AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಂಡ ಕಾರ್ಯಪ್ಪಗೆ ಹೈಕೋರ್ಟ್ ಬಲ: ನಾಟಕ ಪ್ರದರ್ಶನದ ವೇಳೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಆದೇಶ

ಗಾಂಧಿ ಹತ್ಯೆಯ ಸತ್ಯ ನಾಟಕ ಪ್ರದರ್ಶನಕ್ಕೆ ಭದ್ರತೆ ಕೋರಿ ಅಡ್ಡಂಡ ಕಾರ್ಯಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರದರ್ಶನ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಾಟಕ ಪ್ರದರ್ಶನದ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಪೂರ್ವ ಮಾಹಿತಿ ನೀಡುವಂತೆ ಅರ್ಜಿದಾರರಿಗೂ ನ್ಯಾಯಪೀಠ ಸೂಚಿಸಿದೆ.

ಅಡ್ಡಂಡ ಕಾರ್ಯಪ್ಪಗೆ ಹೈಕೋರ್ಟ್ ಬಲ: ನಾಟಕ ಪ್ರದರ್ಶನದ ವೇಳೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಆದೇಶ
ಗಾಂಧಿ ಹತ್ಯೆಯ ಸತ್ಯ-ನಾಟಕ ಪ್ರದರ್ಶನ
ರಮೇಶ್​ ಎಮ್​.
| Edited By: |

Updated on: Nov 20, 2026 | 10:30 PM

Share

ಮುಖ್ಯಾಂಶಗಳು

  • ಗಾಂಧಿ ಹತ್ಯೆಯ ಸತ್ಯ-ನಾಟಕ ಪ್ರದರ್ಶನ ವಿಚಾರ
  • ಭದ್ರತೆ ಒದಗಿಸಲು ನಿರ್ದೇಶನ ಕೋರಿ ಅಡ್ಡಂಡ ಕಾರ್ಯಪ್ಪ ಅರ್ಜಿ
  • ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು, ನವೆಂಬರ್​​ 20: ‘ಗಾಂಧಿ ಹತ್ಯೆಯ ಸತ್ಯ’ ನಾಟಕದ ಮುಂದಿನ ಪ್ರದರ್ಶನಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನಾಟಕ ಪ್ರದರ್ಶನ ನಡೆಯುವ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

ಪೊಲೀಸರಿಗೆ ಪೂರ್ವ ಮಾಹಿತಿ ನೀಡಲು ಸೂಚನೆ

ನಾಟಕ ಪ್ರದರ್ಶನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಇದೇ ವೇಳೆ, ನಾಟಕ ಪ್ರದರ್ಶನ ಆಯೋಜಿಸುವ ಸ್ಥಳ ಮತ್ತು ದಿನಾಂಕದ ಕುರಿತು ಮುಂಚಿತವಾಗಿ ಪೊಲೀಸರಿಗೆ ಮಾಹಿತಿ ನೀಡುವಂತೆ ಅರ್ಜಿದಾರ ಅಡ್ಡಂಡ ಕಾರ್ಯಪ್ಪ ಅವರಿಗೆ ನಿರ್ದೇಶನ ನೀಡಿದೆ. ಜಿಲ್ಲಾಡಳಿತಕ್ಕೂ ಪೂರ್ವ ಮಾಹಿತಿ ನೀಡಬೇಕು ಎಂದು ನ್ಯಾಯಾಲಯ ತಿಳಿಸಿದೆ.

LIVE TV

ಮಸಿ ಬಳಿದಿದ್ದರಿಂದ ರದ್ದಾಗಿದ್ದ ನಾಟಕ ಪ್ರದರ್ಶನ

ಬೆಂಗಳೂರಿನ ಬನಶಂಕರಿಯ ಸುಚಿತ್ರಾ ಫಿಲಂ ಅಕಾಡೆಮಿ ರಂಗಮಂದಿರದಲ್ಲಿ ಕಳೆದ ಅಕ್ಟೋಬರ್ 31ರಂದು ‘ಗಾಂಧಿ ಹತ್ಯೆಯ ಸತ್ಯ’ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ ನಾಟಕದ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೆಲವರು ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದಿದ್ದರು. ಘಟನೆಯಿಂದಾಗಿ ಅಂದು ನಾಟಕ ಪ್ರದರ್ಶನ ರದ್ದುಗೊಂಡಿತ್ತು. ಬಳಿಕ ರಾಜ್ಯದ ವಿವಿಧೆಡೆ ಆಯೋಜಿಸಲು ಉದ್ದೇಶಿಸಿದ್ದ ನಾಟಕದ ಮುಂದಿನ ಪ್ರದರ್ಶನಗಳೂ ರದ್ದಾಗಿದ್ದವು.

ಇದನ್ನೂ ಓದಿ: ʻಗಾಂಧಿ ಹತ್ಯೆಯ ಸತ್ಯʼ ನಾಟಕ ಪ್ರದರ್ಶನದ ವೇಳೆ ಅಡ್ಡಂಡ ಕಾರ್ಯಪ್ಪ ಮುಖಕ್ಕೆ ಮಸಿ: ದೂರು-ಪ್ರತಿದೂರು ದಾಖಲು

ಈ ಘಟನೆ ಬಳಿಕ ತಮ್ಮ ಜೀವ, ಆಸ್ತಿ ಮತ್ತು ಸ್ವಾತಂತ್ರ್ಯಕ್ಕೆ ಅಪಾಯವಿರುವುದಾಗಿ ತಿಳಿಸಿದ್ದ ಅಡ್ಡಂಡ ಕಾರ್ಯಪ್ಪ, ಮುಂದಿನ ನಾಟಕ ಪ್ರದರ್ಶನಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ನಾಟಕ ಪ್ರದರ್ಶನದ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ