AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 12 ರವರೆಗೆ HSRP ಅಳವಡಿಸಲು ಅವಕಾಶ ನೀಡಿದ ಹೈಕೋರ್ಟ್

ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಎರಡ್ಮೂರು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೆ ಇನ್ನೂ ಕೂಡ ವಾಹನ ಮಾಲೀಕರು ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಲು ಮುಂದಾಗಿಲ್ಲ. ಎರಡು ಕೋಟಿ ವಾಹನಗಳ ಪೈಕಿ ಕೇವಲ 41 ಲಕ್ಷ ವಾಹನ ಸವಾರರು ಮಾತ್ರ ಹೆಚ್ಎಸ್ಆರ್ಪಿ ಅಳವಡಿಸಿಕೊಂಡಿದ್ರೆ, ಇತ್ತ ನಕಲಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಂಪನಿಗಳು ತಲೆ ಎತ್ತಿದ್ದು ಇದರ ವಿರುದ್ಧ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ಫೈಲ್ ಮಾಡಲಾಗಿದೆ.

ಜೂನ್ 12 ರವರೆಗೆ HSRP ಅಳವಡಿಸಲು ಅವಕಾಶ ನೀಡಿದ ಹೈಕೋರ್ಟ್
ಹೈಕೋರ್ಟ್
Kiran Surya
| Edited By: |

Updated on: Jun 01, 2024 | 7:29 AM

Share

ಬೆಂಗಳೂರು, ಜೂನ್.01: ರಾಜ್ಯ ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಕೆ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಇಂದು ಮಧ್ಯರಾತ್ರಿ 12 ರವರೆಗೆ ಗಡುವು ನೀಡಲಾಗಿತ್ತು, ಆದರೆ ಎರಡ್ಮೂರು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿದೆ. ರಾಜ್ಯದ 2 ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ ಕೇವಲ 41 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಕೊಳ್ಳಲು ಮುಂದಾಗಿದ್ದಾರೆ.

ಈಗಾಗಲೇ ಹೈಕೋರ್ಟ್ ಜೂನ್ – 12 ರ ವರೆಗೆ ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ 12 ರ ವರೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿದೆ. ಹೈಕೋರ್ಟ್ ಕೊಟ್ಟ ಗಡುವು ಮುಗಿದ ನಂತರವೂ ಅಳವಡಿಸಿಕೊಂಡಿಲ್ಲ ಎಂದರೆ ಮೊದಲ ಬಾರಿ 500 ರುಪಾಯಿ ಎರಡನೇ ಬಾರಿ 1 ಸಾವಿರ ಮೂರನೇ ಬಾರಿ ಗಾಡಿ ಸೀಜ್ ಮಾಡ್ತಿವಿ ಎಂದು ರಾಜ್ಯ ಸಾರಿಗೆ ಇಲಾಖೆ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಶಾಲೆ ಆರಂಭದ ನಡುವೆ ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ

ಇನ್ನೂ ಈಗಾಗಲೇ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕ ಹತ್ತಿರವಾಗ್ತಿದಂತೆ ವಾಹನ ಮಾಲೀಕರು ಮುಗಿಬಿದ್ದು ಆನ್ಲೈನ್ ಮೂಲಕ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಬುಕ್ಕಿಂಗ್ ಮಾಡಲು ಮುಂದಾಗ್ತಿದ್ದಾರೆ. ಇದರಿಂದ ಸಾಕಷ್ಟು ನಕಲಿ‌ ಕಂಪನಿಗಳು ಹುಟ್ಟಿಕೊಂಡಿದ್ದು ಅಸಲಿ ನಕಲಿ ಗೊತ್ತಾಗದೆ ವಾಹನ ಮಾಲೀಕರು ನಕಲಿ ಕಂಪನಿಗಳಲ್ಲಿ ಹಣ ಹಾಕಿ ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಆರ್ಟಿಓ ಅಧಿಕಾರಿಗಳು ತನಿಖೆ ಮಾಡಿ ಫ್ಯೂಜನ್ ಅನ್ನೋ ನಕಲಿ ಕಂಪನಿ ವಿರುದ್ಧ ಹನುಮಂತನಗರ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಮಾತಾನಾಡಿದ ಟ್ರಾಫಿಕ್ ಎಕ್ಸ್ಪರ್ಟ್ ಶ್ರೀ ಹರಿ ಎರಡ್ಮೂರು ಬಾರಿ ಅವಕಾಶ ಕೊಟ್ಟರು ನಮ್ಮ ಜನರು ಯಾಕೆ ಅಳವಡಿಸಿಕೊಳ್ಳಲು ಮುಂದಾಗಿಲ್ಲ ಅಂತ ಗೊತ್ತಾಗ್ತಿಲ್ಲ ಅಳವಡಿಸದ ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಒಟ್ನಲ್ಲಿ ರಾಜ್ಯ ಸಾರಿಗೆ ಇಲಾಖೆ ಏನೋ ಬೈಕ್ ಕಳ್ಳತನವನ್ನು ತಡೆಗಟ್ಟಲು ಎಲ್ಲಾ ಹಳೆಯ ವಾಹನಗಳಿಗೂ ಹೆಚ್ಎಸ್ಆರ್ಪಿ ಕಡ್ಡಾಯಗೊಳಿಸಿದೆ. ಆದರೆ ಎರಡ್ಮೂರು ಸಲ ಗಡುವು ನೀಡಿದ್ರು ಇಲ್ಲಿಯವರೆಗೆ ಕೇವಲ 41 ಲಕ್ಷ ವಾಹನ ಮಾಲೀಕರು ಮಾತ್ರ ಹಾಕಿಸಿಕೊಂಡಿದ್ದಾರೆ. ಜೂನ್ 12 ರೊಳಗಾದ್ರು ಮಿಕ್ಕವರು ಹಾಕಿಸಿಕೊಳ್ತಾರ ಎಂದು ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್