ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಿ: ಕರ್ನಾಟಕ ಹೈಕೋರ್ಟ್ ಸೂಚನೆ

| Updated By: ಗಣಪತಿ ಶರ್ಮ

Updated on: Oct 31, 2023 | 2:45 PM

Kannada Rajyotsava at Chamarajpet Idgah maidan: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಬೇಕು ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮಂಗಳವಾರ​ ಆದೇಶ ಪ್ರಕಟಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಿ: ಕರ್ನಾಟಕ ಹೈಕೋರ್ಟ್ ಸೂಚನೆ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
Follow us on

ಬೆಂಗಳೂರು, ಅಕ್ಟೋಬರ್ 31: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Chamarajpet Idgah maidan) ಕನ್ನಡ ರಾಜ್ಯೋತ್ಸವಕ್ಕೆ (Kannada Rajyotsava) ಅವಕಾಶ ‌‌‌ನೀಡಬೇಕು ಎಂದು ಬೆಂಗಳೂರು ಜಿಲ್ಲಾಡಳಿತ ಹಾಗೂ ಇನ್ನಿತರ ಪ್ರಾಧಿಕಾರಗಳಿಗೆ ಕರ್ನಾಟಕ ಹೈಕೋರ್ಟ್​​ (Karnataka High Court) ಮಂಗಳವಾರ ಸೂಚನೆ ನೀಡಿದೆ. ಇದರೊಂದಿಗೆ, ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸುಗಮವಾದಂತಾಗಿದೆ. ನವೆಂಬರ್ 1ರಿಂದ 3ರ ವರೆಗೆ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಡೆಸಬಹುದು. ಆದರೆ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂಥ ಕಾರ್ಯಕ್ರಮ ನಡೆಸಬಾರದು ಎಂದು ಕೋರ್ಟ್​ ಸೂಚನೆ ನೀಡಿದೆ.

ಇದೇ ವೇಳೆ, ರಾಜ್ಯದ ಧ್ವಜ ಮಾತ್ರ ಹಾರಾಟ ಮಾಡಿಸುವುದಾಗಿ ಅರ್ಜಿದಾರರು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಬೇಕು ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಆದೇಶ ಪ್ರಕಟಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಸಂದರ್ಭ ಕೂಡ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಆಚರಣೆ ಮಾಡುವ ವಿಚಾರವಾಗಿ ಹಿಂದೂ ಪರ ಸಂಘಟನೆಗಳಿಂದ ಆಗ್ರಹ ವ್ಯಕ್ತವಾಗಿತ್ತು. ಪರ-ವಿರೋಧ ಜೋರಾಗಿ ಕೇಳಿಬಂದಿತ್ತು. ಎಲ್ಲವೂ ಒಂದು ಹಂತಕ್ಕೆ ಬಂತು ಎನ್ನುವಷ್ಟರಲ್ಲೇ ಮತ್ತೆ ರಾಜ್ಯೋತ್ಸವ ವಿಚಾರವಾಗಿ ಪ್ರಸ್ತಾಪವಾಗಿದೆ. ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಇದೇ ಮೈದಾನದಿಂದ ಕೂಗಳತೆಯ ದೂರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಿತ್ತು. ಆ ನಂತರದ ಬೆಳವಣಿಗೆಯಲ್ಲಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ!

ಮೂರು ದಿನಗಳ ಕಾಲ ರಾಜ್ಯೋತ್ಸವ ಆಚರಣೆಗೆ ಅವಕಾಶ ಕೊಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಈಗಾಗಲೇ ಮಾನವಿ ಮಾಡಲಾಗಿತ್ತು.‌ ಆದರೆ ಜಿಲ್ಲಾಧಿಕಾರಿಗಳು ಈಗ ಮನವಿ ತಿರಸ್ಕರಿಸಿದ್ದರು. ಇದರಿಂದ ಕೆರಳಿದ ಚಾಮರಾಜಪೇಟೆ ನಾಗರಿಕ ಒಕ್ಕೂಟವು ನ್ಯಾಯಾಲಯದ​ ಮೊರೆ ಹೋಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Tue, 31 October 23