ಡೆಂಘೀ ಹಾವಳಿ ತಡೆಗೆ ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 07, 2024 | 6:03 PM

ಕರ್ನಾಟಕದಲ್ಲಿ ಡೆಂಘೀ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ಜೊತೆಗೆ ಕಸದ ಸಮಸ್ಯೆ ಕೂಡ ಡೆಂಘೀ ಇನ್ನಿತರ ವೈರಲ್ ರೋಗಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಕಸದ‌ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಕೊಡಬೇಕು ಎಂದು ತಿಳಿಸಿದೆ.

ಡೆಂಘೀ ಹಾವಳಿ ತಡೆಗೆ ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ
ಡೆಂಘೀ ಹಾವಳಿ ತಡೆಗೆ ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ
Follow us on

ಬೆಂಗಳೂರು, ಆ.07: ರಾಜ್ಯದಲ್ಲಿ ಡೆಂಘೀ(Dengue) ಹಾವಳಿ ತಡೆಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್(High Court) ಖಡಕ್ ಸೂಚನೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ 13,754 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಕೇವಲ 51 ಹಾಟ್ ಸ್ಪಾಟ್ ಇದೆ ಎಂದು ಬಿಬಿಎಂಪಿ ಹೇಳುತ್ತಿದೆ. ಇನ್ನು ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಿದೆ. ಹೀಗಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಗೆ ಕ್ರಮ ಕೈಗೊಳ್ಳಬೇಕು.

ಸೊಳ್ಳೆ ಸಂತಾನೋತ್ಪತ್ತಿ ಪರಿಸರ ಸೃಷ್ಟಿಸಿದವರಿಗೆ ದಂಡ

ಸೊಳ್ಳೆ ಸಂತಾನೋತ್ಪತ್ತಿ ಪರಿಸರ ಸೃಷ್ಟಿಸಿದವರಿಗೆ ದಂಡ ವಿಧಿಸಬೇಕು. ಜೊತೆಗೆ ಸೊಳ್ಳೆ ಹೆಚ್ಚದಂತೆ ತಡೆಯಲು ಕೈಗೊಂಡ ಕ್ರಮದ‌ ಬಗ್ಗೆ ಮಾಹಿತಿ ನೀಡಬೇಕು. ಏರಿಯಾವಾರು, ವಾರ್ಡ್ ವಾರು ಸೊಳ್ಳೆ ಸಂತಾನೋತ್ಪತ್ತಿ ಪತ್ತೆ ಹಚ್ಚಬೇಕು. ಕಸದ ಸಮಸ್ಯೆ ಕೂಡ ಡೆಂಘೀ ಇನ್ನಿತರ ವೈರಲ್ ರೋಗಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಕಸದ‌ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮದ ಬಗ್ಗೆ ಆಗಸ್ಟ್ 28 ರೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ 18 ವರ್ಷಕ್ಕಿಂತ ಕೆಳ ವಯಸ್ಸಿನವರಲ್ಲಿಯೇ ಡೆಂಘೀ ಜ್ವರ ಪತ್ತೆ! ಮುಂಜಾಗ್ರತಾ ಕ್ರಮಗಳು ಇಲ್ಲಿವೆ

ಇನ್ನು ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಇದುವರೆಗೂ ವಿವಿಧ ಜಿಲ್ಲೆಗಳಲ್ಲಿ 10 ಜನ ಡೆಂಗ್ಯೂವಿಗೆ ಬಲಿಯಾಗಿದ್ದಾರೆ. ಜೊತೆಗೆ ಪ್ರತಿನಿತ್ಯ 300ರ ಸನಿಹಕ್ಕೆ ಕೇಸ್​ಗಳು ದಾಖಲಾಗುತ್ತಿವೆ. ಇನ್ನೂ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಮುಂಜಾಗ್ರತೆಯನ್ನು ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಮೀಸಲು ಇಟ್ಟಿದೆ. ಜೊತೆಗೆ ಮನೆ ಮನೆಗೆ ತೆರಳಿ ಸರ್ವೆ ಮಾಡಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Wed, 7 August 24