Narendra Modi: ಮಾ. 12ರ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

|

Updated on: Mar 11, 2023 | 8:26 PM

ರಾಜ್ಯದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಮಂಡ್ಯ ಮತ್ತು ಧಾರವಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಕಾರ್ಯಕ್ರಮದ ವೇಳಾಪಟ್ಟಿ ಹೀಗಿದೆ.

Narendra Modi: ಮಾ. 12ರ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ
Image Credit source: indiatimes.com
Follow us on

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ವರ್ಷದ ಆರಂಭದಿಂದ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ನಾಳೆ ಭೇಟಿ ಸೇರಿ ಒಟ್ಟು 6 ಬಾರಿ ರಾಜ್ಯಕ್ಕೆ ಭೇಟಿ ನೀಡಿದಂತಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಾ.12 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ (Bengaluru-Mysore Express Way) ಲೋಕಾರ್ಪಣೆ ಸೇರಿಸಿದಂತೆ ಸುಮಾರು 16,000 ಕೋಟಿ ರೂ. ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿಯವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಹಾಗೇ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಧಾರವಾಡ ಐಐಟಿ ಉದ್ಘಾಟನೆ: ಕಾರ್ಯಕ್ರಮಕ್ಕೆ ಭರದಿಂದ ನಡೆದಿದೆ ಸಿದ್ದತೆ, ಖಾಕಿ ಕಣ್ಗಾವಲು

ನಾಳೆಯ ರಾಜ್ಯ ಪ್ರವಾಸದ ವಿವರ ಹೀಗಿದೆ

  1.  ನಾಳೆ ಬೆಳಗ್ಗೆ 11 ಗಂಟೆಗೆ ಮೈಸೂರು ಏರ್​ಪೋರ್ಟ್​ಗೆ ಮೋದಿ ಆಗಮಿಸಲಿದ್ದು, 11.30ಕ್ಕೆ ಮೈಸೂರಿನಿಂದ ಹೆಲಿಕಾಪ್ಟರ್​ನಲ್ಲಿ ಮಂಡ್ಯದ PES ಕಾಲೇಜಿಗೆ ಎಂಟ್ರಿ ನೀಡಲಿದ್ದಾರೆ.
  2. 11.45ಕ್ಕೆ ಐಬಿಯಿಂದ ಫ್ಯಾಕ್ಟರಿ ಸರ್ಕಲ್​​ವರೆಗೂ ರೋಡ್​ಶೋ ನಡೆಸಲಿದ್ದಾರೆ. ಬಳಿಕ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ವೀಕ್ಷಣೆ.
  3. ಬಳಿಕ ರಸ್ತೆ ಮಾರ್ಗವಾಗಿ ಗೆಜ್ಜಲಗೆರೆಗೆಯಲ್ಲಿ ದಶಪಥ ರಸ್ತೆ ಉದ್ಘಾಟನೆ, ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ.
  4. ಜನರ ಜತೆ ಸಂವಾದ ನಡೆಸಲಿರುವ ಪ್ರಧಾನಿ ಮೋದಿ, ರಾಜ್ಯ, ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಪ್ರಧಾನಿ ಮೋದಿ ನೇರವಾಗಿ ಧಾರವಾಡಕ್ಕೆ ಹಾರಲಿದ್ದಾರೆ.
  5. ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  6. ಧಾರವಾಡದಲ್ಲಿ ಬರೋಬ್ಬರಿ 535 ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ ಅಂದರೆ ಐಐಟಿಯನ್ನ ಲೋಕಾರ್ಪಣೆ ಮಾಡಲಿದ್ದಾರೆ.
  7. 852 ಕೋಟಿ ವೆಚ್ಚದಲ್ಲಿ ಬೃಹತ್‌ ಕಟ್ಟಡ ನಿರ್ಮಾಣವಾಗಿದ್ದು, ಸಂಪೂರ್ಣ ಪರಿಸರ ಸ್ನೇಹಿಯಾಗಿದೆ. ಹೀಗಾಗಿ ಇದನ್ನ ದೇಶದ ಮೊದಲ ಹಸಿರು ಐಐಟಿ ಎನ್ನಲಾಗುತ್ತಿದೆ. ಐಐಟಿ ಉದ್ಘಾಟಿಸಿದ ಬಳಿಕ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
  8. ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ನಿರ್ಮಾಣವಾಗಿರುವ ವಿಶ್ವದ ಅತಿ ಉದ್ದದ ರೈಲ್ವೇ ಪ್ಲಾಟ್‌ಫಾರ್ಮ್​​ ಸುಮಾರು 20 ಕೋಟಿ ವೆಚ್ಚದಲ್ಲಿ 1,507 ಮೀಟರ್ ಉದ್ದದ ವೇದಿಕೆ ನಿರ್ಮಿಸಲಾಗಿದೆ.
  9. ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಭಾಗವಾಗಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮೋದಿ ನೆರವೇರಿಸಲಿದ್ದಾರೆ. ಈ ಯೋಜನೆಗಳ ಒಟ್ಟು ಅಂದಾಜು ವೆಚ್ಚ ಸುಮಾರು 520 ಕೋಟಿ ರೂ. ಬಳಿಕ ದೆಹಲಿಗೆ ಪ್ರಧಾನಿ ಮೋದಿ ಪ್ರಯಾಣ ಬೆಳೆಸಲಿದ್ದಾರೆ.
  10. ಐಐಟಿಗೆ ಸೇರುವ ರಸ್ತೆಗಳಲ್ಲಿ ಒಟ್ಟು 1484 ಪೊಲೀಸ್​ ಸಿಬ್ಬಂದಿಯ ನಿಯೋಜನೆ ಮಾಡಲಾಗಿದ್ದು, 5 ಎಸ್ಪಿ, 8 ಹೆಚ್ಚುವರಿ ಎಸ್ಪಿ, 28 ಡಿವೈಎಸ್ಪಿ, 63 ಪೊಲೀಸ್ ಇನ್ಸ್ಪೆಕ್ಟರ್, 134 ಪಿಎಸ್ಸೈ, 158 ಎಎಸ್‌ಐ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:47 pm, Sat, 11 March 23