15 ದಿನಗಳಲ್ಲಿ ಬೆಂಗಳೂರಿನ ರಸ್ತೆ ಗುಂಡಿ ದುರಸ್ತಿ ಕಾರ್ಯ ಮಾಡಿ ವರದಿ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ತಾಕೀತು
ಸಿಬಿಡಿ ವ್ಯಾಪ್ತಿಯ ಪ್ರದೇಶ ಗುಂಡಿ ಮುಕ್ತ ಮಾಡಿ ಸಿಜೆ ರಿತುರಾಜ್ ಅವಸ್ತಿ, ನ್ಯಾ.S.R.ಕೃಷ್ಣ ಕುಮಾರ್ರಿದ್ದ ಪೀಠ ಆದೇಶ ನೀಡಿದೆ. ರಸ್ತೆ ಗುಂಡಿಯಿಂದ ಅಶ್ವಿನ್ ಸಾವು ಪ್ರಸ್ತಾಪ ಮಾಡಿದ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ದುರಸ್ತಿಗೆ ಹೈಕೋರ್ಟ್ 15 ದಿನಗಳ ಗಡುವು ನೀಡಿದೆ. 15 ದಿನಗಳಲ್ಲಿ ರಸ್ತೆಗುಂಡಿ ಮುಚ್ಚಲು ಬಿಬಿಎಂಪಿಗೆ(BBMP) ಹೈಕೋರ್ಟ್(High Court) ತಾಕೀತು ನೀಡಿದ್ದು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿ ನೀಡಲು ಸೂಚಿಸಿದೆ. ಸಿಬಿಡಿ ವ್ಯಾಪ್ತಿಯ ಪ್ರದೇಶ ಗುಂಡಿ ಮುಕ್ತ ಮಾಡಿ ಸಿಜೆ ರಿತುರಾಜ್ ಅವಸ್ತಿ, ನ್ಯಾ.S.R.ಕೃಷ್ಣ ಕುಮಾರ್ರಿದ್ದ ಪೀಠ ಆದೇಶ ನೀಡಿದೆ. ರಸ್ತೆ ಗುಂಡಿಯಿಂದ ಅಶ್ವಿನ್ ಸಾವು ಪ್ರಸ್ತಾಪ ಮಾಡಿದ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಕೂಡಲೇ ರಸ್ತೆ ಗುಂಡಿಗಳನ್ನ ಮುಚ್ಚಲು ಆದೇಶಿಸಿದ್ದು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿ ನೀಡಲು ಸೂಚನೆ ನೀಡಿದೆ.
ರಸ್ತೆ ಗುಂಡಿಗೆ ಬಿದ್ದು ಯುವಕ ಬಲಿ ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿ ಆಗಿದೆ. ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ರಸ್ತೆ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಜಲಮಂಡಳಿ ಅಗೆದಿದ್ದ ರಸ್ತೆಗುಂಡಿಗೆ ಬಿದ್ದು ಅಶ್ವಿನ್ ಎಂಬವರಿಗೆ ಗಾಯವಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಶ್ವಿನ್ (27) ಸಾವನ್ನಪ್ಪಿದ್ದಾರೆ. ತಗ್ಗು ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಗುಂಡಿಗೆ ಬಿದ್ದು, ಅಪಘಾತ ಸಂಭವಿಸಿ ಬೈಕ್ ಸವಾರ ಅಶ್ವಿನ್ ಮೃತಪಟ್ಟ ಜಾಗದಲ್ಲಿ ಅಶ್ವಿನ್ ಸ್ನೇಹಿತರು ಜಮಾಯಿಸಿದ್ದಾರೆ. ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಅಂತ ಆಕ್ರೋಶ ಕೇಳಿಬಂದಿದೆ.
ಮಾರ್ಚ್ 13 ರಾತ್ರಿ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ಅಶ್ವಿನ್ ಸಾವನ್ನಪ್ಪಿದ್ದಾರೆ. ಅಶ್ವಿನ್, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ. ತಾಯಿಗೆ ಒಬ್ಬನೇ ಮಗ ಅಶ್ವಿನ್. ಮೂಲತಃ ಹಾವೇರಿಯವರು ಎಂದು ತಿಳಿದುಬಂದಿದೆ.
ಅಲ್ಲದೆ, ಅಪಘಾತ ಸಂಭವಿಸಿ ರಕ್ತದ ಮಡುವಿನಲ್ಲಿ ಬಿದ್ದು, ಒದ್ದಾಡ್ತಿದ್ದರೂ ಆಂಬ್ಯೂಲೆನ್ಸ್ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ. ಒಂದು ಘಂಟೆಯಿಂದ ಆಂಬ್ಯೂಲೆನ್ಸ್ಗೆ ಕಾಲ್ ಮಾಡಿದ್ರೂ ಆಂಬ್ಯೂಲೆನ್ಸ್ ಸ್ಥಳಕ್ಕೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ನಂತರ ಸ್ಥಳೀಯರೇ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡದವರು ದೇಶವಿರೋಧಿಗಳು; ವಿವಾದಾತ್ಮಕ ಹೇಳಿಕೆ ಕೊಟ್ಟ ಶಾಸಕ ರೇಣುಕಾಚಾರ್ಯ