AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು: ಓವರ್ ಟೈಂ ಕೆಲಸಕ್ಕೆ ಸಿದ್ಧರಿರಲು ಸೂಚನೆ

ಪಾಕಿಸ್ತಾನದ ವಿಫಲ ದಾಳಿಗಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡುತ್ತಿದ್ದು, ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಆಕಾಶದಲ್ಲೇ ನಾಶಪಡಿಸಿದೆ. ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್​ಎಎಲ್​​ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಿಬ್ಬಂದಿಯ ರಜೆಗಳನ್ನೆಲ್ಲ ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧರಿರಲು ಸೂಚನೆ ನೀಡಲಾಗಿದೆ.

ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು: ಓವರ್ ಟೈಂ ಕೆಲಸಕ್ಕೆ ಸಿದ್ಧರಿರಲು ಸೂಚನೆ
ಎಚ್​ಎಎಲ್ (ಸಾಂದರ್ಭಿಕ ಚಿತ್ರ)
Ganapathi Sharma
|

Updated on: May 09, 2025 | 6:45 AM

Share

ಬೆಂಗಳೂರು, ಮೇ 9: ಆಪರೇಷನ್ ಸಿಂದೂರ್ ನಂತರದ ಬೆಳವಣಿಗೆಗಳಿಂದ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿರುವ (Bengaluru) ಹೆಚ್​ಎಎಎಲ್​​ನಲ್ಲಿ (Hindustan Aeronautics Limited) ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್​ಎಎಎಲ್​​ನ ಎಲ್ಲ ಸಿಬ್ಬಂದಿಯ ರಜೆ ರದ್ದುಗೊಳಿಸಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧರಿರುವಂತೆ ಸೂಚಿಸಲಾಗಿದೆ. ಯುದ್ಧ ವಿಮಾನಗಳ ನಿರ್ವಹಣೆಯ ಕಾರಣ ಕಡ್ಡಾಯ ಹಾಜರಿರುವಂತೆ ಸಿಬ್ಬಂದಿಗೆ, ತಂತ್ರಜ್ಞರಿಗೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಎದುರಿಸಲು ತಯಾರಿ ನಡೆಸುವಂತೆ ನಿರ್ದೇಶನ ನೀಡಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಯಾಗಿದೆ. 1940 ರ ಡಿಸೆಂಬರ್ 23 ರಂದು ಸ್ಥಾಪನೆಯಾದ ಹೆಚ್​​ಎಎಲ್ ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿದೆ.

ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಪರಿಸ್ಥಿತಿ

ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನವು ಭಾರತದ 15 ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಮಾಡಲು ಮುಂದಾಗಿದ್ದು, ಅದನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆ ತಡೆದಿದೆ. ಇದರ ಬೆನ್ನಲ್ಲೇ ಭಾರತೀಯ ಸೇನೆ ಕೂಡ ಪಾಕಿಸ್ತಾನದ ಅದೇ ತೀವ್ರತೆಯಲ್ಲಿ ಲಾಹೋರ್, ಕರಾಚಿಗಳ ಮೇಲೆ ದಾಳಿ ನಡೆದಿತ್ತು. ನಂತರ ಮತ್ತೆ ಪಾಕಿಸ್ತಾನ ಜಮ್ಮು ವಾಯುನೆಲೆಯ ಮೇಲೆ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಮಿಂಚಿನ ದಾಳಿ ನಡೆಸಿವೆ.

ಇದನ್ನೂ ಓದಿ
Image
ಮತ್ತೆ ಪಾಕಿಸ್ತಾನದೊಳಗೆ ನುಗ್ಗಿದ ಭಾರತ; ಇಸ್ಲಮಾಬಾದ್, ಲಾಹೋರ್ ಮೇಲೆ ದಾಳಿ
Image
ಚೀನಾ ಜೆಟ್‌ ಬಳಸಿದ್ದೇವೆಂಬ ಪಾಕ್ ಹೇಳಿಕೆಗೆ ಬೀಜಿಂಗ್ ಪ್ರತಿಕ್ರಿಯೆ
Image
ದಾಳಿಗೆ ಯತ್ನ: ಪಾಕ್​​​ ಫೈಟರ್​ ಜೆಟ್ ಧ್ವಂಸಗೊಳಿಸಿದ​ ಭಾರತೀಯ ಸೇನಾಪಡೆ
Image
ಮೋದಿ ನಾಯಕತ್ವ ಮೆಚ್ಚಿದ ದೇವೇಗೌಡ: ಪ್ರಧಾನಿಗೆ ಮಾಜಿ ಪ್ರಧಾನಿ ಪತ್ರ

ಭಾರತದ ಪ್ರತಿದಾಳಿಗೆ ಬೆಚ್ಚಿಬಿದ್ದ ಪಾಕಿಸ್ತಾನ

ಪಾಕಿಸ್ತಾನದ ಪ್ರಚೋದನಕಾರಿ ಕ್ರಮಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಪಾಕಿಸ್ತಾನದ ಮೇಲೆ ಸಂಪೂರ್ಣ ದಾಳಿ ನಡೆಸಿದೆ. ಲಾಹೋರ್, ಇಸ್ಲಾಮಾಬಾದ್, ಕರಾಚಿ, ಸಿಯಾಲ್‌ಕೋಟ್, ಬಹಾವಲ್ಪುರ್, ಪೇಶಾವರ್ ಮತ್ತು ಕೋಟ್ಲಿಯಲ್ಲಿ ತ್ವರಿತ ಪ್ರತೀಕಾರದ ಕ್ರಮ ಕೈಗೊಳ್ಳುವ ಮೂಲಕ ಭಾರತ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡಿದೆ. ಪಠಾಣ್‌ಕೋಟ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿತು. ಆದರೆ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯ ತ್ವರಿತ ಮತ್ತು ಪರಿಣಾಮಕಾರಿ ಕ್ರಮವು ಎಲ್ಲಾ ದಾಳಿಗಳನ್ನು ವಿಫಲಗೊಳಿಸಿತು.

ಇದನ್ನೂ ಓದಿ: ಆಪರೇಷನ್ ಸಿಂದೂರ್: ಹ್ಯಾಮರ್, ಲಾಯ್ಟರಿಂಗ್ ಮ್ಯುನಿಶನ್​​ಗಳ ತಯಾರಿಸಿದ್ದು ಬೆಂಗಳೂರಿನ ಕಂಪನಿಗಳು

ಪಾಕಿಸ್ತಾನದ ನಿರಂತರ ಪ್ರಚೋದನಕಾರಿ ಕ್ರಮಗಳು ಮತ್ತು ಕದನ ವಿರಾಮ ಉಲ್ಲಂಘನೆಗಳಿಗೆ ಪ್ರತಿಕ್ರಿಯೆಯಾಗಿ ಭಾರತವು ಕರಾಚಿ ಬಂದರನ್ನು ಗುರಿಯಾಗಿಸಿಕೊಂಡು ದೊಡ್ಡ ದಾಳಿ ನಡೆಸಿದೆ. ಕರಾಚಿ ಬಂದರಿನಲ್ಲಿ ಹಲವಾರು ದೊಡ್ಡ ಸ್ಫೋಟಗಳು ಕೇಳಿಬಂದಿವೆ. ಭಾರತದ ಈ ಕ್ರಮದಿಂದಾಗಿ ಕರಾಚಿ ಬಂದರು ದೊಡ್ಡ ಮಟ್ಟದ ಹಾನಿಗೆ ಒಳಗಾಗಿದೆ ಎಂದು ಹೇಳಲಾಗುತ್ತಿದೆ. ಈ ಪ್ರತಿದಾಳಿಯನ್ನು ಭಾರತೀಯ ನೌಕಾಪಡೆ ನಡೆಸದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ