ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಎಲ್ಲೆಂದರಲ್ಲಿ ಪ್ರತಿಭಟನೆ, ಮೆರವಣಿಗೆಗೆ ನಡೆಸದಂತೆ ನಿರ್ಬಂಧ ಹೇರಿ ಹೈಕೋರ್ಟ್ (High court) ಆದೇಶ ಹೊರಡಿಸಿದೆ. ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ಹಿನ್ನೆಲೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ನ್ನು ಇತ್ಯರ್ಥಪಡಿಸಿದೆ. ನಿಯಮ ಜಾರಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಮುಂದುವರಿಸಬೇಕು. ಪ್ರತಿಭಟನೆ, ಮೆರವಣಿಗೆಗೆ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಹೈಕೋರ್ಟ್ ಆದೇಶದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರದ ಹೇಳಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಯಮ ರೂಪಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ 27 FIR ದಾಖಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೈಕೋರ್ಟ್ ರಾಜ್ಯ ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಂಡಿದೆ.