AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮದ ಮೇಲಿನ ನೈಜದಾಳಿಗಳ ಪಟ್ಟಿ ನಾವು ಕೊಡ್ತೇವೆ; ಸಿಎಂ ಸಿದ್ದರಾಮಯ್ಯ ಟ್ವೀಟ್​

ಮಾಧ್ಯಮದ ಮೇಲಿನ ನೈಜದಾಳಿಗಳ ಪಟ್ಟಿ ನಾವು ಕೊಡುತ್ತೇವೆ, ಇದನ್ನೆಲ್ಲಾ ನೀವು ಮರೆತಿರಬಹುದು, ಆದರೆ ‘ಇಂಡಿಯಾ’ ಮರೆತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ(ಟ್ವೀಟರ್​) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್‌ ಮಾಡಿದ್ದಾರೆ.

ಮಾಧ್ಯಮದ ಮೇಲಿನ ನೈಜದಾಳಿಗಳ ಪಟ್ಟಿ ನಾವು ಕೊಡ್ತೇವೆ; ಸಿಎಂ ಸಿದ್ದರಾಮಯ್ಯ ಟ್ವೀಟ್​
ಸಿದ್ದರಾಮಯ್ಯ
Anil Kalkere
| Edited By: |

Updated on: Sep 15, 2023 | 10:03 PM

Share

ಬೆಂಗಳೂರು, ಸೆ.15: ನಿನ್ನೆ(ಸೆ.14) ಇಂಡಿಯಾ ಒಕ್ಕೂಟದ ಮಾಧ್ಯಮ ವಿಭಾಗದ ಸಭೆ ನಡೆದಿತ್ತು. ಬಳಿಕ ದೇಶದ ಪ್ರಮುಖ ಸುದ್ದಿ ಸಂಸ್ಥೆಯವರ ಪ್ರಮುಖ 14 ನಿರೂಪಕರು ನಡೆಸುವ ಕಾರ್ಯಕ್ರಮಗಳಿಗೆ ಇಂಡಿಯಾ ಒಕ್ಕೂಟದ ಸದಸ್ಯರುಗಳನ್ನು ಕಳುಹಿಸುವುದಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಜೆಪಿ ನಡ್ಡಾರವರೇ ಮಾಧ್ಯಮ ಮೇಲಿನ ನೈಜದಾಳಿಗಳ ಪಟ್ಟಿ ನಾವು ಕೊಡುತ್ತೇವೆ, ಇದನ್ನೆಲ್ಲಾ ನೀವು ಮರೆತಿರಬಹುದು, ಆದರೆ ‘ಇಂಡಿಯಾ’ ಮರೆತಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪೋಸ್ಟ್‌ ಮಾಡಿದ್ದಾರೆ.

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು

1) ಸಿದ್ದಿಕ್‌ ಕಪ್ಪನ್‌ 2) ಮೊಹಮ್ಮದ್‌ ಝುಬೇರ್ 3) ಅಜಿತ್‌ ಓಝಾ 4) ಜಸ್ಪಾಲ್‌ ಸಿಂಘ್‌ 5) ಸಜದ್‌ ಗುಲ್‌

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು

1) ರಾಕೇಶ್‌ ಸಿಂಗ್‌ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ 2) ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ 3) ಜಿ ಮೋಸೆಸ್‌, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ 4) ಪರಾಗ್‌ ಭುಯಾನ್, ಅಸ್ಸಾಮ್‌, ಎಸ್‌ಐನೇಮಕಾತಿ ಹಗರಣ ಕುರಿತು ವರದಿ 5) ಗೌರಿ ಲಂಕೇಶ್‌, ಕೋಮುವಾದ ವಿರೋಧಿಸಿದ್ದಕ್ಕೆ

ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ

2015 – 136ನೇ ಸ್ಥಾನ 2019 – 140ನೇ ಸ್ಥಾನ 2022 – 150ನೇ ಸ್ಥಾನ 2023 – 161ನೇ ಸ್ಥಾನ

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಎಂದು ಬರೆದು ಸಿಎಂ ಟ್ವೀಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?