ಆರ್‌ಡಿಪಿಆರ್‌ ಇಲಾಖೆಯಲ್ಲಿ 269 ಕೋಟಿ ರೂ. ನಷ್ಟ: ಐಎಎಸ್‌ ಅಧಿಕಾರಿಗಳ ವಿರುದ್ಧದ ತನಿಖೆ ರದ್ದುಪಡಿಸಿದ ಹೈಕೋರ್ಟ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಲಾಖೆಗೆ 269 ಕೋಟಿ ರೂ. ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್​ ತಡೆ ನೀಡಿದೆ.

ಆರ್‌ಡಿಪಿಆರ್‌ ಇಲಾಖೆಯಲ್ಲಿ 269 ಕೋಟಿ ರೂ. ನಷ್ಟ: ಐಎಎಸ್‌ ಅಧಿಕಾರಿಗಳ ವಿರುದ್ಧದ ತನಿಖೆ ರದ್ದುಪಡಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: ವಿವೇಕ ಬಿರಾದಾರ

Updated on: Sep 13, 2023 | 2:58 PM

ಬೆಂಗಳೂರು ಸೆ.13: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಇಲಾಖೆಗೆ 269 ಕೋಟಿ ರೂ. ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ (IAS)​ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್​ (High Court) ತಡೆ ನೀಡಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಅಮಿತಾ ಪ್ರಸಾದ್, ಡಾ.ಇ.ವಿ.ರಮಣರೆಡ್ಡಿ ಅವರ ವಿರುದ್ಧ ಇಲಾಖೆಯ ಹಣವನ್ನು ದುರ್ವಿನಿಯೋಗ ಮಾಡಿಕೊಂಡ  ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆಗೆ ಸರ್ಕಾರದ ಪೂರ್ವಾನುಮತಿ ಇಲ್ಲದ ಹಿನ್ನೆಲೆಯಲ್ಲಿ ಹೈಕೋರ್ಟ್​​ ಕೇಸ್ ರದ್ದು ಮಾಡಿದೆ.

ಪ್ರಕರಣದ ಹಿನ್ನೆಲೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಈ ಮೂವರು ಐಎಎಸ್​ ಅಧಿಕಾರಿಗಳು ಅಧಿಕಾರಿಗಳು, 2009-10ರಿಂದ 2014- 15ರ ನಡುವೆ ಆರ್‌ಡಿಪಿಆರ್‌ ಇಲಾಖೆಯ ಹಣವನ್ನು ಬ್ಯಾಂಕ್​​ನಲ್ಲಿ ಠೇವಣಿ(FD) ಮಾಡದೇ ಒಪ್ಪಂದದ ನಿಯಮಗಳಿಗೆ ವಿರುದ್ಧವಾಗಿ ದುರ್ವಿನಿಯೋಗ ಮಾಡಿಕೊಂಡಿದ್ದಾರೆ ಎಂದು ಕೋಲಾರದ ಮಾಸ್ತಿ ಲೇಔಟ್‌ನ ಸಾಮಾಜಿಕ ಕಾರ್ಯಕರ್ತ ಎಸ್.ನಾರಾಯಣಸ್ವಾಮಿ ದೂರು ನೀಡಿದ್ದರು.

ಇದನ್ನೂ ಓದಿ: ವಿದೇಶ ಪ್ರವಾಸ ಖರ್ಚನ್ನು ಶಾಸಕರ ಭತ್ಯೆಯಿಂದ ಕಡಿತಗೊಳಿಸಲು ಆದೇಶ, ಇದನ್ನು ಪ್ರಶ್ನಿಸಿದ ಹೈಕೋರ್ಟ್​ ಮೊರೆ ಹೊಗಿದ್ದ ಮಾಜಿ ಶಾಸಕರಿಗೆ ಹಿನ್ನೆಡೆ

ಇವರ ಜೊತೆ ಬ್ಯಾಂಕ್ ಮ್ಯಾನೇಜರ್ ಕೂಡಾ ಒಪ್ಪಂದದ ನಿಯಮಗಳಿಗೆ ವಿರುದ್ಧವಾಗಿ 98 ಖಾತೆಗಳನ್ನು ತೆರೆದಿದ್ದಾರೆ. ಈ ಮೂಲಕ 269 ಕೋಟಿ ರೂ. ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣದ ತನಿಖೆಗೆ ಎಸಿಬಿಗೆ ನಿರ್ದೇಶನ ನೀಡಿದ್ದರು.

ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸುವಂತೆ ಕೋರಿ ನಿವೃತ್ತ ಐಎಎಸ್ ಅಧಿಕಾರಿ ಅಮಿತಾ ಪ್ರಸಾದ್, ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತು ಹಾಲಿ ಐಎಎಸ್ ಅಧಿಕಾರಿ ಡಾ.ಇ.ವಿ.ರಮಣರೆಡ್ಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್, ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು