ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು ನಗರ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರ ಲಂಚ ಬೇಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಬೆಂಗಳೂರು (Bengaluru) ನಗರ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ (J Manjunath) ಅವರ ಲಂಚ ಬೇಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (High Court) ವಜಾಗೊಳಿಸಿದೆ. ನ್ಯಾ.ಕೆ.ನಟರಾಜನ್ರವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಎಫ್ಎಸ್ಎಲ್ನಿಂದ ವರದಿ ಇನ್ನೂ ಬರಬೇಕಿದೆ. ಜಿಲ್ಲಾಧಿಕಾರಿ ಹುದ್ದೆ ದುರ್ಬಳಕೆಯ ಗಂಭೀರ ಆರೋಪವಿದೆ ಎಂದು ಎಸಿಬಿ ಪರ ವಕೀಲ ಪಿ.ಎನ್.ಮನಮೋಹನ್ ವಾದಿಸಿದ್ದಾರೆ.
ಪ್ರಕರಣ ?
ಬೆಂಗಳೂರು ನಗರ ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣ ಸಂಬಂಧ ಭ್ರಷ್ಟಾಚಾರ ಆರೋಪದಲ್ಲಿ IAS ಅಧಿಕಾರಿ ಜೆ.ಮಂಜುನಾಥ್ ಅವರನ್ನು ಯಶವಂತಪುರದಲ್ಲಿರುವ ಅವರ ನಿವಾಸದಲ್ಲಿ ಜುಲೈ 4 ರಂದು ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಾಗ ಭ್ರಷ್ಟಾಚಾರ ಆರೋಪದ ಬಳಿಕ ಮಂಜುನಾಥ್‌ರನ್ನು ಸರ್ಕಾರ ವರ್ಗಾವಣೆಗೊಳಿಸಿತ್ತು. ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ ಆಗಿ ಮಂಜುನಾಥ್ ವರ್ಗಾವಣೆಗೊಂಡಿದ್ದರು.
ಮಂಜುನಾಥ್ ವಿರುದ್ಧ ಭೂವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದಿರುವ ಆರೋಪ ಅವರ ವಿರುದ್ಧ ಕೇಳಿಬಂದಿದ್ದು, ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದಾರೆ.
ಹೈಕೋರ್ಟ್ ತರಾಟೆ ಬೆನ್ನಲ್ಲೇ ಎಸಿಬಿ ಡಿವೈಎಸ್‌ಪಿ ರವಿಶಂಕರ್ ನೇತೃತ್ವದಲ್ಲಿ ಮಂಜುನಾಥ್ ಬಂಧನವಾಗಿದೆ. ಸದ್ಯ ಮಂಜುನಾಥ್‌ರನ್ನು ಎಸಿಬಿ ಕಚೇರಿಗೆ ಕರೆತರಲಾಗುತ್ತು
Published On - 4:25 pm, Wed, 3 August 22