Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapido Bike Taxi: ಬೈಕ್ ಟ್ಯಾಕ್ಸಿ ಚಾಲಕರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ; ಹೈಕೋರ್ಟ್ ಆದೇಶ

ಬೈಕ್ ಟ್ಯಾಕ್ಸಿ (Rapido Bike Taxi) ಚಾಲಕರ ಕರ್ತವ್ಯಕ್ಕೆ ಆಟೋ ಮತ್ತು ಟ್ಯಾಕ್ಸಿ ಚಾಲಕರು ಅಡ್ಡಿಪಡಿಸಿ ಹಲ್ಲೆ ನಡೆಸಿದ ಹಿನ್ನಲೆ ಬೈಕ್​​ ಟ್ಯಾಕ್ಸಿ ಚಾಲಕರು ಹೈಕೋರ್ಟ್​ಗೆ ರಿಟ್​​ ಅರ್ಜಿ ಸಲ್ಲಿಸಿದ್ದರು. ಇದೀಗ ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಿ ಎಂದು ಗೃಹ ಇಲಾಖೆಗೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

Rapido Bike Taxi: ಬೈಕ್ ಟ್ಯಾಕ್ಸಿ ಚಾಲಕರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ; ಹೈಕೋರ್ಟ್ ಆದೇಶ
ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಎಂದು ಹೈಕೋರ್ಟ್ ಆದೇಶಿಸಿದೆ
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 24, 2024 | 9:15 PM

ಬೆಂಗಳೂರು, ಏ.24: ಬೈಕ್ ಟ್ಯಾಕ್ಸಿ ಚಾಲಕರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರಿಂದ ಹಲ್ಲೆ ಹಿನ್ನೆಲೆ ಬೈಕ್ ಟ್ಯಾಕ್ಸಿ (Rapido Bike Taxi) ಚಾಲಕರು ಹೈಕೋರ್ಟ್​(High Court)ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಕ್ರಮಕೈಗೊಳ್ಳದಂತೆ ಆದೇಶವಿದೆ. ಜೊತೆಗೆ ಹೈಕೋರ್ಟ್ ಮಧ್ಯಂತರ ಆದೇಶವಿದ್ದರೂ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಎಂದು ಆರೋಪ ಮಾಡಿದ್ದರು. ಇದೀಗ ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಿ ಎಂದು ಗೃಹ ಇಲಾಖೆಗೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನ ಆಟೋ ಚಾಲಕರ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವಿನ ಹಗ್ಗಜಗ್ಗಾಟ ಸರ್ಕಾರದ ತಲೆಬಿಸಿಯನ್ನು ಹೆಚ್ಚಿಸಿತ್ತು. ಒಂದೆಡೆ ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಬೆಂಗಳೂರು ಆಟೋ ಚಾಲಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದರೆ, ಇನ್ನೊಂದೆಡೆ, ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿ ನಡೆಸುವ ಮೂಲಕ ಆಟೋ ಚಾಲಕರಿಗೆ ಕೌಂಟರ್ ಕೊಟ್ಟಿದ್ದರು.

ಇದನ್ನೂ ಓದಿ: ಆಟೋರಿಕ್ಷಾ ಚಾಲಕರಿಂದ ದೈಹಿಕ ಹಲ್ಲೆ ನಡೆಯುತ್ತಿದೆ ಎಂದು ಬೈಕ್ ಟ್ಯಾಕ್ಸಿ ಸಂಘದ ಪದಾಧಿಕಾರಿಗಳ ಅರೋಪ

ಆಟೋ ಚಾಲಕರಿಂದ ಬೈಕ್ ಟ್ಯಾಕ್ಸಿ ಚಾಲಕರಿಗೆ​ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗಾಗಿ ಒತ್ತಾಯಿಸಿ ಸಾವಿರಾರು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿ ಸರ್ಕಾರವನ್ನು ಒತ್ತಾಯಿಸಿದ್ದರು. ಇದೀಗ ಹೈಕೋರ್ಟ್​ ಮಹತ್ವದ ಆದೇಶ ಹೊರಡಿಸಿದ್ದು, ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಲು ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Wed, 24 April 24

ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್