AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಏರ್​ಪೋರ್ಟ್​, ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್​

ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದ ನಂತರ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಾದ ಮೆಜೆಸ್ಟಿಕ್ ಬಸ್ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರಿಗೆ ಜನರು ಸಹಕಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಏರ್​ಪೋರ್ಟ್​, ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್​
ಏರ್​​ಪೋರ್ಟ್​ನಲ್ಲಿ ಭದ್ರತೆ
ನವೀನ್ ಕುಮಾರ್ ಟಿ
| Updated By: ಪ್ರಸನ್ನ ಹೆಗಡೆ|

Updated on: Nov 11, 2025 | 9:33 AM

Share

ಬೆಂಗಳೂರು, ನವೆಂಬರ್​ 11: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಹಿನ್ನೆಲೆ ಬೆಂಗಳೂರಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಏರ್​ಪೋರ್ಟ್​ಗೆ ಬರುವ & ಹೋಗುವ ವಾಹನಗಳ ಮೇಲೆ‌‌ ಹದ್ದಿನಕಣ್ಣಿಡಲಾಗಿದೆ. ಏರ್ಪೋಟ್ ಭದ್ರತೆಗೆ ಹೆಚ್ಚುವರಿ ಶಸ್ತ್ರ ಸಜ್ಜಿತ ಸಿಐಎಸ್ಎಫ್​ ನಿಯೋಜನೆ ಜೊತೆಗೆ ವಿಮಾನ ನಿಲ್ದಾಣದ ಒಳ & ಹೊರ ಆವರಣದಲ್ಲಿ ಪ್ಯಾಟ್ರೋಲಿಂಗ್ ಗಸ್ತು ಹೆಚ್ಚಳ ಮಾಡಲಾಗಿದೆ. ಏರ್​ಪೋರ್ಟ್​ಗೆ ಬರುವ ಪ್ರಯಾಣಿಕರು, ಸಿಬ್ಬಂದಿಯ ತಪಾಸಣೆ ಮಾಡಲಾಗುತ್ತಿದೆ. ಪಾರ್ಕಿಂಗ್ ಏರಿಯಾ ಸೇರಿ ಎಲ್ಲಡೆ ಭದ್ರತಾ ಪಡೆ ‌ ಅಲರ್ಟ್ ಆಗಿದೆ.

ಮೆಜೆಸ್ಟಿಕ್​ ಸುತ್ತಮುತ್ತ ಬಿಗಿ ಭದ್ರತೆ

ಜನನಿಬಿಡ ಸ್ಥಳಗಳಾದ ಮೆಜೆಸ್ಟಿಕ್​ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣ​ ಬಳಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ಜೊತೆಗೆ ಶ್ವಾನದಳದಿಂದ ರೈಲು ನಿಲ್ದಾಣ ಸುತ್ತಮುತ್ತ ಪರಿಶೀಲನೆ ನಡೆಸಲಾಗಿದೆ. ಮೆಜೆಸ್ಟಿಕ್​ ಸುತ್ತಮುತ್ತ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಬಸ್​​​​ ನಿಲ್ದಾಣ, ರೈಲ್ವೆನಿಲ್ದಾಣದಲ್ಲಿ ಹೆಚ್ಚುವರಿ ಪೊಲೀಸರನ್ನ ನೇಮಿಸಲಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಬೆಂಗಳೂರಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ದೆಹಲಿ ಸ್ಫೋಟ ಬೆನ್ನಲ್ಲೇ ಕರ್ನಾಟಕದಲ್ಲೂ ಹೈಅಲರ್ಟ್​: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಸಿಎಂ ಸಿದ್ದರಾಮಯ್ಯ ಮನವಿ

ಕಾರು ಸ್ಪೋಟ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಅಲ್ಲದೆ, ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ