AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಉಳಿದ ಅಭ್ಯರ್ಥಿಗಳ ಆಯ್ಕೆಯನ್ನಷ್ಟೇ ಕೆಎಸ್​ಎಟಿ ಆದೇಶ ಬರುವವರೆಗೆ ಮುಂದೂಡಿರುವ ಹೈಕೋರ್ಟ್ ಶಾಲಾ ಶಿಕ್ಷಕ‌ರಿಗೆ ಬಿಗ್ ರಿಲೀಫ್ ನೀಡಿದೆ.

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಹೈಕೋರ್ಟ್​
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 12, 2023 | 8:51 PM

ಬೆಂಗಳೂರು, ಅ.12: ಪ್ರಾಥಮಿಕ ಶಾಲಾ ಶಿಕ್ಷಕರ(primary school teachers) ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೌದು, ಮುಖ್ಯ ನ್ಯಾಯಾಧೀಶರಾದ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಎಂ.ಜಿ ಎಸ್ ಕಮಲ್​ರಿದ್ದ ಹೈಕೋರ್ಟ್(High Court) ವಿಭಾಗೀಯ ಪೀಠವು,  ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿ ಮಾ.8, 2023 ರ ಆಯ್ಕೆ ಪಟ್ಟಿಯಂತೆ  13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಸೂಚಿಸಿದೆ. 6 ರಿಂದ 8 ನೇ ತರಗತಿಗಳಿಗೆ ಶಿಕ್ಷಕರ ಕೊರತೆ ಇರುವುದನ್ನು ಪರಿಗಣಿಸಿ ಹೈಕೋರ್ಟ್  ಈ ಆದೇಶ ಹೊರಡಿಸಿದೆ.

13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಈ ಹಿಂದೆ ನೇಮಕಾತಿ ಮರುರೂಪಿಸಲು ಸೂಚಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿದೆ. ಮಾರ್ಚ್.8, 2023 ರ ಆಯ್ಕೆಪಟ್ಟಿಯಂತೆ ನೇಮಕಾತಿ ಅಂತಿಮಗೊಳಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣಪತ್ರ ಸಲ್ಲಿಸಿದವರ ಆಯ್ಕೆ ಅಂತಿಮಗೊಳಿಸಲು ಹಾಗೂ ನಿಗದಿತ‌ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶದವರೆಗೆ ಮುಂದೂಡುವಂತೆ ಸೂಚಿಸಿದೆ.‌ ನೊಂದ ಅಭ್ಯರ್ಥಿಗಳು ಕೆಎಸ್ಎಟಿಯಲ್ಲಿ ದಾವೆ ಹೂಡಬಹುದು. ಆ ದಾವೆ ಇತ್ಯರ್ಥವಾಗುವವರೆಗೆ ನಿಗದಿತ ನಮೂನೆಯಲ್ಲಿ ಆದಾಯ ಪ್ರಮಾಣಪತ್ರ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡುವಂತೆ ಸೂಚನೆ ನೀಡಿದೆ.

ಮೊದಲ ಅಯ್ಕೆಪಟ್ಟಿಯಲ್ಲಿದ್ದ 451 ಅಭ್ಯರ್ಥಿಗಳನ್ನು ಜೂನ್.8 2023 ರ ಆಯ್ಕೆಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿತ್ತು . ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಅನ್ವಯಿಸಿ ರೂಪಿಸಿದ ಹೊಸ ನಿಯಮದಡಿ 451 ಅಭ್ಯರ್ಥಿಗಳನ್ನು ಬದಲಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಹೀಗೆ ನೇಮಕದಿಂದ ಹೊರಗುಳಿದ 451 ಅಭ್ಯರ್ಥಿಗಳ ಭವಿಷ್ಯ ಕೆಎಸ್ಎಟಿ ಆದೇಶದ ಬಳಿಕ ನಿರ್ಧಾರವಾಗಲಿದೆ.

ಇದನ್ನೂ ಓದಿ:SJVN Recruitment 2023: 29 ಫೀಲ್ಡ್ ಇಂಜಿನಿಯರ್, ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ವಿವಾದವೇನು ?

ಹಿಂದುಳಿದ ವರ್ಗದ ವಿವಾಹಿತ ಮಹಿಳೆಯನ್ನು ಆಯ್ಕೆಗೆ ಪರಿಗಣಿಸುವಾಗ ಪತಿಯ ಆದಾಯ ಪರಿಗಣನೆಗೆ ಸರ್ಕಾರ ನಿಯಮ ರೂಪಿಸಿತ್ತು. ರಾಜ್ಯ ಸರ್ಕಾರದ ಈ ನೀತಿಯನ್ನು ಏಕಸದಸ್ಯ ಪೀಠ ಅಮಾನ್ಯಗೊಳಿಸಿತ್ತು. ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಲು ಸೂಚಿಸಿತ್ತು. ಇದೀಗ ಏಕಸದಸ್ಯ ಪೀಠದ ಈ ಆದೇಶ ರದ್ದುಪಡಿಸಿದ ಹೈಕೋರ್ಟ್, 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಉಳಿದ ಅಭ್ಯರ್ಥಿಗಳ ಆಯ್ಕೆಯನ್ನಷ್ಟೇ ಕೆಎಸ್​ಎಟಿ ಆದೇಶ ಬರುವವರೆಗೆ ಮುಂದೂಡಿರುವ ಹೈಕೋರ್ಟ್ ಶಾಲಾ ಶಿಕ್ಷಕ‌ರಿಗೆ ಬಿಗ್ ರಿಲೀಫ್ ನೀಡಿದೆ. 6 ರಿಂದ 8 ನೇ ತರಗತಿಗಳಿಗೆ ಶಿಕ್ಷಕರ ಕೊರತೆ ಪರಿಗಣಿಸಿ ಹೈಕೋರ್ಟ್ ಈ ಆದೇಶ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ