ಕೊರೊನಾ ನಿಯಮ ಉಲ್ಲಂಘನೆ; ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ನಿಯಮಗಳನ್ನ ಉಲ್ಲಂಘಿಸಿ ಪಾದಯಾತ್ರೆ ಮಾಡಿದ್ದಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು.

ಕೊರೊನಾ ನಿಯಮ ಉಲ್ಲಂಘನೆ; ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Edited By:

Updated on: Jun 28, 2022 | 4:01 PM

ಬೆಂಗಳೂರು: ಕೊವಿಡ್ ನಿಯಮಾವಳಿ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ (Mekedatu Padayathre) ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ (DK Shivakumar) ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ನ ಒಟ್ಟು 13 ನಾಯಕರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದ ಹಿನ್ನೆಲೆ ಜನವರಿಯಲ್ಲಿ ಸರ್ಕಾರ ಕೆಲ ನಿಯಮಗಳನ್ನ ಜಾರಿಗೊಳಿಸಿತ್ತು. ಹೀಗಿದ್ದರೂ ನಿಯಮಗಳನ್ನ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದರು.

ನಿಯಮಗಳನ್ನ ಉಲ್ಲಂಘಿಸಿ ಪಾದಯಾತ್ರೆ ಮಾಡಿದ್ದಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಕಾಂಗ್ರೆಸ್ ನಾಯಕರ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ ಅನ್ವಯಿಸಬೇಕಿತ್ತು. ಆದರೆ ಎಪಿಡೆಮಿಕ್ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ. ಎಪಿಡೆಮಿಕ್ ಡಿಸೀಸ್ ಕಾಯ್ದೆಯಡಿ ಕೊವಿಡ್ ಅಧಿಸೂಚನೆಯಾಗಿಲ್ಲ. ಸರ್ಕಾರ ಕಾಂಗ್ರೆಸ್ ಪಕ್ಷದ ವಿರುದ್ಧ ತಾರತಮ್ಯ ಎಸಗಿದೆ. ಹೀಗಾಗಿ ಕಾಯ್ದೆ ಅನ್ವಯಿಸಿರುವುದು ಕಾನೂನು ಬಾಹಿರವೆಂದು ಎಂದು ವಾದ ಮಾಡಿದರು.

ಇದನ್ನೂ ಓದಿ
Tanmay Singh: 27 ಸಿಕ್ಸ್​, 19 ಫೋರ್: ರೋಹಿತ್ ಶರ್ಮಾರ ದಾಖಲೆ ಮುರಿದ 15 ವರ್ಷದ ಬ್ಯಾಟ್ಸ್​ಮನ್
ಸ್ನಾತಕೋತ್ತರ ಮತ್ತು ಕಾನೂನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್​ಟಿಸಿ – ಏನಿದರ ವಿವರ?
ಆದೇಶ ಪಾಲಿಸದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ, ಬಿಬಿಎಂಪಿಗೆ ಎಚ್ಚರಿಕೆ ನೀಡಿದ ಹೈಕೋರ್ಟ್
ಕೊಹ್ಲಿಗೆ ಪ್ರಪೋಸ್ ಮಾಡಿದ್ದ ಆಟಗಾರ್ತಿ ಜೊತೆ ಅರ್ಜುನ್ ತೆಂಡೂಲ್ಕರ್ ಡೇಟಿಂಗ್..!

ಇದನ್ನೂ ಓದಿ: ಸ್ನಾತಕೋತ್ತರ ಮತ್ತು ಕಾನೂನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್​ಟಿಸಿ – ಏನಿದರ ವಿವರ?

ವರದಿ ಕೇಳುವ ಬದಲು ಇಡಿ, ಐಟಿಯಿಂದ ತನಿಖೆ ಮಾಡಿಸಬೇಕು- ಡಿಕೆಶಿವಕುಮಾರ್ ಒತ್ತಾಯ:

40 ಪರ್ಸೆಂಟ್ ಕಮಿಷನ್ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರೋಪಿಸಿರುವ ಹಿನ್ನೆಲೆ​ ಪ್ರಧಾನಿ ಕಾರ್ಯಾಲಯ ಸಮಗ್ರ ವರದಿ ಸಲ್ಲಿಸಲು ಸೂಚನೆ ನೀಡಿದೆ. ಈ ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಸುಪ್ರೀಂಕೋರ್ಟ್​ ನ್ಯಾಯಮೂರ್ತಿಯಿಂದ ತನಿಖೆ ಮಾಡಿಸಬೇಕು. ಸರ್ಕಾರದ 40 ಪರ್ಸೆಂಟ್​ ಕಮಿಷನ್​ ಬಗ್ಗೆ ಪತ್ರ ಬರೆದಿದ್ದರು. ಪ್ರಧಾನಮಂತ್ರಿಗಳ ಕಾರ್ಯಾಲಯ ಈಗ ವರದಿ ಕೇಳಿದೆಯಂತೆ. ವರದಿ ಕೇಳುವ ಬದಲು ಇಡಿ, ಐಟಿಯಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೆಲವು ರಾಜಕೀಯ ಪಕ್ಷಗಳಿಂದ ಪುತ್ರ ಅಭಿಷೇಕ್​ಗೆ ಆಫರ್ ಬಂದಿರುವುದು ನಿಜ: ಸಂಸದೆ ಸುಮಲತಾ ಅಂಬರೀಷ್

Published On - 3:55 pm, Tue, 28 June 22