Rapido Bike Taxi: ಬೈಕ್ ಟ್ಯಾಕ್ಸಿ ಚಾಲಕರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ; ಹೈಕೋರ್ಟ್ ಆದೇಶ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 24, 2024 | 9:15 PM

ಬೈಕ್ ಟ್ಯಾಕ್ಸಿ (Rapido Bike Taxi) ಚಾಲಕರ ಕರ್ತವ್ಯಕ್ಕೆ ಆಟೋ ಮತ್ತು ಟ್ಯಾಕ್ಸಿ ಚಾಲಕರು ಅಡ್ಡಿಪಡಿಸಿ ಹಲ್ಲೆ ನಡೆಸಿದ ಹಿನ್ನಲೆ ಬೈಕ್​​ ಟ್ಯಾಕ್ಸಿ ಚಾಲಕರು ಹೈಕೋರ್ಟ್​ಗೆ ರಿಟ್​​ ಅರ್ಜಿ ಸಲ್ಲಿಸಿದ್ದರು. ಇದೀಗ ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಿ ಎಂದು ಗೃಹ ಇಲಾಖೆಗೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

Rapido Bike Taxi: ಬೈಕ್ ಟ್ಯಾಕ್ಸಿ ಚಾಲಕರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ; ಹೈಕೋರ್ಟ್ ಆದೇಶ
ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಎಂದು ಹೈಕೋರ್ಟ್ ಆದೇಶಿಸಿದೆ
Follow us on

ಬೆಂಗಳೂರು, ಏ.24: ಬೈಕ್ ಟ್ಯಾಕ್ಸಿ ಚಾಲಕರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರಿಂದ ಹಲ್ಲೆ ಹಿನ್ನೆಲೆ ಬೈಕ್ ಟ್ಯಾಕ್ಸಿ
(Rapido Bike Taxi) ಚಾಲಕರು ಹೈಕೋರ್ಟ್​(High Court)ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಕ್ರಮಕೈಗೊಳ್ಳದಂತೆ ಆದೇಶವಿದೆ. ಜೊತೆಗೆ ಹೈಕೋರ್ಟ್ ಮಧ್ಯಂತರ ಆದೇಶವಿದ್ದರೂ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಎಂದು ಆರೋಪ ಮಾಡಿದ್ದರು. ಇದೀಗ ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಿ ಎಂದು ಗೃಹ ಇಲಾಖೆಗೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನ ಆಟೋ ಚಾಲಕರ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವಿನ ಹಗ್ಗಜಗ್ಗಾಟ ಸರ್ಕಾರದ ತಲೆಬಿಸಿಯನ್ನು ಹೆಚ್ಚಿಸಿತ್ತು. ಒಂದೆಡೆ ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಬೆಂಗಳೂರು ಆಟೋ ಚಾಲಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದರೆ, ಇನ್ನೊಂದೆಡೆ, ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿ ನಡೆಸುವ ಮೂಲಕ ಆಟೋ ಚಾಲಕರಿಗೆ ಕೌಂಟರ್ ಕೊಟ್ಟಿದ್ದರು.

ಇದನ್ನೂ ಓದಿ: ಆಟೋರಿಕ್ಷಾ ಚಾಲಕರಿಂದ ದೈಹಿಕ ಹಲ್ಲೆ ನಡೆಯುತ್ತಿದೆ ಎಂದು ಬೈಕ್ ಟ್ಯಾಕ್ಸಿ ಸಂಘದ ಪದಾಧಿಕಾರಿಗಳ ಅರೋಪ

ಆಟೋ ಚಾಲಕರಿಂದ ಬೈಕ್ ಟ್ಯಾಕ್ಸಿ ಚಾಲಕರಿಗೆ​ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗಾಗಿ ಒತ್ತಾಯಿಸಿ ಸಾವಿರಾರು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿ ಸರ್ಕಾರವನ್ನು ಒತ್ತಾಯಿಸಿದ್ದರು. ಇದೀಗ ಹೈಕೋರ್ಟ್​ ಮಹತ್ವದ ಆದೇಶ ಹೊರಡಿಸಿದ್ದು, ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಲು ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Wed, 24 April 24