹಾಗೂ ಭೂಗರ್ಭ ಜಲದ ಮೇಲಾಗುವ ಹಾನಿಯ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮರಗಳ ಮಾರಣ ಹೋಮದ ಜೊತೆಗೆ ಹೆಬ್ಬಾಳ ಕೆರೆಯ ಮೇಲೂ ಯೋಜನೆಯಿಂದ ಪರಿಣಾಮ ಉಂಟಾಗುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಹೆಬ್ಬಾಳ ಸುರಂಗ ರಸ್ತೆ ಯೋಜನೆಗೆ ಮತ್ತಷ್ಟು ಹೆಚ್ಚಿದ ವಿರೋಧ: ಪರಿಸರದ ಮೇಲಾಗಲಿರುವ ಪರಿಣಾಮದ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ
ಹೆಬ್ಬಾಳ ಸುರಂಗ ಯೋಜನೆಗೆ ಮತ್ತಷ್ಟು ಹೆಚ್ಚಿದ ವಿರೋಧ
ಪ್ರಸನ್ನ ಹೆಗಡೆ
|

Updated on:Aug 23, 2026 | 6:44 AM

Share

ಮುಖ್ಯಾಂಶಗಳು

  • ಹೆಬ್ಬಾಳ ಸುರಂಗ ಯೋಜನೆಗೆ ಮತ್ತಷ್ಟು ಹೆಚ್ಚಿದ ವಿರೋಧ
  • ಯೋಜನೆಯು ಪರಿಸರದ ಮೇಲೆ ಪರಿಣಾಮ ಬೀರುವ ಆತಂಕ
  • ನಿಜಕ್ಕೂ ಯೋಜನೆಯ ಅಗತ್ಯವಿಲ್ಲವೆಂದ ಪರಿಸರ ಪ್ರಿಯರು

ಬೆಂಗಳೂರು, ಆಗಸ್ಟ್​​ 23: ಮೇಖ್ರಿ ವೃತ್ತದಿಂದ ಹೆಬ್ಬಾಳ ಜಂಕ್ಷನ್‌ವರೆಗೆ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 2.2 ಕಿ.ಮೀ ಉದ್ದದ ಸುರಂಗ ರಸ್ತೆ ಯೋಜನೆಯ ಅಗತ್ಯವಿಲ್ಲ ಎಂದು ಬೆಂಗಳೂರು ಎನ್ವಿರಾನ್‌ಮೆಂಟ್ ಫೋರಂ ಹಾಗೂ ಹೆಬ್ಬಾಳ ನೇಚರ್ ಸೊಸೈಟಿ ಅಭಿಪ್ರಾಯಪಟ್ಟಿದೆ. ‘ನೋ ಮೋರ್ ಟನಲ್ ವಿಷನ್’ ಶೀರ್ಷಿಕೆಯಡಿ ನಡೆದ ದುಂಡುಮೇಜಿನ ಸಭೆಯಲ್ಲಿ ಈ ಯೋಜನೆಯು ಬೆಂಗಳೂರಿನ ತೀವ್ರ ಸಂಚಾರ ದಟ್ಟಣೆ ಸಮಸ್ಯೆಗೆ ನಿಜವಾಗಿಯೂ ಪರಿಹಾರವಾಗುತ್ತದೆಯೇ ಎಂಬ ಬಗ್ಗೆ ತಜ್ಞರು ಮತ್ತು ಪರಿಸರ ಹೋರಾಟಗಾರರು ಚರ್ಚಿಸಿದ್ದಾರೆ. ಸರ್ಕಾರವು ಸುರಂಗ ರಸ್ತೆಗಿಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂಬ ಆಗ್ರಹ ಸಭೆಯಲ್ಲಿ ಕೇಳಿಬಂದಿದೆ.

ಪರಿಸರದ ಮೇಲೆ ಹಾನಿ ಆತಂಕ

ಸಭೆಯಲ್ಲಿ ಸುರಂಗ ರಸ್ತೆ ಯೋಜನೆಯ ಪರಿಸರದ ಮೇಲಿನ ಪರಿಣಾಮಗಳ ಕುರಿತೂ ವಿಸ್ತೃತ ಚರ್ಚೆ ನಡೆಯಿತು. ವಿಶೇಷವಾಗಿ ಭೂಗರ್ಭ ಜಲ ಹಾಗೂ ಹಸಿರು ಸಂಪತ್ತಿನ ಮೇಲೆ ಉಂಟಾಗುವ ಹಾನಿಯ ಬಗ್ಗೆ ಆತಂಕ ವ್ಯಕ್ತವಾಯಿತು. ಇನ್ನು, ಸುರಂಗ ರಸ್ತೆ ಯೋಜನೆಗಳ ನಿಜವಾದ ಅಗತ್ಯವಿಲ್ಲ. ಪ್ರಸ್ತುತ ನಾಲ್ಕು ಮೆಟ್ರೋ ಹಾಗೂ ಎರಡು ಉಪನಗರ ರೈಲು ಸೇರಿದಂತೆ ಒಟ್ಟು ಆರು ಸಾರ್ವಜನಿಕ ಸಾರಿಗೆ ಯೋಜನೆಗಳು ಪ್ರಗತಿಯಲ್ಲಿವೆ. ಇವು ಮೆಖ್ರಿ ವೃತ್ತದಿಂದ ಹೆಬ್ಬಾಳದವರೆಗಿನ ಸಂಚಾರ ದಟ್ಟಣೆಯನ್ನು ನೇರವಾಗಿ ಕಡಿಮೆ ಮಾಡಲಿವೆ. ಸುರಂಗ ರಸ್ತೆ ಪೂರ್ಣಗೊಳ್ಳುವ ಮುನ್ನವೇ ಈ ಯೋಜನೆಗಳಲ್ಲಿ ಕನಿಷ್ಠ ಮೂರು ಪೂರ್ಣಗೊಳ್ಳಲಿವೆ ಎಂದು ಹೋರಾಟಗಾರು ತಿಳಿಸಿದ್ದಾರೆ.

ಇದನ್ನೂ ಓದಿ: ಹಳ್ಳ ಹಿಡಿದ ಬಿ-ಖಾತೆಯಿಂದ ಎ-ಖಾತೆ ನೀಡುವ ಯೋಜನೆ: ಆಗಿದ್ದೇನು?

ಈ ಯೋಜನೆಗಳು ಗಂಭೀರ ಪರಿಸರ ಪರಿಣಾಮ ಉಂಟುಮಾಡಲಿವೆ. ಇಂದಿರಾನಗರ 100 ಅಡಿ ರಸ್ತೆಯ ಫ್ಲೈಓವರ್ ಯೋಜನೆಯ ಉದಾಹರಣೆಯನ್ನೇ ತೆಗೆದುಕೊಂಡರೆ, ನಾಗರಿಕರ ಸಮೀಕ್ಷೆಯ ಪ್ರಕಾರ ಸುಮಾರು 1,000 ಮರಗಳು ಹಾನಿಗೊಳಗಾಗಲಿವೆ. ಹೆಬ್ಬಾಳದ ಸಣ್ಣ ಸುರಂಗ ರಸ್ತೆ ಯೋಜನೆಯು ತೆರೆದ ಮೈದಾನಗಳು, ಪಶುವೈದ್ಯಕೀಯ ಕಾಲೇಜು ಸುತ್ತಮುತ್ತಲಿನ ನೂರಾರು ಮರಗಳು ಹಾಗೂ ಹೆಬ್ಬಾಳ ಕೆರೆಯ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಬೆಂಗಳೂರು ಎನ್ವಿರಾನ್‌ಮೆಂಟ್ ಟ್ರಸ್ಟ್‌ನ ಟ್ರಸ್ಟಿ ದತ್ತಾತ್ರೇಯ ಟಿ. ದೇವರೆ ತಿಳಿಸಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:44 am, Sun, 23 August 26

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ